IND vs SA: ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ಮಹತ್ವದ ನಿರ್ಧಾರ ಕೈಗೊಂಡ ವಿರಾಟ್ ಕೊಹ್ಲಿ

|

Updated on: Nov 29, 2023 | 12:30 PM

Virat Kohli: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಒಟ್ಟು 8 ಪಂದ್ಯಗಳನ್ನು ಆಡಬೇಕಾಗಿದೆ. ಇದರಲ್ಲಿ 3 ಟಿ 20 ಮತ್ತು 3 ಏಕದಿನ ಪಂದ್ಯಗಳನ್ನು ಹೊರತುಪಡಿಸಿ, 2 ಟೆಸ್ಟ್ ಪಂದ್ಯಗಳು ನಡೆಯಲ್ಲಿವೆ. ಇಲ್ಲಿಯವರೆಗಿನ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಏಕದಿನ ಮತ್ತು ಟಿ20 ಆಡುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

IND vs SA: ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ಮಹತ್ವದ ನಿರ್ಧಾರ ಕೈಗೊಂಡ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Follow us on

ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟಿ20 ಸರಣಿ ಆಡುತ್ತಿರುವ ಟೀಂ ಇಂಡಿಯಾ (India vs Australia) ಈ ಸರಣಿ ಬಳಿಕ ದಕ್ಷಿಣ ಆಫ್ರಿಕಾ ಪ್ರವಾಸವನ್ನು (India vs South Africa) ಕೈಗೊಳ್ಳಲಿದೆ. ಡಿಸೆಂಬರ್ 10 ರಿಂದ ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಆರಂಭವಾಗಲಿದ್ದು, ಈ ಪ್ರವಾಸದಲ್ಲಿ ಭಾರತ ಟಿ20, ಏಕದಿನ ಮತ್ತು ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯೊಂದಿಗೆ ಈಗ ಟೀಂ ಇಂಡಿಯಾದಿಂದ (Team India) ವಿಶ್ರಾಂತಿ ಪಡೆದಿರುವ ಎಲ್ಲಾ ಆಟಗಾರರು ತಂಡಕ್ಕೆ ಮರಳುತ್ತಿದ್ದಾರೆ. ಈ ನಡುವೆ ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಈ ಪ್ರವಾಸದಲ್ಲಿ ಟಿ20 ಮತ್ತು ಏಕದಿನ ಸರಣಿಯನ್ನು ಆಡದಿರುವ ವಿರಾಟ್ ಕೊಹ್ಲಿ (Virat Kohli) ನಿರ್ಧಾರಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ವಿರಾಟ್ ಕೊಹ್ಲಿ ಕೂಡ ತಮ್ಮ ನಿರ್ಧಾರವನ್ನು ಬಿಸಿಸಿಐಗೆ ತಿಳಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಹಿದೆ.

ಸೀಮಿತ ಓವರ್​ಗಳ ಕ್ರಿಕೆಟ್​ನಿಂದ ದೂರ

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಒಟ್ಟು 8 ಪಂದ್ಯಗಳನ್ನು ಆಡಬೇಕಾಗಿದೆ. ಇದರಲ್ಲಿ 3 ಟಿ 20 ಮತ್ತು 3 ಏಕದಿನ ಪಂದ್ಯಗಳನ್ನು ಹೊರತುಪಡಿಸಿ, 2 ಟೆಸ್ಟ್ ಪಂದ್ಯಗಳು ನಡೆಯಲ್ಲಿವೆ. ಇಲ್ಲಿಯವರೆಗಿನ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಏಕದಿನ ಮತ್ತು ಟಿ20 ಆಡುತ್ತಿಲ್ಲ ಎಂಬುದು ಸ್ಪಷ್ಟವಾಗಿದ್ದು, ವೈಟ್ ಬಾಲ್ ಸರಣಿಯಿಂದ ವಿರಾಮ ತೆಗೆದುಕೊಂಡಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಆದರೆ ಅವರು ಟೆಸ್ಟ್ ಸರಣಿಯಲ್ಲಿ ಆಡುತ್ತಾರೆಯೇ? ಎಂಬ ಪ್ರಶ್ನೆಗೆ ಇನ್ನೂ ಖಚಿತ ಉತ್ತರ ಸಿಕ್ಕಿಲ್ಲ. ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ವಿರಾಟ್ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ 2 ಟೆಸ್ಟ್ ಪಂದ್ಯಗಳಲ್ಲಿ ಆಡುವ ಸಾಧ್ಯತೆಗಳಿವೆ.

ಟಿ20ಯಲ್ಲಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಕಿಂಗ್ ಕೊಹ್ಲಿ..!

ಟೆಸ್ಟ್ ಕ್ರಿಕೆಟ್ ಆಡುವುದು ಖಚಿತ

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಇನ್ನೂ ಆಯ್ಕೆ ಮಾಡಿಲ್ಲ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಶೀಘ್ರದಲ್ಲೇ ಈ ಕುರಿತು ಸಭೆ ನಡೆಸಲಿದೆ. ಆ ಸಭೆಯ ಮೊದಲು, ಆಯ್ಕೆ ಸಮಿತಿಗೆ ಸಂಬಂಧಿಸಿದ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿರುವ ಇಂಡಿಯನ್ ಎಕ್ಸ್‌ಪ್ರೆಸ್, ವಿರಾಟ್ ಕೊಹ್ಲಿ ಸೀಮಿತ ಓವರ್​ಗಳ ಸರಣಿಯಿಂದ ಹಿಂದೆ ಸರಿಯುವುದಾಗಿ ಅಂದರೆ ಟಿ20 ಹಾಗೂ ಏಕದಿನ ಸರಣಿಯನ್ನು ಆಡದಿರುವುದಾಗಿ ಈಗಾಗಲೇ ಬಿಸಿಸಿಐ ಮತ್ತು ಆಯ್ಕೆಗಾರರಿಗೆ ತಿಳಿಸಿದ್ದಾರೆ ಎಂದು ವರದಿ ಮಾಡಿದೆ. ಅಲ್ಲದೆ ಈ ಸೀಮಿತ ಮಾದರಿಯನ್ನು ಆಡುವ ಬಗ್ಗೆ ಮುಂದಿನ ದಿನಗಳಲ್ಲಿ ಖಚಿತ ಪಡಿಸುವುದಾಗಿಯೂ ಕೊಹ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಕೊಹ್ಲಿ ಟೆಸ್ಟ್ ಕ್ರಿಕೆಟ್ ಆಡುವುದಾಗಿ ಬಿಸಿಸಿಐಗೆ ತಿಳಿಸಿದ್ದು, ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಸರಣಿಯಲ್ಲಿ ಆಡಬಹುದು ಎಂಬುದು ಸ್ಪಷ್ಟವಾಗಿದೆ.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ 2 ಟೆಸ್ಟ್‌ಗಳ ಸರಣಿಯನ್ನು ಆಡಬೇಕಿದೆ. ಮೊದಲ ಟೆಸ್ಟ್ ಡಿಸೆಂಬರ್ 26 ರಿಂದ ಸೆಂಚುರಿಯನ್​ನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಜನವರಿ 3, 2024 ರಿಂದ ಕೇಪ್ ಟೌನ್‌ನಲ್ಲಿ ಆರಂಭವಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.