KL Rahul: ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಕೆಎಲ್ ರಾಹುಲ್​ಗೆ ಹೊಸ ಜವಾಬ್ದಾರಿ

India vs South Africa: ರಾಹುಲ್ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿಯುವುದರಿಂದ ಹೆಚ್ಚುವರಿ ಬ್ಯಾಟ್ಸ್​ಮನ್ ಅಥವಾ ಬೌಲರ್​ರೊಬ್ಬರಿಗೆ ಅವಕಾಶ ಸಿಗಲಿದೆ. ಏಕೆಂದರೆ ಕೆಎಲ್ ರಾಹುಲ್ ಕೇವಲ ಬ್ಯಾಟರ್ ಆಗಿ ಆಡಿದ್ರೆ, ಮತ್ತೋರ್ವ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್ ಅನ್ನು ಆಯ್ಕೆ ಮಾಡಬೇಕಿತ್ತು.

KL Rahul: ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಕೆಎಲ್ ರಾಹುಲ್​ಗೆ ಹೊಸ ಜವಾಬ್ದಾರಿ
KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 25, 2023 | 7:25 AM

ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಲಿದ್ದಾರೆ. ಈ ಹಿಂದೆ ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ವೀಕಿಂಗ್ ಜವಾಬ್ದಾರಿವಹಿಸಿಕೊಂಡಿದ್ದ ರಾಹುಲ್ ಇದೀಗ ಟೆಸ್ಟ್​ನಲ್ಲೂ ಕೀಪಿಂಗ್ ಗ್ಲೌಸ್ ತೊಡಲು ಮುಂದಾಗಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಸ್ಥಾನದಲ್ಲಿ ಅವಕಾಶ ಪಡೆಯಲಿದ್ದಾರೆ. ಇತ್ತ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಇದ್ದರೂ, ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗುವುದಿಲ್ಲ ಎನ್ನಬಹುದು.

ನಾವು ಈಗಾಗಲೇ ಕೆಎಲ್ ರಾಹುಲ್ ಅವರೊಂದಿಗೆ ಹೊಸ ಜವಾಬ್ದಾರಿ ಬಗ್ಗೆ ಚರ್ಚಿಸಿದ್ದೇವೆ. ಅವರು ತುಂಬಾ ವಿಶ್ವಾಸ ಹೊಂದಿದ್ದಾರೆ. ಅಲ್ಲದೆ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಹೀಗಾಗಿ ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಕೆಎಲ್​ಆರ್​ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯುವುದು ಖಚಿತ ಎಂದಿದ್ದಾರೆ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್.

ಇತ್ತೀಚೆಗೆ ಮುಗಿದ ಏಕದಿನ ವಿಶ್ವಕಪ್​ನಲ್ಲೂ ರಾಹುಲ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡಿದ್ದರು. 50 ಓವರ್​ಗಳ ಪಂದ್ಯಗಳಿಗೆ ಹೊಂದಿಕೊಂಡಿದ್ದರಿಂದ ಇದೀಗ ಟೆಸ್ಟ್​ನಲ್ಲೂ ದೀರ್ಘಾವಧಿವರೆಗೆ ಕೀಪಿಂಗ್ ಮಾಡಲು ರಾಹುಲ್ ಪಣತೊಟ್ಟಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಸರಣಿಯಲ್ಲಿ ಕೀಪಿಂಗ್ ಜವಾಬ್ದಾರಿಯನ್ನು ರಾಹುಲ್​ಗೆ ವಹಿಸಲಿದ್ದಾರೆ.

ಇದಕ್ಕೂ ಮುನ್ನ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಆಯ್ಕೆಯಾಗಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರ ಸರಣಿಯಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಕೆಎಸ್ ಭರತ್ ಆಯ್ಕೆಯಾಗಿದ್ದಾರೆ. ಆದರೆ ಖುದ್ದು ರಾಹುಲ್ ಅವರೇ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸುವ ಉತ್ಸುಕದಲ್ಲಿದ್ದಾರೆ. ಹೀಗಾಗಿ ಭರತ್ ಬದಲಿಗೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕೆಎಲ್ ರಾಹುಲ್ ಅವರನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ಕೋಚ್ ನಿರ್ಧರಿಸಿದ್ದಾರೆ.

ಇಲ್ಲಿ ರಾಹುಲ್ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿಯುವುದರಿಂದ ಹೆಚ್ಚುವರಿ ಬ್ಯಾಟ್ಸ್​ಮನ್ ಅಥವಾ ಬೌಲರ್​ರೊಬ್ಬರಿಗೆ ಅವಕಾಶ ಸಿಗಲಿದೆ. ಏಕೆಂದರೆ ಕೆಎಲ್ ರಾಹುಲ್ ಕೇವಲ ಬ್ಯಾಟರ್ ಆಗಿ ಆಡಿದ್ರೆ, ಮತ್ತೋರ್ವ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್ ಅನ್ನು ಆಯ್ಕೆ ಮಾಡಬೇಕಿತ್ತು. ಇದೀಗ ರಾಹುಲ್ ಅವರೇ ಕೀಪಿಂಗ್ ಜವಾಬ್ದಾರಿ ನಿರ್ವಹಿಸುವುದರಿಂದ ಹೆಚ್ಚುವರಿ ಬ್ಯಾಟ್ಸ್​ಮನ್ ಅಥವಾ ಬೌಲರ್​​ನನ್ನು ಟೀಮ್ ಇಂಡಿಯಾ ಕಣಕ್ಕಿಳಿಸಬಹುದು.

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.

ಇದನ್ನೂ ಓದಿ: IPL 2024: ಒಂದು ಎಸೆತದ ಬೆಲೆ ಬರೋಬ್ಬರಿ 7.40 ಲಕ್ಷ ರೂ..!

ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ:

  • ಡಿಸೆಂಬರ್ 26 ರಿಂದ- ಮೊದಲ ಟೆಸ್ಟ್ ಪಂದ್ಯ (ಸೆಂಚುರಿಯನ್)
  • ಜನವರಿ 3 ರಿಂದ- ಎರಡನೇ ಟೆಸ್ಟ್ ಪಂದ್ಯ (ಕೇಪ್​ಟೌನ್).
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್