AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 2ನೇ ಟೆಸ್ಟ್ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲು ಇದುವೇ ಅಸಲಿ ಕಾರಣ..!

India vs South Africa 2nd Test: ಕೆಎಲ್ ರಾಹುಲ್ (ನಾಯಕ), ಹನುಮ ವಿಹಾರಿ, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

Virat Kohli: 2ನೇ ಟೆಸ್ಟ್ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲು ಇದುವೇ ಅಸಲಿ ಕಾರಣ..!
Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on: Jan 03, 2022 | 3:27 PM

Share

ಜೋಹಾನ್ಸ್​ಬರ್ಗ್​ನ ವಾಂಡರರ್ಸ್​ ಸ್ಟೇಡಿಯಂನಲ್ಲಿ ಶುರುವಾಗಿರುವ ದಕ್ಷಿಣ ಆಫ್ರಿಕಾ (India vs South Africa) ವಿರುದ್ದದ 2ನೇ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ (Team India) ನಾಯಕ ವಿರಾಟ್ ಕೊಹ್ಲಿ (Virat Kohli) ಹೊರಗುಳಿದಿದ್ದಾರೆ. ಕೊಹ್ಲಿಯ ಅನುಪಸ್ಥಿತಿಯಲ್ಲಿ ಹಂಗಾಮಿ ನಾಯಕನಾಗಿ ಕೆಎಲ್ ರಾಹುಲ್ (KL Rahul) ತಂಡವನ್ನು ಮುನ್ನಡೆಸುತ್ತಿದ್ದಾರೆ. ಈಗಾಗಲೇ ಮೊದಲ ಟೆಸ್ಟ್ ಪಂದ್ಯ ಗೆದ್ದಿರುವ ಟೀಮ್ ಇಂಡಿಯಾ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಆದರೆ ದುರದೃಷ್ಟವಶಾತ್ ವಿರಾಟ್‌ ಕೊಹ್ಲಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಅಂದಹಾಗೆ ಕೊಹ್ಲಿ 2ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲು ಮುಖ್ಯ ಕಾರಣ ಬೆನ್ನು ಮೂಳೆಯ ಸೆಳೆತ.

ಹೌದು, ಬೆನ್ನುಮೂಳೆಯ ಸೆಳೆತದ ಸಮಸ್ಯೆಯಿಂದ ಬಳಲುತ್ತಿರುವ ವಿರಾಟ್ ಕೊಹ್ಲಿಗೆ ಫಿಸಿಯೋ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ 2ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲದೆ ಮುಂದಿನ ಟೆಸ್ಟ್‌ಗೆ ಚೇತರಿಸಿಕೊಂಡು ತಂಡಕ್ಕೆ ಮರಳುವ ವಿಶ್ವಾಸವಿದೆ ಕೆಎಲ್ ರಾಹುಲ್ ತಿಳಿಸಿದ್ದಾರೆ.

ಕೆಎಲ್ ರಾಹುಲ್ ಟೆಸ್ಟ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವುದು ಇದೇ ಮೊದಲು. ತಂಡದ ಉಪನಾಯಕ ರೋಹಿತ್ ಶರ್ಮಾ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಹೀಗಾಗಿ ರಾಹುಲ್ ಅವರನ್ನು ಉಪನಾಯಕನಾಗಿ ಆಯ್ಕೆ ಮಾಡಲಾಗಿತ್ತು. ಅಷ್ಟೇ ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ದ ಏಕದಿನ ತಂಡವನ್ನೂ ಕೂಡ ಕೆಎಲ್​ಆರ್​ ಮುನ್ನಡೆಸಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕೆಎಲ್ ರಾಹುಲ್, ” ರಾಷ್ಟ್ರೀಯ ತಂಡದ ನಾಯಕನಾಗುವುದು ಪ್ರತಿಯೊಬ್ಬ ಭಾರತೀಯ ಆಟಗಾರನ ಕನಸು. ನಿಜವಾಗಿಯೂ ಇದೊಂದು ಗೌರವ. ಈ ಸವಾಲನ್ನು ಎದುರು ನೋಡುತ್ತಿದ್ದೇವೆ. ನಾವು ಇಲ್ಲಿ ಕೆಲವು ಉತ್ತಮ ಗೆಲುವುಗಳನ್ನು ಹೊಂದಿದ್ದೇವೆ. ಅದನ್ನು ಮುಂದುವರಿಸಲು ನಾವು ಆಶಿಸುತ್ತೇವೆ” ಎಂದು ಕೆಎಲ್ ರಾಹುಲ್ ತಿಳಿಸಿದ್ದಾರೆ.

ಭಾರತ ಪ್ಲೇಯಿಂಗ್ ಇಲೆವೆನ್ ಹೀಗಿದೆ: ಕೆಎಲ್ ರಾಹುಲ್ (ನಾಯಕ), ಹನುಮ ವಿಹಾರಿ, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಆರ್ ಅಶ್ವಿನ್.

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್ ಹೀಗಿದೆ: ಡೀನ್ ಎಲ್ಗರ್ (ನಾಯಕ), ಏಡನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ಟೆಂಬಾ ಬವುಮಾ, ರೆಸಿ ವ್ಯಾನ್ ಡೆರ್ ಡ್ಯುಸೆನ್, ಕಾರ್ಲ್ ರೆನ್, ಕಗಿಸೊ ರಬಾಡ, ಮಾರ್ಕೊ ಯಾನ್ಸನ್, ಲುಂಗಿ ಎನ್‌ಗಿಡಿ, ಡುವಾನ್ ಒಲಿವರ್, ಕೇಶವ್ ಮಹಾರಾಜ್.

ಇದನ್ನೂ ಓದಿ:  Team India: ಟೀಮ್ ಇಂಡಿಯಾ ಗೆದ್ದರೆ ಇತಿಹಾಸ: ಕೊಹ್ಲಿ ಪಾಲಿಗೆ ಹೊಸ ದಾಖಲೆ..!

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(IND vs SA: Why Virat Kohli is not playing 2nd Test?)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ