IND vs SA ODI Series: ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್

| Updated By: ಪೃಥ್ವಿಶಂಕರ

Updated on: Jan 17, 2022 | 4:19 PM

IND vs SA ODI Series: ಕಳೆದ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಏಕದಿನ ಸರಣಿಯನ್ನು ಗೆದ್ದುಕೊಂಡಿದೆ. ಭಾರತ 6 ಪಂದ್ಯಗಳ ಸರಣಿಯನ್ನು 5-1 ಅಂತರದಿಂದ ವಶಪಡಿಸಿಕೊಂಡಿದೆ.

IND vs SA ODI Series: ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ಟೀಂ ಇಂಡಿಯಾ
Follow us on

ಭಾರತ vs ದಕ್ಷಿಣ ಆಫ್ರಿಕಾ ನಡುವಿನ ODI ಸರಣಿಯು ಜನವರಿ 19 ರಂದು ಆರಂಭವಾಗುತ್ತದೆ. ಟೆಸ್ಟ್ ಸರಣಿಯಲ್ಲಿ ಭಾರತವು ಆತಿಥೇಯರ ವಿರುದ್ಧ ಸೋತಿದೆ. ಆದಾಗ್ಯೂ, ಟೀಂ ಇಂಡಿಯಾ ಏಕದಿನ ಸರಣಿಯನ್ನು ಗೆಲ್ಲುವ ಮೂಲಕ ಪ್ರವಾಸವನ್ನು ಕೊನೆಗೊಳಿಸಲು ಬಯಸಿದೆ. ಭಾರತ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಕೆಎಲ್ ರಾಹುಲ್ ಟೀಮ್ ಕಮಾಂಡ್ ಆಗಿ ನೇಮಕಗೊಂಡಿದ್ದಾರೆ. ಜಸ್ಪ್ರೀತ್ ಬುಮ್ರಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಸರಣಿಯು ತುಂಬಾ ರೋಚಕವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಜನವರಿ 19 ರಂದು ಪಾರ್ಲೆಯ ಬೋಲ್ಯಾಂಡ್ ಪಾರ್ಕ್‌ನಲ್ಲಿ ನಡೆಯಲಿದೆ. ಎರಡನೇ ಏಕದಿನ ಪಂದ್ಯ ಜನವರಿ 21 ರಂದು ಪಾರ್ಲೆಯ ಬೋಲ್ಯಾಂಡ್ ಪಾರ್ಕ್‌ನಲ್ಲಿ ನಡೆಯಲಿದೆ. ಮೂರನೇ ಏಕದಿನ ಪಂದ್ಯ ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಕಳೆದ ಪ್ರವಾಸದಲ್ಲಿ ಭಾರತಕ್ಕೆ ಗೆಲುವು
ಕಳೆದ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಏಕದಿನ ಸರಣಿಯನ್ನು ಗೆದ್ದುಕೊಂಡಿದೆ. ಭಾರತ 6 ಪಂದ್ಯಗಳ ಸರಣಿಯನ್ನು 5-1 ಅಂತರದಿಂದ ವಶಪಡಿಸಿಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ಇತಿಹಾಸವನ್ನು ಪುನರಾವರ್ತಿಸುವ ಭರವಸೆ ಹೊಂದಿದೆ. ಯುವ ಆಟಗಾರರೊಂದಿಗೆ ಸೆಣಸಾಡುತ್ತಿರುವ ಟೀಂ ಇಂಡಿಯಾಗೆ ಟೆಸ್ಟ್ ಸರಣಿಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಉತ್ತಮ ಅವಕಾಶವಿದೆ.

ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಆಡುವ XI: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಕೀಪರ್), ವೆಂಕಟೇಶ್ ಅಯ್ಯರ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್.

ಟೀಂ ಇಂಡಿಯಾಗೆ ಇದು ಸುಲಭವಲ್ಲ
ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳು ಮಿಂಚಿರುವುದರಿಂದ ಭಾರತ ತಂಡಕ್ಕೆ ಏಕದಿನ ಸರಣಿ ಗೆಲ್ಲುವುದು ಸುಲಭವಲ್ಲ. ಆಫ್ರಿಕಾದ ಪಿಚ್‌ಗಳು ತಮ್ಮ ವೇಗದ ಮತ್ತು ಬೌನ್ಸ್‌ಗೆ ಹೆಸರುವಾಸಿಯಾಗಿದೆ. ಆತಿಥೇಯ ತಂಡ ಅತ್ಯುತ್ತಮ ಬೌಲರ್‌ಗಳನ್ನು ಹೊಂದಿದೆ.