AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್

Suryakumar Yadav Records: ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಸಾವಿರ ರನ್ ಪೂರೈಸಿದ ವಿರಾಟ್ ಕೊಹ್ಲಿಯ ದಾಖಲೆಯನ್ನೂ ಕೂಡ ಸರಿಗಟ್ಟಿದ್ದಾರೆ. ಕಿಂಗ್ ಕೊಹ್ಲಿ 56 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಕೂಡ 56 ಟಿ20 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್​ಗಳ ಸಾಧನೆ ಮಾಡಿದ್ದಾರೆ.

ಧೋನಿ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್
Surya-Finch-Dhoni
TV9 Web
| Updated By: ಝಾಹಿರ್ ಯೂಸುಫ್|

Updated on:Dec 13, 2023 | 4:20 PM

Share

ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಧೋನಿ ಹೆಸರಿನಲ್ಲಿದ್ದ ವಿಶೇಷ ದಾಳೆಯನ್ನು ಮುರಿದಿದ್ದಾರೆ. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆರಂಭದಿಂದಲೇ ಸೌತ್ ಆಫ್ರಿಕಾ ಬೌಲರ್​ಗಳನ್ನು ಬೆಂಡೆತ್ತುವ ಮೂಲಕ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ 36 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 56 ರನ್ ಬಾರಿಸಿದರು.

ಈ ಅರ್ಧಶತಕದೊಂದಿಗೆ ಸೌತ್ ಆಫ್ರಿಕಾ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಟೀಮ್ ಇಂಡಿಯಾ ನಾಯಕ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು.

2007 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಭಾರತ ತಂಡದ ನಾಯಕ ಎಂಎಸ್ ಧೋನಿ 45 ರನ್ ಬಾರಿಸಿದ್ದು ಗರಿಷ್ಠ ಸ್ಕೋರ್​ ಆಗಿತ್ತು. ಇದೀಗ 56 ರನ್​ ಬಾರಿಸುವ ಮೂಲಕ ಸೌತ್ ಆಫ್ರಿಕಾ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಭಾರತದ ನಾಯಕ ಎಂಬ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

ಇದಲ್ಲದೆ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಸಾವಿರ ರನ್ ಪೂರೈಸಿದ ವಿರಾಟ್ ಕೊಹ್ಲಿಯ ದಾಖಲೆಯನ್ನೂ ಕೂಡ ಸರಿಗಟ್ಟಿದ್ದಾರೆ. ಕಿಂಗ್ ಕೊಹ್ಲಿ 56 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಕೂಡ 56 ಟಿ20 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್​ಗಳ ಸಾಧನೆ ಮಾಡಿದ್ದಾರೆ.

ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 2 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಮಾಜಿ ನಾಯಕ ಆರೋನ್ ಫಿಂಚ್ ಹೆಸರಿನಲ್ಲಿತ್ತು.

ಇದನ್ನೂ ಓದಿ: IPL 2024 Auction: ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 333 ಆಟಗಾರರ ಪಟ್ಟಿ ಇಲ್ಲಿದೆ

ಆರೋನ್ ಫಿಂಚ್ 1283 ಎಸೆತಗಳಲ್ಲಿ 2 ಸಾವಿರ ರನ್ ಪೂರೈಸಿ ದಾಖಲೆ ಬರೆದಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಕೇವಲ 1164 ಎಸೆತಗಳಲ್ಲಿ 2000 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 2 ಸಾವಿರ ರನ್ ಪೂರೈಸಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

Published On - 4:20 pm, Wed, 13 December 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ