IND vs SA: 7 ಪಂದ್ಯಗಳಲ್ಲಿ 6 ಭರ್ಜರಿ ಶತಕ; ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟ ಆರ್​ಸಿಬಿ ಆಲ್​ರೌಂಡರ್..!

IND vs SA: ಸರಣಿ ಆರಂಭಕ್ಕೂ ಮುನ್ನ ಇಂಜುರಿಗೊಂಡಿದ್ದ ವಾಷಿಂಗ್ಟನ್ ಸುಂದರ್‌ ಬದಲಿಯಾಗಿ, ಶಹಬಾಜ್ ಅಹ್ಮದ್​ಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಆ ಪ್ರವಾಸದಲ್ಲಿ ಅವರಿಗೆ ಆಡುವ ಇಲೆವೆನ್​ನಲ್ಲಿ ಸ್ಥಾನ ಸಿಕ್ಕಿರಲಿಲ್ಲ.

IND vs SA: 7 ಪಂದ್ಯಗಳಲ್ಲಿ 6 ಭರ್ಜರಿ ಶತಕ; ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟ ಆರ್​ಸಿಬಿ ಆಲ್​ರೌಂಡರ್..!
Follow us
TV9 Web
| Updated By: ಪೃಥ್ವಿಶಂಕರ

Updated on:Oct 09, 2022 | 3:48 PM

ಭಾರತ ಹಾಗೂ ದಕ್ಷಿಣ ಆಫ್ರಿಕಾ (India Vs South Africa) ನಡುನಿನ 2ನೇ ಏಕದಿನ ಪಂದ್ಯ ರಾಂಚಿಯಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ (Team India) ಕೆಲವು ಬದಲಾವಣೆ ಮಾಡಲಾಗಿದ್ದು, ತಂಡದಲ್ಲಿ ಮೂವರು ಸ್ಪಿನ್ನರ್​ಗಳಿಗೆ ಅವಕಾಶ ನೀಡಲಾಗಿದೆ. ಅವರಲ್ಲಿ ಒಬ್ಬರು ಆರ್​ಸಿಬಿಯ ಸ್ಪಿನ್ ಆಲ್​ರೌಂಡರ್ ಶಹಬಾಜ್ ಅಹ್ಮದ್ (Shahbaz Ahmed). ಈ ಹಿಂದೆ ಶಹಬಾಜ್ ಅಹ್ಮದ್ ಟೀಮ್ ಇಂಡಿಯಾದಲ್ಲಿ ಆಯ್ಕೆಯಾಗಿದ್ದರೂ, ಅವರಿಗೆ ಆಡುವ XI ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳವನ್ನು ಮುನ್ನಡೆಸಿರುವ ಶಹಬಾಜ್ ಅದ್ಭುತ ಆಲ್‌ರೌಂಡರ್ ಆಗಿದ್ದು, ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡುವುದರ ಜೊತೆಗೆ ಅದ್ಭುತ ಫೀಲ್ಡರ್ ಕೂಡ ಆಗಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಜಿಂಬಾಬ್ವೆ ಪ್ರವಾಸಕ್ಕೆ ಟೀಂ ಇಂಡಿಯಾದಲ್ಲಿ ಶಹಬಾಜ್ ಅಹ್ಮದ್ ಆಯ್ಕೆಯಾಗಿದ್ದರು. ಸರಣಿ ಆರಂಭಕ್ಕೂ ಮುನ್ನ ಇಂಜುರಿಗೊಂಡಿದ್ದ ವಾಷಿಂಗ್ಟನ್ ಸುಂದರ್‌ ಬದಲಿಯಾಗಿ, ಶಹಬಾಜ್ ಅಹ್ಮದ್​ಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಆ ಪ್ರವಾಸದಲ್ಲಿ ಅವರಿಗೆ ಆಡುವ ಇಲೆವೆನ್​ನಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಆದರೆ ಶಹಬಾಜ್ ಅಹ್ಮದ್, ಇಂದು ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡುವ ಅವಕಾಶ ಪಡೆದುಕೊಂಡಿದ್ದಾರೆ.

ಬಂಗಾಳದ ಪರ ಕ್ರಿಕೆಟ್ ಆಡುವ ಶಹಬಾಜ್ ಮೂಲತಃ ಹರಿಯಾಣದ ಮೇವಾತ್ ಜಿಲ್ಲೆಯವರು. ಆದರೆ, ಅವರು ಹರಿಯಾಣದಿಂದ ಬಂಗಾಳಕ್ಕೆ ಹೋಗುವುದರ ಹಿಂದೆ ಒಂದು ಕಥೆಯಿದೆ. ವಾಸ್ತವವಾಗಿ ಶಹಬಾಜ್‌ ಅವರ ತಂದೆಗೆ ಶಹಬಾಜ್ ಅಹ್ಮದ್ ಇಂಜಿನಿಯರ್ ಆಗಬೇಕೆಂಬ ಕನಸಿತ್ತು. ಹೀಗಾಗಿ ತಂದೆಯ ಕನಸಿನಂತೆ ಇಂಜಿನಿಯರಿಂಗ್ ಮಾಡಲು ಕಾಲೇಜ್ ಸೇರಿಕೊಂಡ ಶಹಬಾಜ್​ಗೆ 3 ವರ್ಷಗಳ ಬಳಿಕ ಕ್ರಿಕೆಟ್ ಮೇಲಿನ ಒಲವು ಹೆಚ್ಚಾಯಿತು. ಇದನ್ನು ಕಂಡ  ಶಹಬಾಜ್​ ಅವರ ತಂದೆ ಕ್ರಿಕೆಟ್ ಅಥವಾ ಓದು ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಹೇಳಿದರು. ಇದನ್ನು ಕೇಳಿದ ಶಹಬಾಜ್ ಕ್ರಿಕೆಟ್ ಆಡಲು ನಿರ್ಧರಿಸಿದರು.

7 ಪಂದ್ಯಗಳಲ್ಲಿ 6 ಶತಕ

ಮೊದಲು ಗುರ್ಗಾಂವ್‌ನ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿದ್ದ ಶಹಬಾಜ್, ಗೆಳೆಯ ಪ್ರಮೋದ್ ಚಾಂಡಿಲನ ಇಚ್ಛೆಯಂತೆ ಬಂಗಾಳಕ್ಕೆ ಹೋಗಿ ತಪನ್ ಮೆಮೋರಿಯಲ್ ಕ್ಲಬ್ ಸೇರಿಕೊಂಡರು. ಈ ಕ್ಲಬ್‌ಗಾಗಿ ಮೊದಲ 7 ಪಂದ್ಯಗಳಲ್ಲಿ 6 ಶತಕಗಳನ್ನು ಬಾರಿಸಿದ ಶಹಬಾಜ್ ಬೌಲಿಂಗ್​ನಲ್ಲೂ ಉತ್ತಮ ಪ್ರದರ್ಶನ ತೋರಿದರು. ಈ ಪ್ರದರ್ಶನ ನೋಡಿದ ಬಂಗಾಳ ಕ್ರಿಕೆಟ್‌ ಸಂಸ್ಥೆ ಅವರನ್ನು ಪ್ರಥಮ ದರ್ಜೆಯ ಕ್ರಿಕೆಟ್​ಗೆ ಆಯ್ಕೆ ಮಾಡಿತು.

ಬಂಗಾಳದ ಪರ 27 ಲಿಸ್ಟ್ ಎ ಪಂದ್ಯಗಳನ್ನಾಡಿರುವ ಶಹಬಾಜ್ 47.28 ಸರಾಸರಿಯಲ್ಲಿ 662 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 2 ಶತಕ ಮತ್ತು 2 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಜೊತೆಗೆ ಬೌಲಿಂಗ್​ನಲ್ಲಿ 24 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈಗ ಈ ಆಲ್ ರೌಂಡ್ ಆಟದ ಫಲವೇ ಇಂದು ಅವರು ಟೀಂ ಇಂಡಿಯಾ ಪರ ಮೊದಲ ಪಂದ್ಯವನ್ನಾಡುತ್ತಿದ್ದಾರೆ.

Published On - 3:44 pm, Sun, 9 October 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ