AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಗೆಲುವು ಮರೀಚಿಕೆ: ಮೊದಲ ಜಯ ತಂದುಕೊಡಲಿದ್ದಾರಾ ರಿಷಭ್ ಪಂತ್?

IND vs SA: ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ದದ ಮೂರನೇ ಟಿ20 ಪಂದ್ಯವಾಡಲು ಸಜ್ಜಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ರಿಭಷ್ ಪಂತ್ ಭಾರತ ತಂಡಕ್ಕೆ ಮೊದಲ ಗೆಲುವು ತಂದುಕೊಡಲಿದ್ದಾರಾ?

ಟೀಮ್ ಇಂಡಿಯಾ ಗೆಲುವು ಮರೀಚಿಕೆ: ಮೊದಲ ಜಯ ತಂದುಕೊಡಲಿದ್ದಾರಾ ರಿಷಭ್ ಪಂತ್?
Rishabh Pant
TV9 Web
| Updated By: ಝಾಹಿರ್ ಯೂಸುಫ್|

Updated on:Jun 14, 2022 | 4:38 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA 3rd T20) ನಡುವಿನ ಐದು ಟಿ20 ಸರಣಿಯ ಮೂರನೇ ಪಂದ್ಯ ಮಂಗಳವಾರ (ಜೂನ್ 14) ವಿಶಾಖಪಟ್ಟಣದಲ್ಲಿ ನಡೆಯಲಿದೆ. ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋತಿದೆ. ವಿಶಾಖಪಟ್ಟಣಂನಲ್ಲೂ ಸೋಲು ಕಂಡರೆ ಸರಣಿ ಕೈ ತಪ್ಪಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾಗೆ ನಿಯಮಿತ ನಾಯಕ ರೋಹಿತ್ ಶರ್ಮಾ ಅಲಭ್ಯತೆಯನ್ನು ಕಾಡುತ್ತಿರುವುದು ಸ್ಪಷ್ಟ. ಏಕೆಂದರೆ ಅವರ ಸ್ಥಾನಕ್ಕೆ ಕೆಎಲ್ ರಾಹುಲ್ ಅವರನ್ನು ಈ ಸರಣಿಗೆ ಭಾರತ ತಂಡದ ನಾಯಕರನ್ನಾಗಿ ಮಾಡಲಾಯಿತು. ಆದರೆ, ಮೊದಲ ಟಿ20ಗೂ ಮುನ್ನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದಿದ್ದರು. ಹೀಗಾಗಿ ರಿಷಭ್ ಪಂತ್​ಗೆ ನಾಯಕತ್ವ ನೀಡಲಾಗಿದೆ. ಆದರೆ, ಅವರಿಂದಲೂ ಟೀಮ್ ಇಂಡಿಯಾಗೆ ಗೆಲುವನ್ನು ತಂದು ಕೊಡಲು ಸಾಧ್ಯವಾಗಲಿಲ್ಲ.

ಟೀಮ್ ಇಂಡಿಯಾಗೆ ನಾಯಕನಾಗಿ ರೋಹಿತ್ ಶರ್ಮಾ ಏಕೆ ಮುಖ್ಯ? ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡ ಈ ವರ್ಷ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಹಾಗೆಯೇ ರೋಹಿತ್ ಶರ್ಮಾ ಈ ವರ್ಷ ನಾಯಕನಾಗಿ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಅವರ ಅನುಪಸ್ಥಿತಿಯಲ್ಲಿ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಈ ವರ್ಷ ಟೀಮ್ ಇಂಡಿಯಾದ ನಾಯಕತ್ವವನ್ನು ವಹಿಸಿದ್ದಾರೆ. ಆದರೆ, ಅವರ ನಾಯಕತ್ವದಲ್ಲಿ ಭಾರತಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಅದೇ ಸಮಯದಲ್ಲಿ, ರಿಷಬ್ ಪಂತ್ ಕೂಡ ನಾಯಕನಾಗಿ ಎರಡೂ ಪಂದ್ಯಗಳನ್ನು ಸೋತಿದ್ದಾರೆ.

ಈ ವರ್ಷದ ಆರಂಭದಲ್ಲಿ, ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿತ್ತು. ಜನವರಿ ಮೊದಲ ವಾರದಲ್ಲಿ, ಜೋಹಾನ್ಸ್‌ಬರ್ಗ್‌ನಲ್ಲಿ ಟೆಸ್ಟ್ ಸರಣಿಯ ಎರಡನೇ ಪಂದ್ಯವನ್ನು ಆಡಲಾಯಿತು. ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರು ವಿರಾಟ್ ಕೊಹ್ಲಿ ಗಾಯದ ಕಾರಣ ನಾಯಕತ್ವ ವಹಿಸಿದ್ದರು. ಅವರ ನಾಯಕತ್ವದಲ್ಲಿ ಭಾರತ ಈ ಟೆಸ್ಟ್‌ನಲ್ಲಿ 7 ವಿಕೆಟ್‌ಗಳಿಂದ ಸೋತಿತು. ಕೇಪ್ ಟೌನ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ವಿರಾಟ್ ನಾಯಕನಾಗಿ ಮರಳಿದರು. ಆದರೆ ಆ ಪಂದ್ಯದಲ್ಲೂ ಟೀಮ್ ಇಂಡಿಯಾ ಸೋಲನುಭವಿಸಿ ಸರಣಿಯನ್ನು ಕಳೆದುಕೊಂಡಿತು. ಈ ಸೋಲಿನೊಂದಿಗೆ ಭಾರತದ ನಾಯಕನಾಗಿ ವಿರಾಟ್ ಪ್ರಯಾಣವೂ ಅಂತ್ಯವಾಗಿತ್ತು.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಇದರ ನಂತರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆದವು. ಇದರಲ್ಲಿ ಕೆಎಲ್ ರಾಹುಲ್ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. ಆದರೆ ಸೌತ್ ಆಫ್ರಿಕಾ ಎಲ್ಲಾ ಮೂರು ಏಕದಿನ ಪಂದ್ಯಗಳಲ್ಲಿ ಗೆದ್ದುಕೊಂಡಿತು. ಅಂದರೆ ಕೆಎಲ್ ರಾಹುಲ್ ನಾಯಕತ್ವದಲ್ಲಿ ಭಾರತ ತಂಡದ ಸೌತ್ ಆಫ್ರಿಕಾ ಪ್ರವಾಸದಲ್ಲಿ 4 ಪಂದ್ಯಗಳನ್ನು ಆಡಿದ್ದು, ನಾಲ್ಕರಲ್ಲಿ ಸೋತಿದೆ.

ಅದೇ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತವು ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್​ ವಿರುದ್ದ 3 ಏಕದಿನ ಪಂದ್ಯ ಹಾಗೂ ಟಿ20 ಪಂದ್ಯಗಳನ್ನು ಆಡಿದೆ. ಈ ಸರಣಿಯನ್ನು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿತ್ತು. ಇದಾದ ಬಳಿಕ ರೋಹಿತ್ ನಾಯಕತ್ವದಲ್ಲಿ ಭಾರತ ತಂಡ ಶ್ರೀಲಂಕಾಕ್ಕೆ ಆತಿಥ್ಯ ವಹಿಸಿತ್ತು. ಈ ಸರಣಿಯನ್ನೂ ಭಾರತ ತಂಡವು ಭರ್ಜರಿ ಜಯ ಸಾಧಿಸಿತು. ಅಂದರೆ, ರೋಹಿತ್ ಈ ವರ್ಷ ಎಲ್ಲಾ ಮೂರು ಸ್ವರೂಪಗಳಲ್ಲಿ ಒಟ್ಟು 11 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದರು. ಅಲ್ಲದೆ ಆ 11 ಪಂದ್ಯಗಳನ್ನು ಭಾರತ ತಂಡ ಗೆದ್ದುಕೊಂಡಿದೆ.

ಇದೀಗ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ದದ ಮೂರನೇ ಟಿ20 ಪಂದ್ಯವಾಡಲು ಸಜ್ಜಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ರಿಷಭ್ ಪಂತ್ ಭಾರತ ತಂಡಕ್ಕೆ ಮೊದಲ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:05 pm, Tue, 14 June 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್