IND vs SA: ಭಾರತ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡ ಪ್ರಕಟ! ಬೇಬಿ ಎಬಿಗಿಲ್ಲ ಅವಕಾಶ

IND vs SA: ದಕ್ಷಿಣ ಆಫ್ರಿಕಾದ ಆಯ್ಕೆಗಾರರು ತೆಂಬಾ ಬವುಮಾ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಬೌಲರ್‌ಗಳಲ್ಲಿ ರಬಾಡ ಮತ್ತು ಎನ್ರಿಕ್ ನೋರ್ಕಿಯಾ ಅವರ ಹೆಸರುಗಳನ್ನು ಸೇರಿಸಲಾಗಿದೆ. ಲುಂಗಿ ಎಂಗಿಡಿಗೂ ಅವಕಾಶ ಸಿಕ್ಕಿದೆ.

IND vs SA: ಭಾರತ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡ ಪ್ರಕಟ! ಬೇಬಿ ಎಬಿಗಿಲ್ಲ ಅವಕಾಶ
ರೋಹಿತ್ ಶರ್ಮಾ, ತೆಂಬಾ ಬಾವುಮಾ
Follow us
| Updated By: ಪೃಥ್ವಿಶಂಕರ

Updated on: May 17, 2022 | 3:29 PM

ಇಂಡಿಯನ್ ಪ್ರೀಮಿಯರ್ ಲೀಗ್ ( Indian Premier League 2022) ಮುಗಿದ ನಂತರ, ಟೀಂ ಇಂಡಿಯಾ T20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಬೇಕಾಗಿದೆ. ಈ ಸರಣಿಯು ಜೂನ್ 9 ರಿಂದ ಪ್ರಾರಂಭವಾಗಲಿದ್ದು, ಈ ಸರಣಿಗಾಗಿ ದಕ್ಷಿಣ ಆಫ್ರಿಕಾ ತನ್ನ 16 ಸದಸ್ಯರ ತಂಡವನ್ನು (South Africa T20 squad vs India) ಪ್ರಕಟಿಸಿದೆ. ದಕ್ಷಿಣ ಆಫ್ರಿಕಾದ ಆಯ್ಕೆಗಾರರು ತೆಂಬಾ ಬವುಮಾ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಬೌಲರ್‌ಗಳಲ್ಲಿ ರಬಾಡ ಮತ್ತು ಎನ್ರಿಕ್ ನೋರ್ಕಿಯಾ ಅವರ ಹೆಸರುಗಳನ್ನು ಸೇರಿಸಲಾಗಿದೆ. ಲುಂಗಿ ಎಂಗಿಡಿಗೂ ಅವಕಾಶ ಸಿಕ್ಕಿದೆ. ಆದರೆ ಬೇಬಿ ಎಬಿ ಎಂದೇ ಖ್ಯಾತರಾಗಿರುವ ಡೆವಾಲ್ಡ್ ಬ್ರೆವಿಸ್ (Dewald Brevis) ದಕ್ಷಿಣ ಆಫ್ರಿಕಾ ತಂಡದಲ್ಲಿ ಸ್ಥಾನ ಪಡೆದಿಲ್ಲ.

ದಕ್ಷಿಣ ಆಫ್ರಿಕಾ ತಂಡದ ಕಮಾಂಡ್ ತೆಂಬಾ ಬಾವುಮಾ ಕೈಯಲ್ಲಿದೆ. ಎನ್ರಿಕ್ ನಾರ್ಕಿಯಾ ತಂಡಕ್ಕೆ ಮರಳಿದ್ದು, ಬಲಗೈ ಬ್ಯಾಟ್ಸ್‌ಮನ್ ಟ್ರಿಸ್ಟಾನ್ ಸ್ಟಬ್ಸ್ ಮೊದಲ ಬಾರಿಗೆ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಟ್ರಿಸ್ಟಾನ್ ಸ್ಟಬ್ಸ್ ಇತ್ತೀಚೆಗೆ ಮುಂಬೈ ಇಂಡಿಯನ್ಸ್ ಪರ ಆಡುವ ಅವಕಾಶವನ್ನು ಪಡೆದಿದ್ದರು. ಆದರೆ, ಈ ಬಲಗೈ ಬ್ಯಾಟ್ಸ್‌ಮನ್‌ಗೆ ಚೊಚ್ಚಲ ಐಪಿಎಲ್ ಪಂದ್ಯದಲ್ಲಿ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಎರಡನೇ ಎಸೆತದಲ್ಲಿ ಎಲ್ಬಿಡಬ್ಲ್ಯು ಔಟ್ ಆದರು. ಸ್ಟಬ್ಸ್ ದಕ್ಷಿಣ ಆಫ್ರಿಕಾ ತಂಡಕ್ಕೆ ಆಯ್ಕೆಯಾದ ನಂತರ ಮುಂಬೈ ಇಂಡಿಯನ್ಸ್ ಕೂಡ ಈ ಆಟಗಾರನನ್ನು ಅಭಿನಂದಿಸಿದೆ.

ಸ್ಟಬ್ಸ್ ಯಾರು? ಟ್ರಿಸ್ಟಾನ್ ಸ್ಟಬ್ಸ್ ಕೇವಲ 21 ವರ್ಷ ವಯಸ್ಸಿನ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್. ಈ ಬಲಗೈ ಬ್ಯಾಟರ್ 18 T20 ಪಂದ್ಯಗಳಲ್ಲಿ 36 ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ 506 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ, ಸ್ಟಬ್‌ ಸ್ಟ್ರೈಕ್ ರೇಟ್ 156 ಕ್ಕಿಂತ ಹೆಚ್ಚು. ಹಾಗೆಯೇ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ, ಸ್ಟಬ್ಸ್ 46 ಕ್ಕಿಂತ ಹೆಚ್ಚು ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಸ್ಟಬ್ಸ್ ಮೊದಲ ಐಪಿಎಲ್ ಮ್ಯಾಚ್‌ನಲ್ಲಿ ಫ್ಲಾಪ್ ಆಗಿದ್ದರೂ, ಈ ಆಟಗಾರನ ಪ್ರತಿಭೆಯನ್ನು ಗುರುತಿಸಿ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ
Image
PBKS vs DC Highlights, IPL 2022: ಪಂಜಾಬ್ ಮಣಿಸಿದ ಡೆಲ್ಲಿ; 5ನೇ ಸ್ಥಾನಕ್ಕಿಳಿದ ಆರ್​ಸಿಬಿ
Image
MI vs SRH IPL 2022 Match Prediction: ಹೈದರಾಬಾದ್‌ ಪ್ಲೇಆಫ್​ಗೇರಬೇಕೆಂದರೆ ಮುಂಬೈ ತಂಡವನ್ನು ಸೋಲಿಸಲೇಬೇಕು
Image
IPL 2022 MI vs SRH Live Streaming: ಕೇನ್ ಪಡೆ ಗೆಲ್ಲಲೇಬೇಕು.. ಮುಂಬೈಗೆ ಔಪಚಾರಿಕ; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ತಂಡ ತೆಂಬಾ ಬವುಮಾ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಕ್ ನಾರ್ಖಿಯಾ, ವೇಯ್ನ್ ಪಾರ್ನೆಲ್, ಡ್ವೇನ್ ಪ್ರಿಟೋರಿಯಸ್, ಕಗಿಸೋ ರಬಾಡ, ತಬ್ರೈಜ್ ಶಮ್ಸಿ, ಟ್ವೈನ್ ಪ್ರಿಟೋರಿಯಸ್, ವೇಯ್ನ್ ಡಾರ್ ಡುಸನ್, ಮಾರ್ಕೊ ಯಾನ್ಸನ್.

ಭಾರತ-ದಕ್ಷಿಣ ಆಫ್ರಿಕಾ T20 ಸರಣಿ ವೇಳಾಪಟ್ಟಿ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಿನ ಮೊದಲ ಟಿ20 ಪಂದ್ಯ ಜೂನ್ 9 ರಂದು ನಡೆಯಲಿದೆ. ಇದಾದ ನಂತರ ಜೂನ್ 12, ಜೂನ್ 14, ಜೂನ್ 17 ಮತ್ತು ಜೂನ್ 19 ರಂದು ಪಂದ್ಯಗಳು ನಡೆಯಲಿದ್ದು, ದೆಹಲಿ, ಕಟಕ್, ವೈಜಾಗ್, ರಾಜ್ ಕೋಟ್ ಮತ್ತು ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ. ಈ ಸರಣಿಯಲ್ಲಿ ಭಾರತ ತಂಡದ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಬಹುದು. ಅದೇ ಸಮಯದಲ್ಲಿ, ಅನೇಕ ಯುವ ಮುಖಗಳು ತಮ್ಮ ಚೊಚ್ಚಲ ಪ್ರವೇಶವನ್ನು ಮಾಡಬಹುದು.

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು