
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿ ಇಂದಿನಿಂದ (ಡಿ.9) ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಕಟಕ್ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಾಣಿಸಿಕೊಳ್ಳುವವರು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡದಲ್ಲಿ ಮೂವರು ಆರಂಭಿಕ ದಾಂಡಿಗರಿರುವುದು.
ಇಲ್ಲಿ ಟೀಮ್ ಇಂಡಿಯಾ ಓಪನರ್ಗಳಾಗಿ ಶುಭ್ಮನ್ ಗಿಲ್, ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಇದ್ದಾರೆ. ಸೌತ್ ಆಫ್ರಿಕಾ ವಿರುದ್ದದ ಕಳೆದ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಈ ವೇಳೆ ಸ್ಯಾಮ್ಸನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು.
ಆದರೆ ಏಷ್ಯಾಕಪ್ನಲ್ಲಿ ಭಾರತ ತಂಡದ ಆರಂಭಿಕರನ್ನು ಬದಲಿಸಲಾಗಿತ್ತು. ಅದರಂತೆ ಶುಭ್ಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲೂ ಈ ಇಬ್ಬರನ್ನೇ ಒಪನರ್ಗಳಾಗಿ ಮುಂದುವರೆಸುವ ಸಾಧ್ಯತೆಯಿದೆ.
ಏಕೆಂದರೆ ಅಭಿಷೇಕ್ ಶರ್ಮಾ ಅವರು ಆರಂಭಿಕನಾಗಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಇನ್ನು ಶುಭ್ಮನ್ ಗಿಲ್ ಭಾರತ ತಂಡದ ಉಪನಾಯಕ. ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಹೊರಗಿಡಲು ಸಾಧ್ಯವಿಲ್ಲ. ಹೀಗಾಗಿ ಶುಭ್ಮನ್ ಹಾಗೂ ಅಭಿಷೇಕ್ ಶರ್ಮಾ ಅವರನ್ನು ಓಪನರ್ಗಳಾಗಿ ಮುಂದುವರೆಸುವುದು ಖಚಿತ ಎನ್ನಬಹುದು.
ಇನ್ನು ಸೌತ್ ಆಫ್ರಿಕಾ ವಿರುದ್ಧ 4 ಇನಿಂಗ್ಸ್ಗಳಲ್ಲಿ 2 ಭರ್ಜರಿ ಶತಕಗಳೊಂದಿಗೆ 216 ರನ್ ಕಲೆಹಾಕಿರುವ ಸಂಜು ಸ್ಯಾಮ್ಸನ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಅಂದರೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಸ್ಯಾಮ್ಸನ್ಗೆ ಈ ಬಾರಿ ಮತ್ತೊಮ್ಮೆ ಚಾನ್ಸ್ ನೀಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತೆ ಇರಲಿದೆ…
ಇದನ್ನೂ ಓದಿ: IND vs SA: ಭಾರತ-ಸೌತ್ ಆಫ್ರಿಕಾ ಟಿ20 ಸರಣಿಗೆ 13 ಆಟಗಾರರು ಅಲಭ್ಯ