AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್, ಕೊಹ್ಲಿಗೆ ವಿಶ್ರಾಂತಿ

Team India South Africa Tour: ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಿದ್ದು, ಕನ್ನಡಿಗ ಕೆಎಲ್ ರಾಹುಲ್​​ಗೆ ಏಕದಿನ ತಂಡದ ನಾಯಕನ ಪಟ್ಟ ನೀಡಿದೆ. ಟಿ20ಯಲ್ಲಿ ಸೂರ್ಯಕುಮಾರ್ ಯಾದವ್​ಗೆ ನಾಯಕತ್ವ ವಹಿಸಲಾಗಿದೆ.

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್, ಕೊಹ್ಲಿಗೆ ವಿಶ್ರಾಂತಿ
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ
Ganapathi Sharma
|

Updated on:Nov 30, 2023 | 10:08 PM

Share

ನವದೆಹಲಿ, ನವೆಂಬರ್ 30: ಆಸ್ಟ್ರೇಲಿಯಾ ವಿರುದ್ಧದ ಟಿ20 ಕ್ರಿಕೆಟ್​​ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಟೀಂ ಇಂಡಿಯಾ, ವಿಶ್ವಕಪ್ ಫೈನಲ್‌ ಸೋಲಿನ ಬಳಿಕ ಇದೀಗ ಮೊದಲ ವಿದೇಶಿ ಪ್ರವಾಸಕ್ಕೆ ಅಣಿಯಾಗಿದೆ. ಡಿಸೆಂಬರ್‌ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ (IND vs SA) ಭಾರತ ತಂಡವನ್ನು (Team India) ಪ್ರಕಟಿಸಲಾಗಿದ್ದು, ಸ್ಟಾರ್​​ ಬ್ಯಾಟರ್​​ಗಳಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿಗೆ (Virat Kohli) ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಾ ಅವರು ಟೆಸ್ಟ್ ಸರಣಿಯಲ್ಲಿ ಮಾತ್ರ ತಂಡವನ್ನು ಮುನ್ನಡೆಸಲಿದ್ದಾರೆ.

ರೋಹಿತ್ ಹಾಗೂ ಕೊಹ್ಲಿ ಏಕದಿನ ಹಾಗೂ ಟಿ20ಗೆ ತಮ್ಮನ್ನು ಪರಿಗಣಿಸದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮನವಿ ಮಾಡಿದ್ದರು ಎನ್ನಲಾಗಿದೆ.

ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ ಕನ್ನಡಿಗ ರಾಹುಲ್​

ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಿದ್ದು, ಕನ್ನಡಿಗ ಕೆಎಲ್ ರಾಹುಲ್​​ಗೆ ಏಕದಿನ ತಂಡದ ನಾಯಕನ ಪಟ್ಟ ನೀಡಿದೆ. ಟಿ20ಯಲ್ಲಿ ಸೂರ್ಯಕುಮಾರ್ ಯಾದವ್​ಗೆ ನಾಯಕತ್ವ ವಹಿಸಲಾಗಿದೆ.

ರೋಹಿತ್ ಮತ್ತು ವಿರಾಟ್ ಕೊಹ್ಲಿ ಟಿ20 ಮತ್ತು ಏಕದಿನ ಸರಣಿಯಿಂದ ವಿಶ್ರಾಂತಿ ಬಯಸಿ ಮನವಿ ಮಾಡಿದ್ದರು ಎಂದು ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದೆ. ಉಭಯ ಆಟಗಾರರು ಟೆಸ್ಟ್ ಸರಣಿಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ.

ರೋಹಿತ್ ಅವರು ಟೆಸ್ಟ್ ತಂಡದ ನಾಯಕರಾಗಿರಲಿದ್ದಾರೆ. ಟೆಸ್ಟ್ ತಂಡದ ಉಪನಾಯಕರನ್ನಾಗಿ ಜಸ್​​ಪ್ರೀತ್ ಬೂಮ್ರಾ ನೇಮಿಸಲಾಗಿದೆ. ಈ ಸರಣಿಯಿಂದಲೇ ಬೂಮ್ರಾ ಟೆಸ್ಟ್‌ಗೆ ಮರಳಲಿದ್ದಾರೆ. ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಕೂಡ ಈ ತಂಡಕ್ಕೆ ಮರಳಿದ್ದು, ಪ್ರಸಿದ್ಧ್ ಕೃಷ್ಣ ಕೂಡ ಆಯ್ಕೆಯಾಗಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಂ ಇಂಡಿಯಾ 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ.

ಟೀಂ ಇಂಡಿಯಾ ಏಕದಿನ ಸ್ಕ್ವಾಡ್ ಹೀಗಿದೆ

ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ ಹಾಗೂ ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ದೀಪಕ್ ಚಾಹರ್.

ಟೀಂ ಇಂಡಿಯಾ ಟಿ20 ಸ್ಕ್ವಾಡ್

ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಾಹರ್.

ಇದನ್ನೂ ಓದಿ: ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ನಮೀಬಿಯಾ; ಉಳಿದ 1 ಸ್ಥಾನಕ್ಕಾಗಿ 3 ತಂಡಗಳ ನಡುವೆ ಪೈಪೋಟಿ

ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ (ಫಿಟ್​​ನೆಸ್ ಸಮಸ್ಯೆ ಇದ್ದು, ಫಿಟ್​ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದರೆ ಮಾತ್ರ), ಜಸ್​ಪ್ರೀತ್ ಬೂಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:56 pm, Thu, 30 November 23

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?