KL Rahul: ಒಂದು ಶತಕದೊಂದಿಗೆ ಹಲವು ದಾಖಲೆ ಬರೆದ ಕೆಎಲ್ ರಾಹುಲ್

KL Rahul Records: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಕೆಎಲ್ ರಾಹುಲ್ (101) ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 245 ರನ್​ ಕಲೆಹಾಕಿತು. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡದ ಪರ ಆರಂಭಿಕ ಆಟಗಾರ ಡೀನ್ ಎಲ್ಗರ್ (140) ಅಜೇಯ ಶತಕ ಸಿಡಿಸಿದ್ದಾರೆ.

KL Rahul: ಒಂದು ಶತಕದೊಂದಿಗೆ ಹಲವು ದಾಖಲೆ ಬರೆದ ಕೆಎಲ್ ರಾಹುಲ್
Sachin-Rahul-Virat
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 28, 2023 | 12:21 PM

ಸೆಂಚುರಿಯನ್ ಮೈದಾನದಲ್ಲಿ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಸೆಂಚುರಿ ಸಿಡಿಸಿದ ಕೆಎಲ್ ರಾಹುಲ್ (KL Rahul) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಾಹುಲ್ 137 ಎಸೆತಗಳನ್ನು ಎದುರಿಸಿದ್ದರು. ಈ ವೇಳೆ 14 ಫೋರ್​ ಹಾಗೂ 4 ಸಿಕ್ಸ್​ನೊಂದಿಗೆ 101 ರನ್ ಬಾರಿಸಿದರು. ಈ ಶತಕದೊಂದಿಗೆ ರಾಹುಲ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ರೂಪ ಇಲ್ಲಿದೆ…

  • ಈ ಶತಕದೊಂದಿಗೆ ಸೌತ್ ಆಫ್ರಿಕಾದ ಸೆಂಚುರಿಯನ್ ಮೈದಾನದಲ್ಲಿ 2 ಶತಕ ಬಾರಿಸಿದ ಮೊದಲ ವಿದೇಶಿ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕೆಎಲ್ ರಾಹುಲ್ ಪಾತ್ರರಾದರು. ಇದಕ್ಕೂ ಮುನ್ನ 2021 ರಲ್ಲಿ ಇದೇ ಮೈದಾನದಲ್ಲಿ 123 ರನ್ ಬಾರಿಸಿ ಮಿಂಚಿದ್ದರು.
  • ಈ ಸೆಂಚುರಿಯೊಂದಿಗೆ ಏಷ್ಯಾದ ಹೊರಗೆ ಟೆಸ್ಟ್​ನಲ್ಲಿ ಶತಕ ಸಿಡಿಸಿದ 5ನೇ ಭಾರತೀಯ ವಿಕೆಟ್ ಕೀಪರ್ ಎನಿಸಿಕೊಂಡರು.
  • ಈ ಶತಕದೊಂದಿಗೆ ಸೌತ್ ಆಫ್ರಿಕಾದಲ್ಲಿ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ರಾಹುಲ್ 2ನೇ ಸ್ಥಾನಕ್ಕೇರಿದರು. ಈ ಪಟ್ಟಿಯಲ್ಲಿ 5 ಶತಕ ಸಿಡಿಸಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ (2) ಹಾಗೂ ಕೆಎಲ್ ರಾಹುಲ್ (2) ನಂತದ ಸ್ಥಾನದಲ್ಲಿದ್ದಾರೆ.
  • ಈ ಶತಕದೊಂದಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಸರಿಗಟ್ಟಿದರು. ಅಂದರೆ 2015 ರಿಂದ SENA ದೇಶಗಳಲ್ಲಿ ಅತೀ ಹೆಚ್ಚು ಟೆಸ್ಟ್​ ಶತಕ ಬಾರಿಸಿದ ಭಾರತೀಯರಲ್ಲಿ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರು.
  • ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ (SENA) ದಲ್ಲಿ 2015 ರಿಂದ 5 ಟೆಸ್ಟ್ ಶತಕ ಸಿಡಿಸಿದ್ದಾರೆ. ಇದೀಗ ಸೌತ್ ಆಫ್ರಿಕಾ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ರಾಹುಲ್ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಕೆಎಲ್ ರಾಹುಲ್ ಕೂಡ SENA ದೇಶಗಳಲ್ಲಿ ಕಳೆದ 8 ವರ್ಷಗಳಲ್ಲಿ 5 ಟೆಸ್ಟ್​ ಶತಕಗಳನ್ನು ಬಾರಿಸಿದ್ದಾರೆ.
  • ಈ ಶತಕದೊಂದಿಗೆ 2008 ರ ಬಳಿಕ ಏಷ್ಯಾದ ಹೊರಗೆ ಅತೀ ಹೆಚ್ಚು ಶತಕ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲೂ ಕೆಎಲ್ ರಾಹುಲ್ 2ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 13 ಸೆಂಚುರಿ ಸಿಡಿಸಿರುವ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, 6 ಶತಕ ಬಾರಿಸಿರುವ ರಾಹುಲ್ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

ಭಾರತ-ಸೌತ್ ಆಫ್ರಿಕಾ ಮೊದಲ ಇನಿಂಗ್ಸ್​:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಕೆಎಲ್ ರಾಹುಲ್ (101) ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 245 ರನ್​ ಕಲೆಹಾಕಿತು. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡದ ಪರ ಆರಂಭಿಕ ಆಟಗಾರ ಡೀನ್ ಎಲ್ಗರ್ (140) ಅಜೇಯ ಶತಕ ಸಿಡಿಸಿದ್ದಾರೆ.

ಇದನ್ನೂ ಓದಿ: IPL 2024: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸುರೇಶ್ ರೈನಾ..?

ಡೀನ್ ಎಲ್ಗರ್ ಅವರ ಅಜೇಯ ಶತಕದೊಂದಿಗೆ 2ನೇ ದಿನದಾಟದ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು ಸೌತ್ ಆಫ್ರಿಕಾ ತಂಡ 256 ರನ್​ಗಳಿಸಿದೆ. ಇದೀಗ 11 ರನ್​ಗಳ ಮುನ್ನಡೆಯೊಂದಿಗೆ 3ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ