
ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಕೋಲ್ಕತ್ತಾ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯಗೊಂಡಿದೆ. ದಕ್ಷಿಣ ಆಫ್ರಿಕಾವನ್ನು 159 ರನ್ಗಳಿಗದೆ ಆಲೌಟ್ ಮಾಡಿದ್ದ ಆತಿಥೇಯರು ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ ಮೊದಲ ದಿನದಾಟದಂತ್ಯಕ್ಕೆ ಒಂದು ವಿಕೆಟ್ ಕಳೆದುಕೊಂಡು 37 ರನ್ ಗಳಿಸಿದ್ದಾರೆ. ತಂಡದ ಪರ ಕೆಎಲ್ ರಾಹುಲ್ (KL Rahul) 13 ರನ್ ಮತ್ತು ವಾಷಿಂಗ್ಟನ್ ಸುಂದರ್ ಆರು ರನ್‌ಗಳಿಸಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ ಪ್ರಸ್ತುತ ದಕ್ಷಿಣ ಆಫ್ರಿಕಾಕ್ಕಿಂತ 122 ರನ್‌ಗಳ ಹಿಂದಿದೆ.
ಆಫ್ರಿಕಾ ತಂಡವನ್ನು 155 ರನ್‌ಗಳಿಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಯಶಸ್ವಿ ಜೈಸ್ವಾಲ್ (17 ಎಸೆತಗಳಲ್ಲಿ 12) ಬಹುಬೇಗನೇ ಔಟಾದರು. ಹೀಗಾಗಿ ಭಾರತ 18 ರನ್‌ಗಳಿಗೆ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆ ಬಳಿಕ ರಾಹುಲ್ ಜತೆಯಾದ ವಾಷಿಂಗ್ಟನ್ ಸುಂದರ್ ತಾಳ್ಮೆಯ ಬ್ಯಾಟಿಂಗ್ ಮಾಡಿ ಆಫ್ರಿಕಾ ತಂಡಕ್ಕೆ ಯಾವುದೇ ವಿಕೆಟ್ ಪಡೆಯಲು ಅವಕಾಶ ಮಾಡಿಕೊಡಲಿಲ್ಲ. ಮೊದಲ ದಿನ ಅಜೇಯರಾಗಿ ಉಳಿದಿರುವ ಇವರಿಬ್ಬರು ಎರಡನೇ ದಿನ ಬಿಗ್ ಇನ್ನಿಂಗ್ಸ್ ಆಡಿದರೆ, ಈ ಪಂದ್ಯದಲ್ಲಿ ಭಾರತದ ಗೆಲುವು ಬಹುತೇಕ ಖಚಿತವಾಗಲಿದೆ.
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ನಾಯಕ ತೆಂಬ ಬವುಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 159 ರನ್‌ಗಳಿಗೆ ಆಲೌಟ್ ಆಯಿತು. ಭಾರತ ಪರ ಜಸ್ಪ್ರೀತ್ ಬುಮ್ರಾ ಅತ್ಯಧಿಕ ಐದು ವಿಕೆಟ್‌ಗಳನ್ನು ಪಡೆದರು. ಬುಮ್ರಾ ಮೊದಲ ಇನ್ನಿಂಗ್ಸ್‌ನಲ್ಲಿ 14 ಓವರ್‌ಗಳನ್ನು ಬಿಟ್ಟುಕೊಟ್ಟು 27 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಬಳಿಸಿದರು. ಉಳಿದಂತೆ ಕುಲ್ದೀಪ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್ ತಲಾ ಎರಡು ವಿಕೆಟ್‌ಗಳನ್ನು ಪಡೆದರೆ, ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು.
IND vs SA: ಈಡನ್ ಗಾರ್ಡನ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಬುಮ್ರಾ
ದಕ್ಷಿಣ ಆಫ್ರಿಕಾ ಪರ ಐಡೆನ್ ಮಾರ್ಕ್ರಾಮ್ (31) ಗರಿಷ್ಠ ಸ್ಕೋರರ್ ಎನಿಸಿಕೊಂಡರೆ, ರಿಯಾನ್ ರಿಕಲ್ಟನ್ 23 ರನ್ ಗಳಿಸಿದರು. ಟೋನಿ ಡಿ ಜೋರ್ಜಿ ಮತ್ತು ವಿಯಾನ್ ಮುಲ್ಡರ್ ತಲಾ 24 ರನ್ ಬಾರಿಸಿದರು. ನಾಯಕ ಟೆಂಬಾ ಬವುಮಾ (3) ಸೇರಿದಂತೆ ಐದು ಆಟಗಾರರು ಎರಡಂಕಿ ತಲುಪಲು ವಿಫಲರಾದರು. ಹೀಗಾಗಿ ಊಟದ ವಿರಾಮದ ವೇಳೆಗೆ ಆಫ್ರಿಕಾ ತಂಡ ಮೂರು ವಿಕೆಟ್ ಕಳೆದುಕೊಂಡಿತು. ನಂತರ ಎರಡನೇ ಸೆಷನ್ನಲ್ಲಿಯೂ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡ ಆಫ್ರಿಕಾ ಐದು ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ಮೂರನೇ ಸೆಷನ್ನ ಆರಂಭದಲ್ಲಿಯೇ ಆಫ್ರಿಕಾ ತಂಡ ಉಳಿದ 2 ವಿಕೆಟ್‌ಗಳನ್ನು ಕಳೆದುಕೊಂಡು ಆಲೌಟ್ ಆಯಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:54 pm, Fri, 14 November 25