IND vs SA: 2ನೇ ಏಕದಿನ ಪಂದ್ಯ ಗೆದ್ದ ಆಫ್ರಿಕಾ; ಟೆಸ್ಟ್ ಜೊತೆಗೆ ಏಕದಿನ ಸರಣಿಯನ್ನೂ ಕಳೆದುಕೊಂಡ ಭಾರತ

IND vs SA: ದಕ್ಷಿಣ ಆಫ್ರಿಕಾ ಪ್ರವಾಸವು ಭಾರತೀಯ ಕ್ರಿಕೆಟ್ ತಂಡಕ್ಕೆ ತುಂಬಾ ನಿರಾಶಾದಾಯಕವಾಗಿದೆ ಎಂದು ಸಾಬೀತಾಗಿದೆ. ಟೆಸ್ಟ್ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಏಕದಿನ ಸರಣಿಯನ್ನೂ ಕಳೆದುಕೊಂಡಿದೆ.

IND vs SA: 2ನೇ ಏಕದಿನ ಪಂದ್ಯ ಗೆದ್ದ ಆಫ್ರಿಕಾ; ಟೆಸ್ಟ್ ಜೊತೆಗೆ ಏಕದಿನ ಸರಣಿಯನ್ನೂ ಕಳೆದುಕೊಂಡ ಭಾರತ
ಭಾರತ- ಆಫ್ರಿಕಾ 2ನೇ ಏಕದಿನ ಸರಣಿ
Follow us
TV9 Web
| Updated By: ಪೃಥ್ವಿಶಂಕರ

Updated on: Jan 21, 2022 | 10:18 PM

ದಕ್ಷಿಣ ಆಫ್ರಿಕಾ ಪ್ರವಾಸವು ಭಾರತೀಯ ಕ್ರಿಕೆಟ್ ತಂಡಕ್ಕೆ ತುಂಬಾ ನಿರಾಶಾದಾಯಕವಾಗಿದೆ ಎಂದು ಸಾಬೀತಾಗಿದೆ. ಟೆಸ್ಟ್ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಏಕದಿನ ಸರಣಿಯನ್ನೂ ಕಳೆದುಕೊಂಡಿದೆ. ಶುಕ್ರವಾರ, ಜೂನ್ 21 ರಂದು ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ಭಾರತವನ್ನು 7 ವಿಕೆಟ್‌ಗಳಿಂದ ಸೋಲಿಸಿ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು. ಜನವರಿ 19 ರಂದು ಪಾರ್ಲ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 31 ರನ್‌ಗಳಿಂದ ಟೀಮ್ ಇಂಡಿಯಾವನ್ನು ಸೋಲಿಸಿತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿತ್ತು, ಆದರೆ ಮತ್ತೊಮ್ಮೆ ಟೀಂ ಇಂಡಿಯಾ ಬ್ಯಾಟಿಂಗ್ ಮತ್ತು ಬೌಲಿಂಗ್ ಬಲವನ್ನು ತೋರಿಸಲು ಸಾಧ್ಯವಾಗಲಿಲ್ಲ. ಭಾರತ ನೀಡಿದ 288 ರನ್‌ಗಳ ಗುರಿಯನ್ನು ದಕ್ಷಿಣ ಆಫ್ರಿಕಾ 49ನೇ ಓವರ್‌ನಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಸಾಧಿಸಿತು. ದಕ್ಷಿಣ ಆಫ್ರಿಕಾ ಪರ ಆರಂಭಿಕರಾದ ಯನಮನ್ ಮಲಾನ್ ಮತ್ತು ಕ್ವಿಂಟನ್ ಡಿ ಕಾಕ್ ಅತ್ಯುತ್ತಮ ಇನ್ನಿಂಗ್ಸ್ ಆಡಿದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಟೀಂ ಇಂಡಿಯಾ ರಿಷಬ್ ಪಂತ್ ಮತ್ತು ಕೆಎಲ್ ರಾಹುಲ್ ಅವರ ಅರ್ಧಶತಕದ ನೆರವಿನಿಂದ 287 ರನ್ ಗಳಿಸಿತು. ಗುರಿ ತುಂಬಾ ದೊಡ್ಡದಾಗಿರಲಿಲ್ಲದಿದ್ದರಿಂದ ಆರಂಭದಿಂದಲೂ ಭಾರತಕ್ಕೆ ಯಶಸ್ಸು ಬೇಕಿತ್ತು, ಆದರೆ ಅದು ಸಂಭವಿಸಲಿಲ್ಲ. ಕಳೆದ 2 ವರ್ಷಗಳಿಂದ ನಡೆಯುತ್ತಿರುವ ಕಥೆ ಮತ್ತೆ ಪುನರಾವರ್ತನೆಯಾಗಿದ್ದು, ಆರಂಭಿಕ ಓವರ್‌ಗಳಲ್ಲಿ ಟೀಂ ಇಂಡಿಯಾದ ಬೌಲರ್‌ಗಳು ವಿಕೆಟ್ ಪಡೆಯುವಲ್ಲಿ ವಿಫಲರಾದರು. ಆರಂಭಿಕ ಜೋಡಿ ಕ್ವಿಂಟನ್ ಡಿ ಕಾಕ್ ಮತ್ತು ಮಲಾನ್ ಆಕ್ರಮಣಕಾರಿ ಬ್ಯಾಟಿಂಗ್‌ನಲ್ಲಿ ಶತಕದ ಜೊತೆಯಾಟವನ್ನು ಮಾಡಿದರು.

ಡಿಕಾಕ್-ಮಲನ್ ಅವರ ಅತ್ಯುತ್ತಮ ಇನ್ನಿಂಗ್ಸ್ ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕೆ ಆರ್ಥಿಕ ಆರಂಭವನ್ನು ಮಾಡಿದರು, ಆದರೆ ಭುವನೇಶ್ವರ್ ಕುಮಾರ್ ವಿರುದ್ಧ, ಡಿಕಾಕ್ ಮತ್ತು ಮಲಾನ್ ತೀವ್ರವಾಗಿ ರನ್ ಲೂಟಿ ಮಾಡಿದರು. ಈ ವೇಳೆ ಇಬ್ಬರೂ ಬ್ಯಾಟ್ಸ್‌ಮನ್‌ಗಳು ತಮ್ಮ ಅರ್ಧಶತಕಗಳನ್ನು ಪೂರೈಸಿದ್ದು, ಕೇವಲ 16 ಓವರ್‌ಗಳಲ್ಲಿ ತಂಡ 100 ರನ್‌ಗಳ ಗಡಿ ದಾಟಿತು. ಮೊದಲ ವಿಕೆಟ್​ಗಾಗಿ ಭಾರತ 22ನೇ ಓವರ್‌ಗೆ ಕಾಯಬೇಕಾಯಿತು. ಡಿ ಕಾಕ್ (78 ರನ್, 66 ಎಸೆತ, 7 ಬೌಂಡರಿ, 3 ಸಿಕ್ಸರ್) ಶಾರ್ದೂಲ್ ಠಾಕೂರ್ ಎಸೆತದಲ್ಲಿ ಎಲ್ ಬಿಡಬ್ಲ್ಯು ಬಲೆಗೆ ಬಿದ್ದರು. ಡಿ ಕಾಕ್ ಮತ್ತು ಮಲಾನ್ ನಡುವೆ 132 ರನ್‌ಗಳ ಜೊತೆಯಾಟವಿತ್ತು ಮತ್ತು ಇದು ಗೆಲುವಿನ ಅಡಿಪಾಯವನ್ನು ಸಿದ್ಧಪಡಿಸಿತು.

ಶತಕ ವಂಚಿತರಾದ ಮಲನ್ ಈ ಯಶಸ್ಸಿನ ನಂತರ ಭಾರತ ಮತ್ತೆ ಎರಡನೇ ಯಶಸ್ಸಿಗಾಗಿ ಬಹಳ ಸಮಯ ಕಾಯಬೇಕಾಯಿತು. ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ದಕ್ಷಿಣ ಆಫ್ರಿಕಾದ ನಾಯಕ ಟೆಂಬಾ ಬವುಮಾ ಎರಡನೇ ವಿಕೆಟ್​ಗೆ ಮಲಾನ್ ಜತೆ 80 ರನ್ ಗಳ ಜತೆಯಾಟವಾಡಿದರು. ಮಲಾನ್ ನಾಲ್ಕನೇ ಅರ್ಧಶತಕವನ್ನು ತಪ್ಪಿಸಿಕೊಂಡರು. ಅವರು 91 ರನ್ (108 ಎಸೆತ, 8 ಬೌಂಡರಿ, 1 ಸಿಕ್ಸರ್) ಗಳಿಸಿದ್ದಾಗ ಜಸ್ಪ್ರೀತ್ ಬುಮ್ರಾ ಎಸೆತದಲ್ಲಿ ಬೌಲ್ಡ್ ಆದರು. ಆದರೆ, ಆ ವೇಳೆಗಾಗಲೇ ದಕ್ಷಿಣ ಆಫ್ರಿಕಾ 212 ರನ್ ಗಳಿಸಿ ಗೆಲುವು ನಿರ್ಧರಿಸಿತ್ತು. ಮಲಾನ್ ನಂತರ ಬವುಮಾ (35) ಅವರದೇ ಎಸೆತದಲ್ಲಿ ಯುಜ್ವೇಂದ್ರ ಚಹಲ್​ಗೆ ಕ್ಯಾಚಿತ್ತು ಪೆವಿಲಿಯನ್ ಮರಳಿದರು. ಆದಾಗ್ಯೂ, ಇದಾದ ನಂತರ ರಾಸಿ ವ್ಯಾನ್ ಡೆರ್ ಡಸ್ಸೆನ್ ಮತ್ತು ಏಡನ್ ಮಾರ್ಕ್ರಾಮ್ ಯಾವುದೇ ವಿಕೆಟ್ ಪತನಕ್ಕೆ ಅವಕಾಶ ನೀಡದೆ 74 ರನ್‌ಗಳ ಉತ್ತಮ ಜೊತೆಯಾಟದೊಂದಿಗೆ ಪಂದ್ಯವನ್ನು ಅಂತ್ಯಕ್ಕೆ ಕೊಂಡೊಯ್ದರು.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್