IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಬಲಿಷ್ಠ ಪಡೆಯನ್ನ ಕಣಕ್ಕಿಳಿಸಿದ ಸೂರ್ಯ
India vs South Africa T20: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಡರ್ಬನ್‌ನಲ್ಲಿ ಆರಂಭವಾಗಿದೆ. ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡದಲ್ಲಿ ಹೆಚ್ಚಿನ ಬದಲಾವಣೆಗಳಿಲ್ಲ. ಲಂಕಾ ವಿರುದ್ಧ ಕಣಕ್ಕಿಳಿದಿದ್ದ ತಂಡವೇ ಇದೀಗ ಆಫ್ರಿಕಾ ವಿರುದ್ಧವೂ ಆಡುತ್ತಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಡರ್ಬನ್‌ನ ಕಿಂಗ್ಸ್‌ಮೀಡ್ ಮೈದಾನದಲ್ಲಿ ಆರಂಭವಾಗಿದೆ. ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಏಡನ್ ಮಾರ್ಕ್ರಾಮ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಸೋತ ಬಳಿಕ ಮಾತನಾಡಿದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಟಾಸ್ ಗೆದ್ದಿದ್ದರೆ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದೆ ಎಂದಿದ್ದಾರೆ. ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಎರಡು ತಂಡಗಳಲ್ಲಿ ಯಾರ್ಯಾರಿಗೆ ಅವಕಾಶ ಸಿಕ್ಕಿದೆ ಎಂಬುದರ ವಿವರ ಇಲ್ಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲಾಗಿಲ್ಲ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಯಾವ ತಂಡ ಕಣಕ್ಕಿಳಿದಿತ್ತೋ ಅದೇ ತಂಡವನ್ನು ಹರಿಣಗಳ ವಿರುದ್ಧ ಕಣಕ್ಕಿಳಿಸಲಾಗಿದೆ. ಲಂಕಾ ವಿರುದ್ಧ ಟೀಂ ಇಂಡಿಯಾ ಟಿ20 ಸರಣಿಯನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಗೆಲುವಿನ ಸಂಯೋಜನೆಯನ್ನು ಬದಲಿಸುವ ಗೋಜಿಗೆ ಆಯ್ಕೆ ಮಂಡಳಿ ಹೋಗಿಲ್ಲ.
🚨 Toss Update 🚨
South Africa win the toss in the 1st T20I and elect to field.
Live – https://t.co/0OuHPYbn9U#TeamIndia | #SAvIND pic.twitter.com/6IuUahZ7pB
— BCCI (@BCCI) November 8, 2024
ಉಭಯ ತಂಡಗಳು
ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಅವೇಶ್ ಖಾನ್, ವರುಣ್ ಚಕ್ರವರ್ತಿ.
Here’s a look at #TeamIndia‘s Playing XI for the #SAvIND T20I series opener 👌👌
Live – https://t.co/0NYhIHEpq0 pic.twitter.com/4gYe9ZPi6A
— BCCI (@BCCI) November 8, 2024
ದಕ್ಷಿಣ ಆಫ್ರಿಕಾ ತಂಡ: ರಿಯಾನ್ ರಿಕೆಲ್ಟನ್ (ವಿಕೆಟ್ ಕೀಪರ್), ಏಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಪ್ಯಾಟ್ರಿಕ್ ಕ್ರುಗರ್, ಮಾರ್ಕೊ ಯಾನ್ಸೆನ್, ಆಂಡಿಲ್ ಸಿಮೆಲೇನ್, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ನಕಬಯೋಮ್ಜಿ ಪೀಟರ್.
ಮುಖಾಮುಖಿ ವರದಿ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇದುವರೆಗೆ 27 ಟಿ20 ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ 15 ಪಂದ್ಯಗಳನ್ನು ಗೆದ್ದಿದ್ದು, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಇನ್ನು ಉಭಯ ತಂಡಗಳ ಇತ್ತೀಚಿನ ಮುಖಾಮುಖಿಯ ಬಗ್ಗೆ ಹೇಳುವುದಾದರೆ.. ಈ ವರ್ಷ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ 2024 ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಎರಡೂ ತಂಡಗಳು ಕೊನೆಯ ಬಾರಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಟೀಂ ಇಂಡಿಯಾ ಏಳು ರನ್‌ಗಳಿಂದ ಗೆದ್ದುಕೊಂಡಿದಲ್ಲದೆ, ಟಿ20 ವಿಶ್ವಕಪ್ ಎತ್ತಿಹಿಡಿದಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:24 pm, Fri, 8 November 24