IND vs SA: ಟಾಸ್ ಸೋತ ಟೀಂ ಇಂಡಿಯಾದಲ್ಲಿ 3 ಬದಲಾವಣೆ; ಸಂಜುಗೆ ಕೊನೆಗೂ ಅವಕಾಶ

India vs South Africa T20: ಭಾರತ-ದಕ್ಷಿಣ ಆಫ್ರಿಕಾ T20 ಸರಣಿಯ ಅಂತಿಮ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯುತ್ತಿದೆ. ಭಾರತ 2-1 ಮುನ್ನಡೆಯಲ್ಲಿದ್ದು, ಸರಣಿ ಗೆಲ್ಲಲು ಸಜ್ಜಾಗಿದೆ. ದಕ್ಷಿಣ ಆಫ್ರಿಕಾ ಸರಣಿ ಸಮಬಲಗೊಳಿಸಲು ಗೆಲ್ಲಲೇಬೇಕು. ಟಾಸ್ ಗೆದ್ದ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಂ ಇಂಡಿಯಾದಲ್ಲಿ 3 ಬದಲಾವಣೆಗಳಾಗಿವೆ. ನಿರ್ಣಾಯಕ ಪಂದ್ಯ ರೋಚಕ ಹೋರಾಟಕ್ಕೆ ಸಾಕ್ಷಿಯಾಗಲಿದೆ.

IND vs SA: ಟಾಸ್ ಸೋತ ಟೀಂ ಇಂಡಿಯಾದಲ್ಲಿ 3 ಬದಲಾವಣೆ; ಸಂಜುಗೆ ಕೊನೆಗೂ ಅವಕಾಶ
Ind Vs Sa

Updated on: Dec 19, 2025 | 6:46 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ( India vs South Africa ) ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತವನ್ನು ತಲುಪಿದೆ. ಉಭಯ ತಂಡಗಳ ನಡುವಿನ ಅಂತಿಮ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯುತ್ತಿದೆ. ಟೀಂ ಇಂಡಿಯಾ ಪ್ರಸ್ತುತ ಸರಣಿಯಲ್ಲಿ 2-1 ಮುನ್ನಡೆಯಲ್ಲಿದ್ದು, ಸರಣಿ ಸೋಲುವ ಆತಂಕವಿಲ್ಲ. ಆದರೆ ದಕ್ಷಿಣ ಆಫ್ರಿಕಾ ತಂಡ ಮಾತ್ರ ಸರಣಿ ಸೋಲಿನಿಂದ ಪಾರಾಗಲು ಇಂದಿನ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕು. ಟೆಸ್ಟ್ ಸರಣಿ ಗೆಲುವಿನೊಂದಿಗೆ ಪ್ರವಾಸ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ಇದೀಗ ಮತ್ತದೇ ಗೆಲುವಿನೊಂದಿಗೆ ಪ್ರವಾಸ ಅಂತ್ಯಗೊಳಿಸಲು ನೋಡುತ್ತಿದೆ. ಇತ್ತ ಟೀಂ ಇಂಡಿಯಾ ಏಕದಿನ ಸರಣಿ ಜೊತೆಗೆ ಟಿ20 ಸರಣಿಯನ್ನು ವಶಪಡಿಸಿಕೊಳ್ಳಲು ಸಜ್ಜಾಗಿದೆ.

ಟಾಸ್ ಗೆದ್ದ ದಕ್ಷಿಣ ಆಫ್ರಿಕಾ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಸರಣಿ ನಿರ್ಧಾರಕ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಇತ್ತ ಟಾಸ್ ಸೋತ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಟಾಸ್ ಗೆದ್ದಿದ್ದರೆ ಮೊದಲು ಬ್ಯಾಟಿಂಗ್ ಆಯ್ದುಕೊಳ್ಳುವುದಾಗಿ ಹೇಳಿದರು. ಅಂದರೆ ಟಾಸ್ ಸೋತರೂ ಟೀಂ ಇಂಡಿಯಾಗೆ ಬೇಕಿದ್ದು, ಸಿಕ್ಕಿದೆ. ಇನ್ನು ಟೀಂ ಇಂಡಿಯಾದಲ್ಲಿ ಬರೋಬ್ಬರಿ 3 ಬದಲಾವಣೆಗಳನ್ನು ಮಾಡಲಾಗಿದ್ದರೆ, ಆಫ್ರಿಕಾ ತಂಡದಲ್ಲಿ 1 ಬದಲಾವಣೆಯಾಗಿದೆ.

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ.

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್ (ನಾಯಕ), ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೇರಾ, ಜಾರ್ಜ್ ಲಿಂಡೆ, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಲುಂಗಿ ಎನ್‌ಗಿಡಿ ಮತ್ತು ಒಟ್ನೀಲ್ ಬಾರ್ಟ್‌ಮ್ಯಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Fri, 19 December 25