
ನವದೆಹಲಿ, ನವೆಂಬರ್ 30: ಆಸ್ಟ್ರೇಲಿಯಾ ವಿರುದ್ಧದ ಟಿ20 ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಟೀಂ ಇಂಡಿಯಾ, ವಿಶ್ವಕಪ್ ಫೈನಲ್ ಸೋಲಿನ ಬಳಿಕ ಇದೀಗ ಮೊದಲ ವಿದೇಶಿ ಪ್ರವಾಸಕ್ಕೆ ಅಣಿಯಾಗಿದೆ. ಡಿಸೆಂಬರ್ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ (IND vs SA) ಭಾರತ ತಂಡವನ್ನು (Team India) ಪ್ರಕಟಿಸಲಾಗಿದ್ದು, ಸ್ಟಾರ್ ಬ್ಯಾಟರ್ಗಳಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿಗೆ (Virat Kohli) ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಾ ಅವರು ಟೆಸ್ಟ್ ಸರಣಿಯಲ್ಲಿ ಮಾತ್ರ ತಂಡವನ್ನು ಮುನ್ನಡೆಸಲಿದ್ದಾರೆ.
ರೋಹಿತ್ ಹಾಗೂ ಕೊಹ್ಲಿ ಏಕದಿನ ಹಾಗೂ ಟಿ20ಗೆ ತಮ್ಮನ್ನು ಪರಿಗಣಿಸದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮನವಿ ಮಾಡಿದ್ದರು ಎನ್ನಲಾಗಿದೆ.
ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಿದ್ದು, ಕನ್ನಡಿಗ ಕೆಎಲ್ ರಾಹುಲ್ಗೆ ಏಕದಿನ ತಂಡದ ನಾಯಕನ ಪಟ್ಟ ನೀಡಿದೆ. ಟಿ20ಯಲ್ಲಿ ಸೂರ್ಯಕುಮಾರ್ ಯಾದವ್ಗೆ ನಾಯಕತ್ವ ವಹಿಸಲಾಗಿದೆ.
ರೋಹಿತ್ ಮತ್ತು ವಿರಾಟ್ ಕೊಹ್ಲಿ ಟಿ20 ಮತ್ತು ಏಕದಿನ ಸರಣಿಯಿಂದ ವಿಶ್ರಾಂತಿ ಬಯಸಿ ಮನವಿ ಮಾಡಿದ್ದರು ಎಂದು ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದೆ. ಉಭಯ ಆಟಗಾರರು ಟೆಸ್ಟ್ ಸರಣಿಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ.
ರೋಹಿತ್ ಅವರು ಟೆಸ್ಟ್ ತಂಡದ ನಾಯಕರಾಗಿರಲಿದ್ದಾರೆ. ಟೆಸ್ಟ್ ತಂಡದ ಉಪನಾಯಕರನ್ನಾಗಿ ಜಸ್ಪ್ರೀತ್ ಬೂಮ್ರಾ ನೇಮಿಸಲಾಗಿದೆ. ಈ ಸರಣಿಯಿಂದಲೇ ಬೂಮ್ರಾ ಟೆಸ್ಟ್ಗೆ ಮರಳಲಿದ್ದಾರೆ. ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಕೂಡ ಈ ತಂಡಕ್ಕೆ ಮರಳಿದ್ದು, ಪ್ರಸಿದ್ಧ್ ಕೃಷ್ಣ ಕೂಡ ಆಯ್ಕೆಯಾಗಿದ್ದಾರೆ.
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಂ ಇಂಡಿಯಾ 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ.
ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ ಹಾಗೂ ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ದೀಪಕ್ ಚಾಹರ್.
ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಾಹರ್.
ಇದನ್ನೂ ಓದಿ: ಟಿ20 ವಿಶ್ವಕಪ್ಗೆ ಅರ್ಹತೆ ಪಡೆದ ನಮೀಬಿಯಾ; ಉಳಿದ 1 ಸ್ಥಾನಕ್ಕಾಗಿ 3 ತಂಡಗಳ ನಡುವೆ ಪೈಪೋಟಿ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ (ಫಿಟ್ನೆಸ್ ಸಮಸ್ಯೆ ಇದ್ದು, ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದರೆ ಮಾತ್ರ), ಜಸ್ಪ್ರೀತ್ ಬೂಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:56 pm, Thu, 30 November 23