IND vs SA: ಸೌತ್ ಆಫ್ರಿಕಾ ತಂಡಕ್ಕೆ ಬಿಗ್ ಶಾಕ್: 3ನೇ ಪಂದ್ಯದಿಂದ ಇಬ್ಬರು ಔಟ್
India vs South Africa, 3rd ODI: ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಮೂರು ಮ್ಯಾಚ್ಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ, ದ್ವಿತೀಯ ಮ್ಯಾಚ್ನಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅದರಂತೆ ಈ ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ.

ಭಾರತದ ವಿರುದ್ಧದ ಮೂರನೇ ಏಕದಿನ ಪಂದ್ಯದಿಂದ ಸೌತ್ ಆಫ್ರಿಕಾ ತಂಡದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ. ರಾಯ್ಪುರದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಬ್ಯಾಟರ್ ಟೋನಿ ಡಿ ಝೋರ್ಝಿ ಹಾಗೂ ವೇಗಿ ನಾಂಡ್ರೆ ಬರ್ಗರ್ ಇಂದಿನ (ಡಿ.6) ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ದ್ವಿತೀಯ ಏಕದಿನ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಗಾಯಗೊಂಡಿದ್ದ ನಾಂಡ್ರೆ ಬರ್ಗರ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹಾಗೆಯೇ ಬ್ಯಾಟಿಂಗ್ ವೇಳೆ ಕಾಲು ನೋವಿಗೆ ತುತ್ತಾಗಿದ್ದ ಎಡಗೈ ದಾಂಡಿಗ ಟೋನಿ ಡಿ ಝೋರ್ಝಿ ಇನ್ನು ಸಹ ಸಂಪೂರ್ಣ ಫಿಟ್ ಆಗಿಲ್ಲ. ಹೀಗಾಗಿ ಇಬ್ಬರಿರು ವಿಶಾಖಪಟ್ಟಣದಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ.
ಮಾಡು ಇಲ್ಲವೇ ಮಡಿ ಪಂದ್ಯ:
ಇಂದಿನ ಪಂದ್ಯವು ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಏಕೆಂದರೆ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಜಯಭೇರಿ ಬಾರಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸುವಲ್ಲಿ ಸೌತ್ ಆಫ್ರಿಯಾ ಯಶಸ್ವಿಯಾಗಿತ್ತು.
ಇದೀಗ ಮೂರನೇ ಪಂದ್ಯವು ನಿರ್ಣಾಯಕವಾಗಿ ಮಾರ್ಪಟ್ಟಿದೆ. ಅದರಂತೆ ವಿಶಾಖಪಟ್ಟಣದಲ್ಲಿ ಗೆಲ್ಲುವ ತಂಡವು 2-1 ಅಂತರದಿಂದ ಸರಣಿ ಜಯಿಸಲಿದೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಉಭಯ ತಂಡಗಳು:
ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.
ಇದನ್ನೂ ಓದಿ: ಸ್ಫೋಟಕ ಸೆಂಚುರಿ… ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ
ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ, ಒಟ್ನೀಲ್ ಬಾರ್ಟ್‌ಮ್ಯಾನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಟ್ಝ್ಕೆ, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್, ರೂಬಿನ್ ಹರ್ಮನ್, ಕೇಶವ್ ಮಹಾರಾಜ್, ಮಾರ್ಕೊ ಯಾನ್ಸೆನ್, ಐಡೆನ್ ಮಾರ್ಕ್ರಾಮ್, ಲುಂಗಿ ಎನ್ಗಿಡಿ, ರಯಾನ್ ರಿಕೆಲ್ಟನ್, ಪ್ರೆನೆಲನ್ ಸುಬ್ರಯೆನ್, ಟೋನಿ ಡಿ ಝೋರ್ಝಿ (ಅಲಭ್ಯ), ನಾಂಡ್ರೆ ಬರ್ಗರ್ (ಅಲಭ್ಯ).
