IND vs SA: ಬಾಕ್ಸಿಂಡ್ ಡೇ ಟೆಸ್ಟ್‌ನಲ್ಲಿ ಭಾರತದ ದಾಖಲೆ ಹೇಗಿದೆ ಗೊತ್ತಾ? ಆಡಿರುವ ಪಂದ್ಯಗಳೆಷ್ಟು?

IND vs SA: ಭಾರತ ತಂಡವು ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಗಳನ್ನು ಹಲವಾರು ಸಂದರ್ಭಗಳಲ್ಲಿ ಆಡಿದೆ. ಆದರೆ ಈ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾದ ದಾಖಲೆ ವಿಶೇಷವಾಗಿಲ್ಲ.

IND vs SA: ಬಾಕ್ಸಿಂಡ್ ಡೇ ಟೆಸ್ಟ್‌ನಲ್ಲಿ ಭಾರತದ ದಾಖಲೆ ಹೇಗಿದೆ ಗೊತ್ತಾ? ಆಡಿರುವ ಪಂದ್ಯಗಳೆಷ್ಟು?
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Dec 24, 2023 | 2:50 PM

ಟಿ20 ಹಾಗೂ ಏಕದಿನ ಸರಣಿಯನ್ನು ಆಡಿ ಮುಗಿಸಿರುವ ಟೀಂ ಇಂಡಿಯಾದ ಇದೀಗ ಆತಿಥೇಯರ ವಿರುದ್ಧ (India vs South Africa) 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯ ಮೊದಲ ಪಂದ್ಯ ಡಿಸೆಂಬರ್ 26 ರಿಂದ ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ಸ್ ಪಾರ್ಕ್​ನಲ್ಲಿ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯ ಗೆಲುವು ರೋಹಿತ್ ಪಡೆಗೆ ತುಂಬಾ ಅವಶ್ಯಕವಾಗಿದೆ. ಏಕೆಂದರೆ ಆಫ್ರಿಕಾ ನೆಲದಲ್ಲಿ ಟೀಂ ಇಂಡಿಯಾ ಇದುವರೆಗೂ ಒಂದೇ ಒಂದು ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಹೀಗಾಗಿ ಬಲಿಷ್ಠ ತಂಡವನ್ನು ಕಟ್ಟಿಕೊಂಡು ಕಣಕ್ಕಿಳಿಯುತ್ತಿರುವ ನಾಯಕ ರೋಹಿತ್ (Rohit Sharma), ಹರಿಣಗಳನ್ನು ಅವರ ನೆಲದಲ್ಲೇ ಮಣಿಸಿ ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದ್ದಾರೆ.

ಬಾಕ್ಸಿಂಗ್ ಡೇ ಟೆಸ್ಟ್ ಯಾವಾಗ ಆರಂಭ?

ಇನ್ನು ಉಭಯ ತಂಡಗಳ ನಡುವೆ ಡಿಸೆಂಬರ್ 26 ರಿಂದ ಡಿಸೆಂಬರ್ 30 ರವರೆಗೆ ಮೊದಲ ಟೆಸ್ಟ್ ಪಂದ್ಯ ನಡೆಯಲ್ಲಿದೆ. ಈ ಟೆಸ್ಟ್ ಪಂದ್ಯದ ವಿಶೇಷತೆ ಏನೆಂದರೆ, ಈ ದಿನಾಂಕಗಳ ನಡುವೆ ನಡೆಯುವ ಈ ಟೆಸ್ಟ್ ಪಂದ್ಯವನ್ನು ಬಾಕ್ಸಿಂಗ್ ಡೇ ಟೆಸ್ಟ್ ಎಂದು ಕರೆಯಲಾಗುತ್ತದೆ. ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಗಳನ್ನು ಆಡುತ್ತವೆ. ಈ ದೇಶಗಳು ಅದೇ ದಿನಾಂಕದಂದು ಬೇರೆ ಯಾವುದೇ ತಂಡದ ವಿರುದ್ಧ ತಮ್ಮ ತವರು ಪಂದ್ಯಗಳನ್ನು ಆಡುತ್ತವೆ. ಈ ಪಂದ್ಯಗಳು ಕ್ರಿಸ್‌ಮಸ್ ನಂತರದ ದಿನ ಪ್ರಾರಂಭವಾಗುತ್ತವೆ. ಅದಕ್ಕಾಗಿಯೇ ಈ ಪಂದ್ಯಗಳನ್ನು ಬಾಕ್ಸಿಂಗ್ ಡೇ ಟೆಸ್ಟ್ ಎಂದೂ ಕರೆಯಲಾಗುತ್ತದೆ.

IND vs SA: ಟೆಸ್ಟ್ ಸರಣಿಗೂ ಮುನ್ನ ನಿವೃತ್ತಿ ಘೋಷಿಸಿದ ಆಫ್ರಿಕಾ ತಂಡದ ಮಾಜಿ ನಾಯಕ!

ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಭಾರತದ ಸಾಧನೆ

ಭಾರತ ತಂಡವು ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಗಳನ್ನು ಹಲವಾರು ಸಂದರ್ಭಗಳಲ್ಲಿ ಆಡಿದೆ. ಆದರೆ ಈ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾದ ದಾಖಲೆ ವಿಶೇಷವೇವಾಗಿಲ್ಲ. ಇದುವರೆಗೂ ಭಾರತ 17 ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ 10 ಪಂದ್ಯಗಳಲ್ಲಿ ಸೋತಿದ್ದರೆ, 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 3 ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ.

ಬಾಕ್ಸಿಂಗ್ ಡೇ ಟೆಸ್ಟ್ ಗೆದ್ದ ಭಾರತದ ನಾಯಕ ಯಾರು?

ಈ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭಾರತ ಟೆಸ್ಟ್ ತಂಡವನ್ನು ಅನೇಕ ನಾಯಕರು ಮುನ್ನಡೆಸಿದ್ದಾರೆ. ಆದರೆ ಅದರಲ್ಲಿ ಹಲವು ನಾಯಕರಿಗೆ ಈ ಟೆಸ್ಟ್ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಆದರೆ ಇಬ್ಬರು ನಾಯಕರು ಮಾತ್ರ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅವರಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಒಬ್ಬರಾಗಿದ್ದರೆ, ಇವರಲ್ಲದೆ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಕಂಡ ಅತ್ಯುತ್ತಮ ನಾಯಕ ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ ಇಡೀ ಜಗತ್ತನ್ನು ಆಳಿತ್ತು. ಇನ್ನು ಈ ಇಬ್ಬರ ನಾಯಕತ್ವದಲ್ಲಿ ಟೀಂ ಇಂಡಿಯಾ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಟೀಂ ಇಂಡಿಯಾ 1985 ರಿಂದ ಬಾಕ್ಸಿಂಗ್ ಡೇ ಟೆಸ್ಟ್ ಆಡುತ್ತಿದೆ. ಆದರೆ ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ತಂಡವು 2010 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಬಾರಿಗೆ ಬಾಕ್ಸಿಂಗ್ ಟೆಸ್ಟ್ ಪಂದ್ಯವನ್ನು ಗೆದ್ದಿತ್ತು. ಇದಾದ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಸೋತಿಲ್ಲ ಎಂಬುದು ವಿಶೇಷ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತವು 2018, 2020 ರಲ್ಲಿ ಆಸ್ಟ್ರೇಲಿಯಾವನ್ನು ಮತ್ತು 2021 ರಲ್ಲಿ ದಕ್ಷಿಣ ಆಫ್ರಿಕಾವನ್ನು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಸೋಲಿಸಿತ್ತು. ಕಳೆದ ಐದು ವರ್ಷಗಳಲ್ಲಿ ಟೀಂ ಇಂಡಿಯಾ ಈ ಟೆಸ್ಟ್ ಪಂದ್ಯದಲ್ಲಿ ಒಮ್ಮೆಯೂ ಸೋತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಇದನ್ನು ಮುಂದುವರಿಸುವ ದೊಡ್ಡ ಜವಾಬ್ದಾರಿ ರೋಹಿತ್ ಶರ್ಮಾ ಹೆಗಲ ಮೇಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Sun, 24 December 23

ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?