IND vs SA: ಶುಭ್​ಮನ್ ಗಿಲ್ ಔಟ್: ಟೀಮ್ ಇಂಡಿಯಾದಲ್ಲಿ ಬದಲಾವಣೆ ಖಚಿತ

India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 30 ರನ್​ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಗುವಾಹಟಿಯ ಬರ್ಸಪಾರ ಸ್ಟೇಡಿಯಂ ಆತಿಥ್ಯವಹಿಸಲಿದೆ.

IND vs SA: ಶುಭ್​ಮನ್ ಗಿಲ್ ಔಟ್: ಟೀಮ್ ಇಂಡಿಯಾದಲ್ಲಿ ಬದಲಾವಣೆ ಖಚಿತ
Shubman Gill

Updated on: Nov 20, 2025 | 3:17 PM

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಶನಿವಾರದಿಂದ (ನ.22) ಶುರುವಾಗಲಿದೆ. ಗುವಾಹಟಿಯ ಬರ್ಸಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾ ನಾಯಕ ಶುಭ್​​ಮನ್​ ಗಿಲ್ ಹೊರಗುಳಿದಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಪಂದ್ಯದ ವೇಳೆ ಗಿಲ್ ಅವರು ಕುತ್ತಿಗೆ ನೋವಿಗೀಡಾಗಿದ್ದರು. ಹೀಗಾಗಿ ಅವರು ದ್ವಿತೀಯ ಇನಿಂಗ್ಸ್​ನಲ್ಲಿ ಕಣಕ್ಕಿಳಿದಿರಲಿಲ್ಲ.

ಇದೀಗ ಚಿಕಿತ್ಸೆ ಪಡೆದಿರುವ ಶುಭ್​​ಮನ್ ಗಿಲ್​ಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ದ್ಚಿತೀಯ ಟೆಸ್ಟ್​ನಿಂದ ಹೊರಗುಳಿದಿದ್ದಾರೆ.

ರಿಷಭ್ ಪಂತ್ ನಾಯಕ:

ಶುಭ್​​ಮನ್ ಗಿಲ್ ಅನುಪಸ್ಥಿತಿಯಲ್ಲಿ ದ್ವಿತೀಯ ಟೆಸ್ಟ್​ನಲ್ಲಿ ಭಾರತ ತಂಡವನ್ನು ಉಪನಾಯಕ ರಿಷಭ್ ಪಂತ್ ಮುನ್ನಡೆಸಲಿದ್ದಾರೆ. ಅದರಲ್ಲೂ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿದ್ದು, ಸರಣಿಯನ್ನು ಸಮಬಲಗೊಳಿಸಲು ಭಾರತ ತಂಡ ಗೆಲ್ಲಲೇಬೇಕು. ಹೀಗಾಗಿ ಈ ಮ್ಯಾಚ್ ರಿಷಭ್ ಪಂತ್ ಪಾಲಿಗೆ ಅಗ್ನಿಪರೀಕ್ಷೆ ಎಂದರೂ ತಪ್ಪಾಗಲಾರದು.

ಒಂದು ಬದಲಾವಣೆ ಖಚಿತ:

ಶುಭ್​​ಮನ್ ಗಿಲ್ ಹೊರಗುಳಿದಿರುವ ಕಾರಣ ದ್ವಿತೀಯ ಪಂದ್ಯದ ವೇಳೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಈ ಬದಲಾವಣೆಯಿಂದಾಗಿ ಯಾರಿಗೆ ಚಾನ್ಸ್ ಸಿಗಲಿದೆ ಎಂಬುದೇ ಈ ದೊಡ್ಡ ಪ್ರಶ್ನೆ.

ಏಕೆಂದರೆ ಕಳೆದ ಮ್ಯಾಚ್​ ವೇಳೆ ದೇವದತ್ ಪಡಿಕ್ಕಲ್ ಹಾಗೂ ಸಾಯಿ ಸುದರ್ಶನ್ ಬೆಂಚ್ ಕಾದಿದ್ದರು. ಇದೀಗ ನಿತೀಶ್ ಕುಮಾರ್ ರೆಡ್ಡಿ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಈ ಮೂವರಲ್ಲಿ ಒಬ್ಬರಿಗೆ ಚಾನ್ಸ್ ಸಿಗುವುದು ಖಚಿತ.

ಇಲ್ಲಿ ಟೀಮ್ ಇಂಡಿಯಾ ಪರಿಪೂರ್ಣ ಬ್ಯಾಟರ್​ನನ್ನು ಕಣಕ್ಕಿಳಿಸಲು ಬಯಸಿದರೆ ಸಾಯಿ ಸುದರ್ಶನ್​ ಅಥವಾ ದೇವದತ್ ಪಡಿಕ್ಕಲ್​ಗೆ ಚಾನ್ಸ್ ಸಿಗಬಹುದು.

ಇನ್ನು ಆಲ್​ರೌಂಡರ್​ಗೆ ಮಣೆಹಾಕಲು ಮುಂದಾದರೆ ಮಾತ್ರ ನಿತೀಶ್ ಕುಮಾರ್ ರೆಡ್ಡಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

ಭಾರತ ಸಂಭಾವ್ಯ ಪ್ಲೇಯಿಂಗ್ 11: ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್, ವಾಷಿಂಗ್ಟನ್ ಸುಂದರ್ , ಸಾಯಿ ಸುದರ್ಶನ್, ರಿಷಭ್ ಪಂತ್ (ನಾಯಕ) , ರವೀಂದ್ರ ಜಡೇಜಾ , ಧ್ರುವ್ ಜುರೆಲ್ , ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್ , ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಇಬ್ಬರಿಗೆ ಅವಕಾಶ… ಆಸ್ಟ್ರೇಲಿಯಾ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ

ಭಾರತ ಟೆಸ್ಟ್​ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ ದೀಪ್, ನಿತೀಶ್ ಕುಮಾರ್ ರೆಡ್ಡಿ.