India vs South Africa 1st T20: ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ನಾಳೆಯಿಂದ (ಸೆ.28) ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ತಿರುವನಂತಪುರದ ಗ್ರೀನ್‌ಫೀಲ್ಡ್ ಮೈದಾನದಲ್ಲಿ ನಡೆಯಲಿದೆ. ಈಗಾಗಲೇ ಉಭಯ ತಂಡಗಳು ತಿರುವನಂತಪುರಂನಲ್ಲಿ ಅಭ್ಯಾಸವನ್ನು ಆರಂಭಿಸಿದ್ದು, ನಾಳಿನ ಪಂದ್ಯಕ್ಕೆ ಭರ್ಜರಿ ಸಿದ್ದತೆಯಲ್ಲಿದೆ. ಮುಂಬರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಈ ಸರಣಿಯು ಎರಡೂ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಹೀಗಾಗಿ ಗೆಲುವಿನೊಂದಿಗೆ ಟಿ20 ವಿಶ್ವಕಪ್ಗೆ ತೆರಳುವ ಇರಾದೆಯಲ್ಲಿದೆ ಉಭಯ ತಂಡಗಳು.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಎಷ್ಟು ಗಂಟೆಗೆ ಶುರುವಾಗಲಿದೆ? ಯಾವ ಚಾನೆಲ್ನಲ್ಲಿ ನೇರ ಪ್ರಸಾರ ಇರಲಿದೆ? ಈ ಸರಣಿಯ ವೇಳಾಪಟ್ಟಿಯ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ನಡೆಯಲಿದೆ?
ಈ ಸರಣಿಯ ಮೊದಲ ಟಿ20 ಪಂದ್ಯ ಸೆಪ್ಟೆಂಬರ್ 28 ರಂದು (ಬುಧವಾರ) ನಡೆಯಲಿದೆ.
ಮೊದಲ ಟಿ20 ಪಂದ್ಯ ಯಾವ ಸ್ಟೇಡಿಯಂನಲ್ಲಿ ನಡೆಯಲಿದೆ?
ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ನಡೆಯಲಿದೆ.
ಈ ಪಂದ್ಯವು ಎಷ್ಟು ಗಂಟೆಗೆ ಶುರುವಾಗಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಇನ್ನು ಪಂದ್ಯದ ಟಾಸ್ ಸಂಜೆ 6.30ಕ್ಕೆ ನಡೆಯಲಿದೆ.
ಯಾವ ಚಾನೆಲ್ನಲ್ಲಿ ಭಾರತ-ಸೌತ್ ಆಫ್ರಿಕಾ ಸರಣಿಯನ್ನು ವೀಕ್ಷಿಸಬಹುದು?
ಈ ಸರಣಿಯ ಎಲ್ಲಾ ಪಂದ್ಯಗಳ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ, ಸ್ಟಾರ್ ನೆಟ್ವರ್ಕ್ ಚಾನೆಲ್ಗಳಲ್ಲಿ ಇರಲಿದೆ.
ಆನ್ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಯಾವ ಆ್ಯಪ್ನಲ್ಲಿ ವೀಕ್ಷಿಸಬಹುದು?
ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯನ್ನು ಹಾಟ್ಸ್ಟಾರ್ ಆ್ಯಪ್ ಮೂಲಕ ಲೈವ್ ಸ್ಟೀಮಿಂಗ್ ವೀಕ್ಷಿಸಬಹುದು.
ಭಾರತ-ಸೌತ್ ಆಫ್ರಿಕಾ ಟಿ20 ಸರಣಿಯ ವೇಳಾಪಟ್ಟಿ ಹೀಗಿದೆ:
ಟಿ20 ಸರಣಿಯ ಎಲ್ಲಾ ಪಂದ್ಯಗಳು ರಾತ್ರಿ 7 ಗಂಟೆಯಿಂದ ಶುರುವಾಗಲಿದೆ.
ಭಾರತ ಟಿ20 ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಶಹಬಾಜ್ ಅಹ್ಮದ್, ಜಸ್ಪ್ರೀತ್ ಬುಮ್ರಾ.
ದಕ್ಷಿಣ ಆಫ್ರಿಕಾ ಟಿ20 ತಂಡ:
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲಿ ರೊಸೊ, ತಬ್ರೇಝ್ ಶಂಸಿ, ಟ್ರಿಸ್ಟಾನ್ ಸ್ಟಬ್ಸ್.