India Vs South Africa Live Streaming: ಗೆದ್ದವರಿಗೆ ಸೇಮಿಸ್ ಟಿಕೆಟ್ ಖಚಿತ; ಪಂದ್ಯ ಆರಂಭ ಯಾವಾಗ?

India Vs South Africa Live Streaming: ಭಾರತ ಎರಡು ಗೆಲುವಿನೊಂದಿಗೆ ಎರಡನೇ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ ಮೂರು ಅಂಕಗಳನ್ನು ಹೊಂದಿದ್ದು ಎರಡನೇ ಸ್ಥಾನದಲ್ಲಿದೆ.

India Vs South Africa Live Streaming: ಗೆದ್ದವರಿಗೆ ಸೇಮಿಸ್ ಟಿಕೆಟ್ ಖಚಿತ; ಪಂದ್ಯ ಆರಂಭ ಯಾವಾಗ?
india vs south africa
Follow us
TV9 Web
| Updated By: ಪೃಥ್ವಿಶಂಕರ

Updated on: Oct 30, 2022 | 7:34 AM

ಟಿ20 ವಿಶ್ವಕಪ್‌ನ (T20 World Cup) ಸೆಮಿಫೈನಲ್‌ ಹಾದಿಯನ್ನು ಸುಗಮಗೊಳಿಸಲು ಯತ್ನಿಸುತ್ತಿರುವ ಟೀಂ ಇಂಡಿಯಾ ಇದಕ್ಕಾಗಿ ಭಾನುವಾರ ದಕ್ಷಿಣ ಆಫ್ರಿಕಾ (India Vs South Africa) ತಂಡವನ್ನು ಎದುರಿಸಲಿದೆ. ಸೂಪರ್ 12 ಸುತ್ತಿನ ಮೊದಲ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಪರ್ತ್ ಮೈದಾನದಲ್ಲಿ (Perth ground) ದಕ್ಷಿಣ ಆಫ್ರಿಕಾದ ಸವಾಲು ಭಾರತಕ್ಕೆ ಸುಲಭವಲ್ಲ. ಉಭಯ ತಂಡಗಳಲ್ಲೂ ಬಿಗ್ ಮ್ಯಾಚ್ ವಿನ್ನರ್ ಆಟಗಾರರಿರುವುದರಿಂದ ಇಲ್ಲಿ ಉಭಯ ತಂಡಗಳ ನಡುವೆ ರೋಚಕ ಪಂದ್ಯ ನಡೆಯಲಿ ಎಂಬುದು ಅಭಿಮಾನಿಗಳ ಆಶಯ.

ಭಾರತ ಎರಡು ಗೆಲುವಿನೊಂದಿಗೆ ಎರಡನೇ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ ಮೂರು ಅಂಕಗಳನ್ನು ಹೊಂದಿದ್ದು ಎರಡನೇ ಸ್ಥಾನದಲ್ಲಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನಂತರ ನೆದರ್ಲೆಂಡ್ಸ್ ತಂಡವನ್ನು ಸೋಲಿಸಿತು. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಮೊದಲು ಬಾಂಗ್ಲಾದೇಶವನ್ನು ಸೋಲಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಜಿಂಬಾಬ್ವೆ ವಿರುದ್ಧದ ಎರಡನೇ ಪಂದ್ಯ ಮಳೆಯಿಂದ ರದ್ದಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಇಬ್ಬರಿಗೂ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.

ಇದನ್ನೂ ಓದಿ: T20 World Cup 2022: ಫಿಲಿಪ್ಸ್ ಶತಕ, ಬೌಲ್ಟ್- ಸೌಥಿ ಮಾರಕ ದಾಳಿ; 70 ರನ್​ಗಳಿಂದ ಸೋತ ಲಂಕಾ

ಪಂದ್ಯದ ಸಂಪೂರ್ಣ ಮಾಹಿತಿ ಹೀಗಿದೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವು ಅಕ್ಟೋಬರ್ 30 ಭಾನುವಾರದಂದು ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವು ಪರ್ತ್‌ನ ಪರ್ತ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಯಾವಾಗ ಆರಂಭವಾಗುತ್ತದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಸಂಜೆ 04:30ಕ್ಕೆ ಆರಂಭವಾಗಲಿದೆ. ಅಂದರೆ ಸಂಜೆ 4 ಗಂಟೆಗೆ ಟಾಸ್ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿರಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ. ಹಾಗೆಯೇ TV9Kannada.com ನಲ್ಲಿ ಈ ಪಂದ್ಯದ ಲೈವ್ ನವೀಕರಣಗಳನ್ನು ಸಹ ಓದಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ