AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ವೆಂಕಟೇಶ್ ಅಯ್ಯರ್ ಬೌಲ್ ಮಾಡದಿರಲು ಇದುವೇ ಕಾರಣ..!

IND vs SA: ಆರನೇ ಬೌಲರ್‌ಗೆ ಹೆಚ್ಚಿನ ಪ್ರಾಮುಖ್ಯತೆ ಇದ್ದು, ವೆಂಕಟೇಶ್ ಅದರಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಏಕದಿನ ಸರಣಿ ಆರಂಭಕ್ಕೆ ಒಂದು ದಿನ ಮೊದಲು ನಾಯಕ ರಾಹುಲ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

IND vs SA: ವೆಂಕಟೇಶ್ ಅಯ್ಯರ್ ಬೌಲ್ ಮಾಡದಿರಲು ಇದುವೇ ಕಾರಣ..!
Team India
TV9 Web
| Edited By: |

Updated on:Jan 20, 2022 | 5:39 PM

Share

ಹೊಸ ವರ್ಷ 2022 ರಲ್ಲಿ ಮೊದಲ ಗೆಲುವಿಗಾಗಿ ಟೀಮ್ ಇಂಡಿಯಾ ಇನ್ನೂ ಎದುರು ನೋಡುತ್ತಿದೆ. ಈ ವರ್ಷದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಸತತ ಎರಡು ಟೆಸ್ಟ್ ಪಂದ್ಯಗಳನ್ನು ಕಳೆದುಕೊಂಡಿತು. ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 31 ರನ್‌ಗಳಿಂದ ಭಾರತವನ್ನು ಸೋಲಿಸಿತು. ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ, ಹಂಗಾಮಿ ನಾಯಕ ಕೆಎಲ್ ರಾಹುಲ್ ತಂಡದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಆದರೆ ರಾಹುಲ್ ಬ್ಯಾಟ್ ಮತ್ತು ನಾಯಕತ್ವದಲ್ಲಿ ಪ್ರಭಾವ ಬೀರಲು ವಿಫಲರಾದರು. ವಿಶೇಷವಾಗಿ ಬೌಲಿಂಗ್ ಸಮಯದಲ್ಲಿ, ಅವರ ನಿರ್ಧಾರಗಳು ಎಲ್ಲರನ್ನು ಆಶ್ಚರ್ಯಗೊಳಿಸಿದವು. ಅದರಲ್ಲಿ ಅತ್ಯಂತ ಆಶ್ಚರ್ಯಕರವೆಂದರೆ ಹೊಸ ಆಲ್ ರೌಂಡರ್ ವೆಂಕಟೇಶ್ ಅಯ್ಯರ್​ಗೆ ಬೌಲಿಂಗ್ ನೀಡದಿರುವುದು. ರಾಹುಲ್ ಯಾಕೆ ಈ ನಿರ್ಧಾರ ಕೈಗೊಂಡಿದ್ದಾರೆ ಎಂಬುದಕ್ಕೆ ತಂಡದ ಸ್ಟಾರ್ ಓಪನರ್ ಶಿಖರ್ ಧವನ್ ಉತ್ತರ ನೀಡಿದ್ದಾರೆ.

ಕಳೆದ ವರ್ಷ ನ್ಯೂಜಿಲೆಂಡ್ ವಿರುದ್ಧ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಎಡಗೈ ಬ್ಯಾಟ್ಸ್‌ಮನ್ ಮತ್ತು ಬಲಗೈ ಮಧ್ಯಮ ವೇಗಿ ವೆಂಕಟೇಶ್ ಅಯ್ಯರ್‌ಗೆ ಮೊದಲ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡುವ ಅವಕಾಶ ನೀಡಲಾಯಿತು. ಇದು ಯುವ ಆಲ್‌ರೌಂಡರ್‌ಗೆ ವಿಶೇಷವಾಗಿರಲಿಲ್ಲ. ಕೇವಲ 2 ರನ್ ಗಳಿಸಿ ಔಟ್ ಆಗಿದ್ದರು. ಇನ್ನು ಬೌಲಿಂಗ್​ಗೆ ಅವಕಾಶ ಸಿಕ್ಕಿರಲಿಲ್ಲ.

ಟೀಮ್ ಇಂಡಿಯಾ ಸೋಲಿನ ಬಳಿಕ ಈ ಒಂದು ಪ್ರಶ್ನೆ ಮೂಡಿಬಂತು. ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಶಿಖರ್ ಧವನ್ ಅವರ ಮುಂದೆ ಈ ಪ್ರಶ್ನೆಯನ್ನು ಕೇಳಲಾಯಿತು. ಪಿಚ್‌ನಿಂದ ಸ್ಪಿನ್ನರ್‌ಗಳು ಪಡೆಯುತ್ತಿರುವ ಸಹಾಯದಿಂದಾಗಿ ವೆಂಕಟೇಶ್ ಅವರನ್ನು ಬಳಸಲಾಗಿಲ್ಲ ಎಂದು ಧವನ್ ಸಮಜಾಯಿಷಿ ನೀಡಿದ್ದಾರೆ. ವಿಕೆಟ್ ತಿರುವು ಪಡೆಯುತ್ತಿದ್ದರಿಂದ ಮತ್ತು ಸ್ಪಿನ್ನರ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರಿಂದ ವೆಂಕಟೇಶ್ ಅಯ್ಯರ್ ಅವರನ್ನು ಬೌಲಿಂಗ್​ಗೆ ಆಯ್ಕೆ ಮಾಡಿಲ್ಲ ಎಂದು ಶಿಖರ್ ಧವನ್ ಹೇಳಿದರು.

ಇದಕ್ಕೂ ಮುನ್ನ, ಆರನೇ ಬೌಲರ್‌ಗೆ ಹೆಚ್ಚಿನ ಪ್ರಾಮುಖ್ಯತೆ ಇದ್ದು, ವೆಂಕಟೇಶ್ ಅದರಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಏಕದಿನ ಸರಣಿ ಆರಂಭಕ್ಕೆ ಒಂದು ದಿನ ಮೊದಲು ನಾಯಕ ರಾಹುಲ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ಆದರೆ, ಮೊದಲ ಪಂದ್ಯದಲ್ಲಿ ಹಾಗಾಗಲಿಲ್ಲ. ಭಾರತ ಕೇವಲ 68 ರನ್‌ಗಳಿಗೆ ದಕ್ಷಿಣ ಆಫ್ರಿಕಾದ 3 ವಿಕೆಟ್‌ಗಳನ್ನು ಕಬಳಿಸಿತು. ಆದರೆ ಅದರ ನಂತರ ಟೆಂಬಾ ಬವುಮಾ ಮತ್ತು ರಾಸಿ ವ್ಯಾನ್ ಡೆರ್ ಡಸ್ಸೆನ್ ನಾಲ್ಕನೇ ವಿಕೆಟ್‌ಗೆ 204 ರನ್‌ಗಳ ಜೊತೆಯಾಟವನ್ನು ನಡೆಸಿದರು. ಭಾರತದ ವೇಗಿ ಮತ್ತು ಸ್ಪಿನ್ನರ್ ಜೋಡಿಯನ್ನು ಮುರಿಯಲು ವಿಫಲರಾದರು ಮತ್ತು ಇದು ಪಂದ್ಯದ ಫಲಿತಾಂಶದ ಮೇಲೆ ಪರಿಣಾಮ ಬೀರಿತು.

ಇದನ್ನೂ ಓದಿ: ICC Mens ODI Team: ಐಸಿಸಿ ಏಕದಿನ ತಂಡ ಪ್ರಕಟ: ಟೀಮ್ ಇಂಡಿಯಾದ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022: ಹೊಸ ಎರಡು ತಂಡಗಳು ಆಯ್ಕೆ ಮಾಡಿದ 6 ಆಟಗಾರರು ಇವರೇ..!

(IND vs SA: Shikhar Dhawan reveals the reason why Indian Team didn’t use Venkateh Iyer for Bowling in 1st ODI)

Published On - 5:38 pm, Thu, 20 January 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ