AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಮಾರ್ಕ್ರಾಮ್ ಶತಕ, ಬುಮ್ರಾಗೆ 6 ವಿಕೆಟ್; ಭಾರತದ ಗೆಲುವಿಗೆ 79 ರನ್ ಟಾರ್ಗೆಟ್

IND vs SA: ಕೇಪ್ ಟೌನ್​ನ ನ್ಯೂಲ್ಯಾಂಡ್ಸ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಆಫ್ರಿಕಾ ತಂಡ 176 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತಕ್ಕೆ 79 ರನ್​ಗಳ ಗೆಲುವಿನ ಗುರಿ ನೀಡಿದೆ.

Breaking: ಮಾರ್ಕ್ರಾಮ್ ಶತಕ, ಬುಮ್ರಾಗೆ 6 ವಿಕೆಟ್; ಭಾರತದ ಗೆಲುವಿಗೆ 79 ರನ್ ಟಾರ್ಗೆಟ್
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Jan 04, 2024 | 4:05 PM

Share

ಕೇಪ್ ಟೌನ್​ನ ನ್ಯೂಲ್ಯಾಂಡ್ಸ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಆಫ್ರಿಕಾ ತಂಡ 176 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತಕ್ಕೆ 79 ರನ್​ಗಳ ಗೆಲುವಿನ ಗುರಿ ನೀಡಿದೆ. ದಕ್ಷಿಣ ಆಫ್ರಿಕಾ ಪರ ಎರಡನೇ ಇನ್ನಿಂಗ್ಸ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆರಂಭಿಕ ಐಡೆನ್ ಮಾರ್ಕ್ರಾಮ್ (Aiden Markram) ಶತಕ ಸಿಡಿಸಿ ಮಿಂಚಿದರು. ಅವರನ್ನು ಹೊರತುಪಡಿಸಿದರೆ ತಂಡದ ಮತ್ತ್ಯಾವ ಆಟಗಾರನಿಂದಲೂ ಹೇಳಿಕೊಳ್ಳುವಂತಹ ಪ್ರದರ್ಶನ ಹೊರಬರಲಿಲ್ಲ. ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಮಿಂಚಿದ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) 6 ವಿಕೆಟ್ ಪಡೆದರೆ, ಮುಖೇಶ್ ಕುಮಾರ್ ಪ್ರಮುಖ 2 ವಿಕೆಟ್ ಪಡೆದರು.

3 ವಿಕೆಟ್ ನಷ್ಟಕ್ಕೆ 36 ರನ್​ಗಳ ಹಿನ್ನಡೆಯೊಂದಿಗೆ ಎರಡನೇ ದಿನದಾಟವನ್ನು ಆರಂಭಿಸಿದ ಆಫ್ರಿಕಾ ತಂಡಕ್ಕೆ ಏಡನ್ ಮಾರ್ಕ್ರಾಮ್ ಮತ್ತು ಡೇವಿಡ್ ಬೆಡಿಂಗ್‌ಹ್ಯಾಮ್ 62 ರನ್‌ಗಳ ಜೊತೆಯಾಟ ನೀಡಿದರು. ಆದರೆ ಆ ಬಳಿಕ ಟೀಂ ಇಂಡಿಯಾದ ಬೌಲರ್‌ಗಳು ನಿಗದಿತ ಅಂತರದಲ್ಲಿ ವಿಕೆಟ್ ತೆಗೆಯುವ ಮೂಲಕ ದಕ್ಷಿಣ ಆಫ್ರಿಕಾವನ್ನು ಬೇಗನೇ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಟೀಂ ಇಂಡಿಯಾ ಪರ ಬುಮ್ರಾ ಅಲ್ಲದೆ ಮುಖೇಶ್ ಕುಮಾರ್ 2 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ತಲಾ 1 ವಿಕೆಟ್ ಪಡೆದರು.

ಡಿಆರ್‌ಎಸ್ ದುರ್ಬಳಕೆಗೆ ಬ್ರೇಕ್; ಸ್ಟಂಪಿಂಗ್ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿದ ಐಸಿಸಿ..!

ಕೆಎಲ್ ರಾಹುಲ್ ಎಡವಟ್ಟು

ಏತನ್ಮಧ್ಯೆ ವಿಕೆಟ್ ಕೀಪರ್ ಕೆಎಲ್ ರಾಹುಲ್ ಮಾಡಿದ ತಪ್ಪಿನಿಂದ ಟೀಂ ಇಂಡಿಯಾ 32 ರನ್​ಗಳನ್ನು ಹೆಚ್ಚುವರಿಯಾಗಿ ನೀಡಬೇಕಾಯಿತು. ದಕ್ಷಿಣ ಆಫ್ರಿಕಾದ ವಿಕೆಟ್‌ಗಳು ಒಂದಂರ ಹಿಂದೆ ಒಂದರಂತೆ ಉದುರುತ್ತಿದ್ದವು. ಹಾಗಾಗಿ ಟೀಂ ಇಂಡಿಯಾಗೆ ಸಾಧಾರಣ ಸವಾಲು ಎದುರಾಗುವ ಚಿತ್ರಣವಿತ್ತು. ಆದರೆ ಏಡನ್ ಮಾರ್ಕ್ರಾಮ್ ಒಂದು ಕಡೆ ಬಿರುಸಿನ ಬ್ಯಾಟಿಂಗ್ ಮಾಡುತ್ತಿದ್ದರು. ಹೀಗಾಗಿ ಏಡನ್ ಮಾರ್ಕ್ರಾಮ್ ಅವರನ್ನು ಔಟ್ ಮಾಡಲು ಟೀಂ ಇಂಡಿಯಾ ಪ್ರಯತ್ನಿಸುತ್ತಿತ್ತು. ಟೀಂ ಇಂಡಿಯಾಗೆ ಆ ಅವಕಾಶವೂ ಸಿಕ್ಕಿತು. ಆದರೆ ಕೆಎಲ್ ರಾಹುಲ್ ಆ ಅವಕಾಶವನ್ನು ಮಿಸ್ ಮಾಡಿದರು.

ಬುಮ್ರಾ ಬೌಲಿಂಗ್‌ನಲ್ಲಿ ಏಡನ್ ಮಾರ್ಕ್ರಾಮ್ ನೀಡಿದ ಸುಲಭದ ಕ್ಯಾಚ್ ಅನ್ನು ರಾಹುಲ್ ಕೈಬಿಟ್ಟರು. ಆಗ ಏಡನ್ 74 ರನ್ ಗಳಿಸಿ ಆಡುತ್ತಿದ್ದರು. ಆದರೆ ಐಡೆನ್ ಈ ಜೀವದಾನದ ಲಾಭವನ್ನು ಪಡೆದುಕೊಂಡು 2024 ರಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಅಂತಿಮವಾಗಿ ಏಡನ್ 106 ರನ್ ಗಳಿಸಿ ಸಿರಾಜ್​ಗೆ ಬಲಿಯಾದರು. ಹಾಗಾಗಿ ಕೆಎಲ್‌ ರಾಹುಲ್ ಕ್ಯಾಚ್ ಕೈಬಿಟ್ಟಿದ್ದರಿಂದ ಟೀಂ ಇಂಡಿಯಾ 32 ರನ್‌ಗಳನ್ನು ಹೆಚ್ಚುವರಿ ಗುರಿಯಾಗಿ ಪಡೆಯಬೇಕಾಯಿತು. ಒಂದು ವೇಳೆ ರಾಹುಲ್ ಕ್ಯಾಚ್ ಪಡೆದಿದ್ದರೆ ಗೆಲುವಿನ ಅಂತರ ಇನ್ನಷ್ಟು ರನ್ ಕಡಿಮೆಯಾಗುತ್ತಿತ್ತು.

ಉಭಯ ತಂಡಗಳು

ದಕ್ಷಿಣ ಆಫ್ರಿಕಾ: ಡೀನ್ ಎಲ್ಗರ್ (ನಾಯಕ), ಏಡೆನ್ ಮಾರ್ಕ್ರಾಮ್, ಟೋನಿ ಡಿ ಜೊರ್ಜಿ, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಬೆಡಿಂಗ್ಹ್ಯಾಮ್, ಕೈಲ್ ವೆರೆನ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ನಾಂದ್ರೆ ಬರ್ಗರ್, ಲುಂಗಿ ಎನ್ಗಿಡಿ.

ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Thu, 4 January 24

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ