IND vs SA: ಭಾರತ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡ ಪ್ರಕಟ; ಹೊಸಬರಿಗೆ ಅವಕಾಶ
IND vs SA: ಭಾರತ ವಿರುದ್ಧದ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡವನ್ನು ಪ್ರಕಟಿಸಿದೆ. ತಂಡದ ಕಮಾಂಡ್ ತೆಂಬಾ ಬಾವುಮಾ ಕೈಯಲ್ಲಿರಲಿದ್ದು, ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಕೂಡ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.
ಭಾರತ ವಿರುದ್ಧದ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡವನ್ನು ಪ್ರಕಟಿಸಿದೆ. ತಂಡದ ಕಮಾಂಡ್ ತೆಂಬಾ ಬಾವುಮಾ ಕೈಯಲ್ಲಿರಲಿದ್ದು, ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಕೂಡ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಜನವರಿ 19 ರಿಂದ ಆರಂಭವಾಗಲಿರುವ ಈ ಮೂರು ಪಂದ್ಯಗಳ ಸರಣಿಗೆ ಕ್ರಿಕೆಟ್ ದಕ್ಷಿಣ ಆಫ್ರಿಕಾ 17 ಸದಸ್ಯರ ತಂಡವನ್ನು ಪ್ರಕಟಿಸಿದೆ.ಇದರಲ್ಲಿ ವಿಶೇಷವಾದ ಹೆಸರು 21 ವರ್ಷದ ವೇಗದ ಬೌಲರ್ ಮಾರ್ಕೊ ಯಾನ್ಸನ್. ಭಾರತದ ವಿರುದ್ಧ ಸೆಂಚುರಿಯನ್ ಟೆಸ್ಟ್‌ನಲ್ಲಿ ಪಾದಾರ್ಪಣೆ ಮಾಡಿದ ಈ ಎತ್ತರದ ಬೌಲರ್, ಮೊದಲ ಬಾರಿಗೆ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆದಾಗ್ಯೂ, ಟೆಸ್ಟ್ ಸರಣಿಗೂ ಮುನ್ನ ಗಾಯಗೊಂಡಿದ್ದ ತಮ್ಮ ವೇಗದ ಬೌಲರ್ ಎನ್ರಿಕ್ ನಾರ್ಕಿಯಾ ಇಲ್ಲದೆ ಆಫ್ರಿಕನ್ ತಂಡವು ಈ ಸರಣಿಯಲ್ಲಿ ಮೈದಾನಕ್ಕಿಳಿಯಬೇಕಾಗಿದೆ.
ಬಹುತೇಕ ಎಲ್ಲ ಪ್ರಮುಖ ಆಟಗಾರರು ದಕ್ಷಿಣ ಆಫ್ರಿಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನೆದರ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ತಂಡದಲ್ಲಿದ್ದ ವೇಯ್ನ್ ಪಾರ್ನೆಲ್, ಸಿಸಂದಾ ಮಂಗ್ಲಾ ಹಾಗೂ ಜುಬೇರ್ ಹಮ್ಜಾ ಕೂಡ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಕೊರೊನಾ ಕಾರಣದಿಂದ ಮೊದಲ ಏಕದಿನ ಪಂದ್ಯದ ನಂತರವೇ ಆ ಸರಣಿಯನ್ನು ಮುಂದೂಡಲಾಗಿತ್ತು. ಅದೇ ಸಮಯದಲ್ಲಿ, ಈ ಸರಣಿಯಲ್ಲಿ ವಿರಾಮ ತೆಗೆದುಕೊಂಡಿದ್ದ ನಾಯಕ ಬವುಮಾ, ಕ್ವಿಂಟನ್ ಡಿ ಕಾಕ್ ಮತ್ತು ಕಗಿಸೊ ರಬಾಡ ಅವರಂತಹ ಹಿರಿಯ ಆಟಗಾರರು ಸಹ ಸರಣಿಗೆ ಮರಳಿದ್ದಾರೆ. ಈ ಸರಣಿಯು ದಕ್ಷಿಣ ಆಫ್ರಿಕಾಕ್ಕೆ ಅತ್ಯಂತ ಮಹತ್ವದ್ದಾಗಿದೆ ಏಕೆಂದರೆ ಈ ಮೂಲಕ ಅವರು 2023 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಅರ್ಹತಾ ಅಂಕಗಳನ್ನು ಗಳಿಸಬೇಕಾಗಿದೆ.
Seamer Marco Jansen receives his maiden #Proteas ODI squad call-up as Temba Bavuma returns to captain the side for the #BetwayODISeries against India ??
Wayne Parnell, Sisanda Magala and Zubayr Hamza retain their spots ?#SAvIND #BePartOfIt pic.twitter.com/Nkmd9FBAb3
— Cricket South Africa (@OfficialCSA) January 2, 2022
ಡಿಕಾಕ್‌ಗೂ ಅವಕಾಶ ಸೆಂಚುರಿಯನ್ ಟೆಸ್ಟ್‌ನಲ್ಲಿ ಭಾರತ ವಿರುದ್ಧ ಸೋತ ನಂತರ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ 29 ವರ್ಷದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಕೂಡ ಸ್ಥಾನ ಪಡೆದಿದ್ದಾರೆ. ಡಿ ಕಾಕ್ ತನ್ನ ನಿವೃತ್ತಿಯೊಂದಿಗೆ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರಿಸುವುದಾಗಿ ಘೋಷಿಸಿದ್ದರು ಮತ್ತು ಟೆಸ್ಟ್ ಸರಣಿಯ ಮಧ್ಯದಲ್ಲಿ ತಂಡವನ್ನು ತೊರೆದರೂ ಕಡಿಮೆ ಸ್ವರೂಪಗಳಲ್ಲಿ ಅವರು ಪ್ರಮುಖ ಆಟಗಾರ ಎಂದು ಆಫ್ರಿಕನ್ ಮಂಡಳಿ ಸ್ಪಷ್ಟಪಡಿಸಿದೆ.
ODI ಸರಣಿಗಾಗಿ ದಕ್ಷಿಣ ಆಫ್ರಿಕಾದ ತಂಡ ಟೆಂಬಾ ಬವುಮಾ (ನಾಯಕ), ಕೇಶವ್ ಮಹಾರಾಜ್ (ಉಪನಾಯಕ), ಕ್ವಿಂಟನ್ ಡಿ ಕಾಕ್, ಯನಮಾನ್ ಮಲನ್, ಜುಬೇರ್ ಹಮ್ಜಾ, ಮಾರ್ಕೊ ಯಾನ್ಸನ್, ಸಿಸಂದಾ ಮಂಗ್ಲಾ, ಏಡನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ವೇಯ್ನ್ ಪಾರ್ನೆಲ್, ಆಂಡಿಲ್ ಫೆಹ್ಲುಕ್ವಾಯೊ, ಡ್ವೇಯ್ನ್ ಪ್ರಿಟೋರಿಯಸ್, ಕಾಗಿಸೋ ರಬಡಾ , ತಬ್ರೇಜ್ ಶಂಬಾಡಾ , ರಾಸಿ ವಾನ್ ಡೆರ್ ಡುಸ್ಸೆನ್, ಕೈಲ್ ವೆರೆನ್.
Published On - 7:35 pm, Sun, 2 January 22