Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ವಿರಾಟ್ ಕೊಹ್ಲಿ ಬೇಲ್ಸ್​ ಟ್ರಿಕ್: ಟೀಮ್ ಇಂಡಿಯಾಗೆ ಬ್ಯಾಕ್ ಟು ಬ್ಯಾಕ್ ವಿಕೆಟ್

India vs South Africa: ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (101) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 245 ರನ್​ ಕಲೆಹಾಕಿದೆ. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡದ ಪರ ಆರಂಭಿಕ ಆಟಗಾರ ಡೀನ್ ಎಲ್ಗರ್ (140) ಅಜೇಯ ಶತಕ ಸಿಡಿಸಿದ್ದಾರೆ. ಅಲ್ಲದೆ 2ನೇ ದಿನದಾಟದ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು ಸೌತ್ ಆಫ್ರಿಕಾ 256 ರನ್​ಗಳಿಸಿದೆ.

VIDEO: ವಿರಾಟ್ ಕೊಹ್ಲಿ ಬೇಲ್ಸ್​ ಟ್ರಿಕ್: ಟೀಮ್ ಇಂಡಿಯಾಗೆ ಬ್ಯಾಕ್ ಟು ಬ್ಯಾಕ್ ವಿಕೆಟ್
Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 28, 2023 | 7:48 AM

ಸೆಂಚುರಿಯನ್​ನಲ್ಲಿ ನಡೆಯುತ್ತಿರುವ ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಪಂದ್ಯವು ರೋಚಕ ಹೋರಾಟಕ್ಕೆ ಸಾಕ್ಷಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಕೆಎಲ್ ರಾಹುಲ್ (101) ಅವರ ಶತಕದ ನೆರವಿನಿಂದ 245 ರನ್​ಗಳಿಸಿ ಆಲೌಟ್ ಆಗಿದೆ.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ. ಆರಂಭಿಕ ಆಟಗಾರ ಐಡೆನ್ ಮಾರ್ಕ್ರಾಮ್ (5) ಬೇಗನೆ ಔಟಾದರೂ, ಬಳಿಕ ಡೀನ್ ಎಲ್ಗರ್ ಹಾಗೂ ಟೋನಿ ಝೋರ್ಝಿ ಅತ್ಯುತ್ತಮ ಇನಿಂಗ್ಸ್​ ಆಡಿದರು.

ಇತ್ತ ಈ ಜೋಡಿಯನ್ನು ಬೇರ್ಪಡಿಸಲು ಟೀಮ್ ಇಂಡಿಯಾ ಬೌಲರ್​ಗಳು ಹರಸಾಹಸಪಡಬೇಕಾಯಿತು. 2ನೇ ವಿಕೆಟ್​ಗೆ 93 ರನ್​ಗಳ ಜೊತೆಯಾಟವಾಡಿದ ಬಳಿಕ ಟೋನಿ ಝೋರ್ಝಿ ವಿಕೆಟ್ ಒಪ್ಪಿಸಿದ್ದರು. ಆದರೆ ಝೋರ್ಝಿ ಔಟಾಗುವ ಮುನ್ನ ವಿರಾಟ್ ಕೊಹ್ಲಿ ಬೇಲ್ಸ್ ಟ್ರಿಕ್​ನ ಮೊರೆ ಹೋಗಿದ್ದರು ಎಂಬುದು ವಿಶೇಷ.

ಹೌದು, ಸೌತ್ ಆಫ್ರಿಕಾ ಇನಿಂಗ್ಸ್​ನ 28ನೇ ಓವರ್ ಮುಕ್ತಾಯದ​ ವೇಳೆ ನಾನ್​ ಸ್ಟ್ರೈಕರ್​ ವಿಕೆಟ್​ ಬಳಿ ಬಂದ ವಿರಾಟ್ ಕೊಹ್ಲಿ ಸ್ಟಂಪ್​ ಮೇಲಿದ್ದ ಬೇಲ್ಸ್ ಅನ್ನು ಅದಲು ಬದಲು ಮಾಡಿದ್ದರು. ಅಚ್ಚರಿ ಎಂದರೆ ಬುಮ್ರಾ ಎಸೆದ 29ನೇ ಓವರ್​ನ 6ನೇ ಎಸೆತದಲ್ಲಿ ಝೋರ್ಝಿ (28) ಯಶಸ್ವಿ ಜೈಸ್ವಾಲ್​ಗೆ ಕ್ಯಾಚಿತ್ತು ಔಟಾದರು. ಇದರ ಬೆನ್ನಲ್ಲೇ ಕೀಗನ್ ಪೀಟರ್ಸನ್ (2) ಕೂಡ ಬೌಲ್ಡ್ ಆಗಿ ನಿರ್ಗಮಿಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಮತ್ತೊಮ್ಮೆ ಬೇಲ್ಸ್​ ಟ್ರಿಕ್ ಚರ್ಚೆಯು ಮುನ್ನಲೆಗೆ ಬಂದಿದೆ.

ಬ್ರಾಡ್ ಬೇಲ್ಸ್​ ಟ್ರಿಕ್:

ಟೆಸ್ಟ್ ಕ್ರಿಕೆಟ್​ನಲ್ಲಿ ಬೇಲ್ಸ್ ಟ್ರಿಕ್ ಪರಿಚಯಿಸಿದ್ದು ಇಂಗ್ಲೆಂಡ್ ತಂಡದ ಮಾಜಿ ವೇಗಿ ಸ್ಟುವರ್ಟ್ ಬ್ರಾಡ್. ಎದುರಾಳಿ ತಂಡದ ವಿಕೆಟ್ ಬೀಳದಿದ್ದಾಗ ಬ್ರಾಡ್ ಬೇಲ್ಸ್ ಅನ್ನು ಅದಲು ಬದಲು ಮಾಡಿ ಬೌಲಿಂಗ್ ಮಾಡುತ್ತಿದ್ದರು.

ವಿಶೇಷ ಎಂದರೆ ಇಂತಹದೊಂದು ಟ್ರಿಕ್ ಬಳಸಿದ ಬಳಿಕ ಬ್ರಾಡ್ ಹಲವು ಬಾರಿ ವಿಕೆಟ್ ಪಡೆದಿದ್ದರು. ಇದನ್ನೇ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪ್ರಯೋಗಿಸಿದ್ದಾರೆ. ಈ ಪ್ರಯೋಗವು ಟೀಮ್ ಇಂಡಿಯಾ ಪಾಲಿಗೂ ಯಶಸ್ವಿಯಾಗಿರುವುದು ವಿಶೇಷ.

ಭಾರತ-ಸೌತ್ ಆಫ್ರಿಕಾ ಮೊದಲ ಇನಿಂಗ್ಸ್​:

ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (101) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 245 ರನ್​ ಕಲೆಹಾಕಿದೆ.

ಇದನ್ನೂ ಓದಿ: KL Rahul: ಕಿಂಗ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಕೆಎಲ್ ರಾಹುಲ್

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡದ ಪರ ಆರಂಭಿಕ ಆಟಗಾರ ಡೀನ್ ಎಲ್ಗರ್ (140) ಅಜೇಯ ಶತಕ ಸಿಡಿಸಿದ್ದಾರೆ. ಅಲ್ಲದೆ 2ನೇ ದಿನದಾಟದ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು ಸೌತ್ ಆಫ್ರಿಕಾ 256 ರನ್​ಗಳಿಸಿದೆ.

Published On - 7:47 am, Thu, 28 December 23

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ