AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾ ಆರಂಭಿಕರು ಯಾರು?

India vs South Africa T20I: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ ಕಟಕ್​ನಲ್ಲಿ ನಡೆದರೆ, ಎರಡನೇ ಪಂದ್ಯ ಮುಲ್ಲನ್​ಪುರ್​ನಲ್ಲಿ ಜರುಗಲಿದೆ. ಇನ್ನುಳಿದ ಪಂದ್ಯಗಳು ಕ್ರಮವಾಗಿ ಧರ್ಮಶಾಲ, ಲಕ್ನೋ ಮತ್ತು ಅಹಮದಾಬಾದ್​ನಲ್ಲಿ ನಡೆಯಲಿದೆ.

IND vs SA: ಟೀಮ್ ಇಂಡಿಯಾ ಆರಂಭಿಕರು ಯಾರು?
Team India
ಝಾಹಿರ್ ಯೂಸುಫ್
|

Updated on: Dec 09, 2025 | 8:53 AM

Share

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿ ಇಂದಿನಿಂದ (ಡಿ.9) ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ ಕಟಕ್​ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಾಣಿಸಿಕೊಳ್ಳುವವರು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡದಲ್ಲಿ ಮೂವರು ಆರಂಭಿಕ ದಾಂಡಿಗರಿರುವುದು.

ಇಲ್ಲಿ ಟೀಮ್ ಇಂಡಿಯಾ ಓಪನರ್​ಗಳಾಗಿ ಶುಭ್​​ಮನ್ ಗಿಲ್, ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಇದ್ದಾರೆ. ಸೌತ್ ಆಫ್ರಿಕಾ ವಿರುದ್ದದ ಕಳೆದ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಈ ವೇಳೆ ಸ್ಯಾಮ್ಸನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು.

ಆದರೆ ಏಷ್ಯಾಕಪ್​ನಲ್ಲಿ ಭಾರತ ತಂಡದ ಆರಂಭಿಕರನ್ನು ಬದಲಿಸಲಾಗಿತ್ತು. ಅದರಂತೆ ಶುಭ್​ಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲೂ ಈ ಇಬ್ಬರನ್ನೇ ಒಪನರ್​ಗಳಾಗಿ ಮುಂದುವರೆಸುವ ಸಾಧ್ಯತೆಯಿದೆ.

ಏಕೆಂದರೆ ಅಭಿಷೇಕ್ ಶರ್ಮಾ ಅವರು ಆರಂಭಿಕನಾಗಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಇನ್ನು ಶುಭ್​​ಮನ್ ಗಿಲ್ ಭಾರತ ತಂಡದ ಉಪನಾಯಕ. ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಹೊರಗಿಡಲು ಸಾಧ್ಯವಿಲ್ಲ. ಹೀಗಾಗಿ ಶುಭ್​ಮನ್ ಹಾಗೂ ಅಭಿಷೇಕ್ ಶರ್ಮಾ ಅವರನ್ನು ಓಪನರ್​ಗಳಾಗಿ ಮುಂದುವರೆಸುವುದು ಖಚಿತ ಎನ್ನಬಹುದು.

ಇನ್ನು ಸೌತ್ ಆಫ್ರಿಕಾ ವಿರುದ್ಧ 4 ಇನಿಂಗ್ಸ್​ಗಳಲ್ಲಿ 2 ಭರ್ಜರಿ ಶತಕಗಳೊಂದಿಗೆ 216 ರನ್ ಕಲೆಹಾಕಿರುವ ಸಂಜು ಸ್ಯಾಮ್ಸನ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಅಂದರೆ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಸ್ಯಾಮ್ಸನ್​ಗೆ ಈ ಬಾರಿ ಮತ್ತೊಮ್ಮೆ ಚಾನ್ಸ್ ನೀಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತೆ ಇರಲಿದೆ…

  • ಅಭಿಷೇಕ್ ಶರ್ಮಾ
  • ಶುಭ್​ಮನ್ ಗಿಲ್
  • ಸೂರ್ಯಕುಮಾರ್ ಯಾದವ್ (ನಾಯಕ)
  • ತಿಲಕ್ ವರ್ಮಾ
  • ಶಿವಂ ದುಬೆ
  • ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
  • ಹಾರ್ದಿಕ್ ಪಾಂಡ್ಯ
  • ಅಕ್ಷರ್ ಪಟೇಲ್
  • ಅರ್ಷದೀಪ್ ಸಿಂಗ್
  • ವರುಣ್ ಚಕ್ರವರ್ತಿ
  • ಜಸ್​ಪ್ರೀತ್ ಬುಮ್ರಾ

ಇದನ್ನೂ ಓದಿ: IND vs SA: ಭಾರತ-ಸೌತ್ ಆಫ್ರಿಕಾ ಟಿ20 ಸರಣಿಗೆ 13 ಆಟಗಾರರು ಅಲಭ್ಯ

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ)*, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!