ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್ಗೆ 143 ರನ್ಗಳ ಜೊತೆಯಾಟವಾಡಿದ ಶುಭ್ಮನ್ ಗಿಲ್ 70 ರನ್ ಬಾರಿಸಿ ಔಟಾದರು. ಇದರ ಬೆನ್ನಲ್ಲೇ 67 ಎಸೆತಗಳಲ್ಲಿ 83 ರನ್ ಬಾರಿಸಿದ್ದ ರೋಹಿತ್ ಶರ್ಮಾ ಕೂಡ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಭರ್ಜರಿ ಇನಿಂಗ್ಸ್ ಆಡಿದರು.
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ 47 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅರ್ಧಶತಕದ ಬೆನ್ನಲ್ಲೇ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ವಿರಾಟ್ ಕೊಹ್ಲಿಯ ಕ್ಯಾಚ್ ಕೈಚೆಲ್ಲಿದ್ದರು. ಇದರ ಸಂಪೂರ್ಣ ಲಾಭ ಪಡೆದ ಕಿಂಗ್ ಕೊಹ್ಲಿ 80 ಎಸೆತಗಳಲ್ಲಿ 10 ಫೋರ್ ಹಾಗೂ 1 ಸಿಕ್ಸ್ನೊಂದಿಗೆ ವಿರಾಟ್ ಕೊಹ್ಲಿ ಶತಕ ಪೂರೈಸಿದರು. ಈ ಮೂಲಕ 7 ವಿಕೆಟ್ ನಷ್ಟಕ್ಕೆ ಟೀಮ್ ಇಂಡಿಯಾ 373 ರನ್ ಕಲೆಹಾಕಿತು.
374 ರನ್ಗಳ ಕಠಿಣ ಗುರಿ ಪಡೆದ ಶ್ರೀಲಂಕಾ ಪರ ನಾಯಕ ದುಸನ್ ಶಾನಕ ಭರ್ಜರಿ ಶತಕ ಬಾರಿಸಿದರು. 88 ಎಸೆತಗಳನ್ನು ಎದುರಿಸಿದ ಶಾನಕ 3 ಸಿಕ್ಸ್ ಹಾಗೂ 12 ಫೋರ್ನೊಂದಿಗೆ ಅಜೇಯ 108 ರನ್ ಕಲೆಹಾಕಿದ್ದರು. ಇದಾಗ್ಯೂ ಉಳಿದ ಬ್ಯಾಟರ್ಗಳಿಂದ ಉತ್ತಮ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಶ್ರೀಲಂಕಾ ತಂಡವು 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 306 ರನ್ಗಳಿಸಷಲಷ್ಟೇ ಶಕ್ತರಾದರು. ಇದರೊಂದಿಗೆ ಟೀಮ್ ಇಂಡಿಯಾ 67 ರನ್ಗಳ ಭರ್ಜರಿ ಜಯ ಸಾಧಿಸಿತು. ಟೀಮ್ ಇಂಡಿಯಾ ಪರ ಉಮ್ರಾನ್ ಮಲಿಕ್ 3 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಸಿರಾಜ್ 2 ವಿಕೆಟ್ ಪಡೆದು ಮಿಂಚಿದರು.
ಏಕದಿನ ಸರಣಿ ವೇಳಾಪಟ್ಟಿ:
ಶ್ರೀಲಂಕಾ ಏಕದಿನ ತಂಡ:
ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೊ, ಸಧೀರ ಸಮರವಿಕ್ರಮ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕಾ, ಧನಂಜಯ್ ಡಿಸಿಲ್ವ, ವನಿಂದು ಹಸರಂಗ, ಮಹೀಶ್ ತೀಕ್ಷಣ , ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ದಿಲ್ಶಾನ್ ಮಧುಶಂಕ, ಕಸುನ್ ರಜಿತ, ನುವಾನಿಡು ಫೆರ್ನಾಂಡೋ, ದುನಿತ್ ವೆಲಾಲಗೆ, ಪ್ರಮೋದ್ ಮದುಶನ್.
ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.
ಶ್ರೀಲಂಕಾ ವಿರುದ್ಧ 67 ರನ್ಗಳಿಂದ ಗೆದ್ದು ಬೀಗಿದ ಟೀಮ್ ಇಂಡಿಯಾ
87 ಎಸೆತಗಳಲ್ಲಿ ಶತಕ ಬಾರಿಸಿದ ದಸುನ್ ಶಾನಕ
ಅಕ್ಷರ್ ಪಟೇಲ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಶಾನಕ
9ನೇ ವಿಕೆಟ್ಗೆ 75 ರನ್ಗಳ ಜೊತೆಯಾಟವಾಡಿರುವ ದಸುನ್ ಶಾನಕ-ಕಸುನ್ ರಜಿತ
ಕ್ರೀಸ್ನಲ್ಲಿ ದಸುನ್ ಶಾನಕ-ಕಸುನ್ ರಜಿತ ಬ್ಯಾಟಿಂಗ್
50 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ದುಸನ್ ಶಾನಕ
ಉಮ್ರಾನ್ ಮಲಿಕ್ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಶಾನಕ
ಕ್ರೀಸ್ನಲ್ಲಿ ದಾಸುನ್ ಶಾನಕ – ಕಸುನ್ ರಜಿತ ಬ್ಯಾಟಿಂಗ್
ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಫ್ರಂಟ್ ಫೀಲ್ಡ್ನಲ್ಲಿದ್ದ ರೋಹಿತ್ ಶರ್ಮಾಗೆ ಕ್ಯಾಚ್ ನೀಡಿದ ಕರುಣರತ್ನೆ (14)
ಸೋಲಿನ ಸುಳಿಯಲ್ಲಿ ಶ್ರೀಲಂಕಾ
ಕ್ರೀಸ್ನಲ್ಲಿ ದುಸನ್ ಶಾನಕ-ಕರುಣರತ್ನೆ ಬ್ಯಾಟಿಂಗ್
ಉಮ್ರಾನ್ ಬೆಂಕಿ ಬೌಲಿಂಗ್ಗೆ ಸ್ಲಿಪ್ನಲ್ಲಿ ಶುಭ್ಮನ್ ಗಿಲ್ಗೆ ಕ್ಯಾಚ್ ನೀಡಿದ ದುನಿತ್ (0)
ಚಹಾಲ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ…ಶ್ರೇಯಸ್ ಅಯ್ಯರ್ ಉತ್ತಮ ಕ್ಯಾಚ್…ವನಿಂದು ಹಸರಂಗ (16) ಔಟ್
ಚಹಾಲ್ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಬಾರಿಸಿದ ವನಿಂದು ಹಸರಂಗ
ಉಮ್ರಾನ್ ಮಲಿಕ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿದ ಪಾತುಮ್ ನಿಸ್ಸಂಕಾ (72)
ಮೊಹಮ್ಮದ್ ಶಮಿ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಹೊರನಡೆದ ಧನಂಜಯ ಡಿಸಿಲ್ವಾ (47)
ಅಕ್ಷರ್ ಪಟೇಲ್ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಧನಂಜಯ ಡಿಸಿಲ್ವಾ
ಅಕ್ಷರ್ ಎಸೆತದಲ್ಲಿ ಬೌಂಡರಿ ಬಾರಿಸಿ 57 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪಾತುಮ್ ನಿಸ್ಸಂಕಾ
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ – ಧನಂಜಯ ಡಿಸಿಲ್ವಾ ಬ್ಯಾಟಿಂಗ್
ಉಮ್ರಾನ್ ಮಲಿಕ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಅಸಲಂಕಾ (23)
ಉಮ್ರಾನ್ ಮಲಿಕ್ ಎಸೆತದಲ್ಲಿ ಆಕರ್ಷಕ ಫೋರ್ ಬಾರಿಸಿದ ನಿಸ್ಸಂಕಾ
ಕ್ರೀಸ್ನಲ್ಲಿ ಅಸಲಂಕಾ-ನಿಸ್ಸಂಕಾ ಬ್ಯಾಟಿಂಗ್
ಸಿರಾಜ್ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಅಸಲಂಕಾ
ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಕುಸಾಲ್ ಮೆಂಡಿಸ್ (0) ಕ್ಲೀನ್ ಬೌಲ್ಡ್
ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರನಡೆದ ಅವಿಷ್ಕ ಫರ್ನಾಂಡೊ (5)
ಮೊಹಮ್ಮದ್ ಶಮಿ ಎಸೆತದಲ್ಲಿ ಫೋರ್ ಬಾರಿಸಿ ಖಾತೆ ತೆರೆದ ಪಾತುಮ್ ನಿಸ್ಸಂಕಾ
ಕೊನೆಯ ಓವರ್ನಲ್ಲಿ ಕೇವಲ 6 ರನ್
87 ಎಸೆತಗಳಲ್ಲಿ 113 ರನ್ ಬಾರಿಸಿ ಕಸುನ್ ರಜಿತ ಎಸೆತದಲ್ಲಿ ಕೀಪರ್ಗೆ ಕ್ಯಾಚ್ ನೀಡಿದ ವಿರಾಟ್ ಕೊಹ್ಲಿ
ಕೊಹ್ಲಿಯ ಭರ್ಜರಿ ಶತಕದ ಇನಿಂಗ್ಸ್ ಅಂತ್ಯ
ಕರುಣರತ್ನೆ ಎಸೆತದಲ್ಲಿ ಕ್ಯಾಚ್ ನೀಡಿದ ಅಕ್ಷರ್ ಪಟೇಲ್ (9)
80 ಎಸೆತಗಳಲ್ಲಿ 10 ಫೋರ್ ಹಾಗೂ 1 ಸಿಕ್ಸ್ನೊಂದಿಗೆ ವಿರಾಟ್ ಕೊಹ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಇದು ಕಿಂಗ್ ಕೊಹ್ಲಿಯ 45ನೇ ಏಕದಿನ ಶತಕವಾಗಿದೆ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ (95) ಹಾಗೂ ಅಕ್ಷರ್ ಪಟೇಲ್ (7) ಬ್ಯಾಟಿಂಗ್
ರಜಿತ ಎಸೆತದಲ್ಲಿ ಕ್ಯಾಚ್ ನೀಡಿದ ಹಾರ್ದಿಕ್ ಪಾಂಡ್ಯ (14)
ಕರುಣರತ್ನೆ ಎಸೆತದಲ್ಲಿ ಭರ್ಜರಿ ಬೌಂಡರಿ ಬಾರಿಸಿದ ವಿರಾಟ್ ಕೊಹ್ಲಿ
ಹಸರಂಗ ಎಸೆತದಲ್ಲಿ ಡೀಪ್ ಕವರ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಹಾರ್ದಿಕ್ ಪಾಂಡ್ಯ
ಕಸುನ್ ರಜಿತ ಎಸೆತವನ್ನು ಗುರುತಿಸುವಲ್ಲಿ ಎಡವಿದ ಕೆಎಲ್ ರಾಹುಲ್ (39)…ಕ್ಲೀನ್ ಬೌಲ್ಡ್
ಹಸರಂಗ ಎಸೆತದಲ್ಲಿ ಸ್ಟ್ರೈಟ್ ಹಿಟ್ ಪವರ್ಫುಲ್ ಶಾಟ್ ಬಾರಿಸಿದ ವಿರಾಟ್ ಕೊಹ್ಲಿ…ಫೋರ್
ರಜಿತ ಎಸೆತದಲ್ಲಿ ಲಾಂಗ್ ಆನ್ನತ್ತ ಫೋರ್ ಬಾರಿಸಿದ ವಿರಾಟ್ ಕೊಹ್ಲಿ
ಧನಂಜಯ ಡಿಸಿಲ್ವಾ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಅರ್ಧಶತಕ ಪೂರೈಸಿದ ವಿರಾಟ್ ಕೊಹ್ಲಿ
47 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಕಿಂಗ್ ಕೊಹ್ಲಿ
ದುನಿತ್ ಎಸೆತದಲ್ಲಿ ಆಕರ್ಷಕ ಬೌಂಡರಿ ಬಾರಿಸಿದ ಕೆಎಲ್ ರಾಹುಲ್
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್
ಧನಂಜಯ ಡಿಸಿಲ್ವಾ ಎಸೆತದಲ್ಲಿ ಕ್ಯಾಚ್ ನೀಡಿದ ಶ್ರೇಯಸ್ ಅಯ್ಯರ್ (28)
ಹಸರಂಗ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಶ್ರೇಯಸ್ ಅಯ್ಯರ್
ಹಸರಂಗ ಎಸೆತದಲ್ಲಿ ಬೌಂಡರಿ ಬಾರಿಸಿದ ಶ್ರೇಯಸ್ ಅಯ್ಯರ್
27 ಓವರ್ನಲ್ಲಿ ದ್ವಿಶತಕ ಪೂರೈಸಿದ ಟೀಮ್ ಇಂಡಿಯಾ
ಮಧುಶಂಕ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ 2 ಬೌಂಡರಿ ಬಾರಿಸಿದ ಶ್ರೇಯಸ್ ಅಯ್ಯರ್
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ – ಶ್ರೇಯಸ್ ಅಯ್ಯರ್ ಬ್ಯಾಟಿಂಗ್
ಮಧುಶಂಕ ಎಸೆತದಲ್ಲಿ ರೋಹಿತ್ ಶರ್ಮಾ ಬ್ಯಾಟ್ ಎಡ್ಜ್ ಆಗಿ ಬೌಲ್ಡ್
67 ಎಸೆತಗಳಲ್ಲಿ 83 ರನ್ಗಳಿಸಿದ ನಿರ್ಗಮಿಸಿದ ರೋಹಿತ್ ಶರ್ಮಾ
ಹಸರಂಗ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಅತ್ಯಾಕರ್ಷಕ ಫೋರ್ ಬಾರಿಸಿದ ವಿರಾಟ್ ಕೊಹ್ಲಿ
ಶಾನಕ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ವಿರಾಟ್ ಕೊಹ್ಲಿ
ಕ್ರೀಸ್ನಲ್ಲಿ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಬ್ಯಾಟಿಂಗ್
ದಸುನ್ ಶಾನಕ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದ ಶುಭ್ಮನ್ ಗಿಲ್ (70 ರನ್, 60 ಎಸೆತ)
ದುನಿತ್ ಎಸೆತದಲ್ಲಿ ಲಾಂಗ್ ಆಫ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
ದುನಿತ್ ಓವರ್ನಲ್ಲಿ ಹ್ಯಾಟ್ರಿಕ್ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
ದುನಿತ್ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
51 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಶುಭ್ಮನ್ ಗಿಲ್
ಕ್ರೀಸ್ನಲ್ಲಿ ಶುಭ್ಮನ್ – ರೋಹಿತ್ ಶರ್ಮಾ ಬ್ಯಾಟಿಂಗ್
ಕ್ರೀಸ್ನಲ್ಲಿ ಶುಭ್ಮನ್ ಗಿಲ್ – ರೋಹಿತ್ ಶರ್ಮಾ ಬ್ಯಾಟಿಂಗ್
15ನೇ ಓವರ್ನಲ್ಲಿ ಶತಕ ಪೂರೈಸಿದ ಟೀಮ್ ಇಂಡಿಯಾ
ಕ್ರೀಸ್ನಲ್ಲಿ ಶುಭ್ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಬ್ಯಾಟಿಂಗ್
ಹಸರಂಗ ಎಸೆತದಲ್ಲಿ ಆಕರ್ಷಕ ಬೌಂಡರಿ ಬಾರಿಸಿ 41 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ರೋಹಿತ್ ಶರ್ಮಾ
ಕ್ರೀಸ್ನಲ್ಲಿ ರೋಹಿತ್ ಶರ್ಮಾ – ಶುಭ್ಮನ್ ಗಿಲ್ ಬ್ಯಾಟಿಂಗ್
ಕರುಣರತ್ನೆ ಎಸೆತದಲ್ಲಿ ಆಕರ್ಷಕ ಕವರ್ ಡ್ರೈವ್ ಬಾರಿಸಿ ಫೋರ್ ಗಿಟ್ಟಿಸಿಕೊಂಡ ರೋಹಿತ್ ಶರ್ಮಾ
ಕ್ರೀಸ್ನಲ್ಲಿ ಶುಭ್ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಬ್ಯಾಟಿಂಗ್
ರಜಿತ ಓವರ್ನಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 1 ಫೋರ್ ಬಾರಿಸಿದ ರೋಹಿತ್ ಶರ್ಮಾ
IND 59/0 (7)
ರಜಿತ ಎಸೆತದಲ್ಲಿ ಡೀಪ್ ಸ್ಕ್ವೇರ್ನತ್ತ ಪುಲ್ ಶಾಟ್ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
ಕ್ರೀಸ್ನಲ್ಲಿ ಶುಭ್ಮನ್ ಗಿಲ್-ರೋಹಿತ್ ಶರ್ಮಾ ಬ್ಯಾಟಿಂಗ್
ರಜಿತ ಎಸೆತದಲ್ಲಿ ಬ್ಯಾಕ್ವರ್ಡ್ ಸ್ಕ್ವೇರ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
ಮಧುಶಂಕ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಹ್ಯಾಟ್ರಿಕ್ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
ಕಸುನ್ ರಜಿತ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ರೋಹಿತ್ ಶರ್ಮಾ
ರಜಿತ ಎಸೆದ ಮೊದಲ ಓವರ್ನ 5ನೇ ಎಸೆತದಲ್ಲಿ ಫೋರ್ ಬಾರಿಸಿ ಖಾತೆ ತೆರೆದ ರೋಹಿತ್ ಶರ್ಮಾ
ಮೊದಲ ಓವರ್- ಕಸುನ್ ರಜಿತ
ಆರಂಭಿಕರು: ಶುಭ್ಮನ್ ಗಿಲ್, ರೋಹಿತ್ ಶರ್ಮಾ
Sri Lanka have won the toss and elect to bowl first in the 1st ODI.
A look at our Playing XI for the game.
Live – https://t.co/262rcUdafb #INDvSL @mastercardindia pic.twitter.com/nd2D6s0rJm
— BCCI (@BCCI) January 10, 2023
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಅವಿಷ್ಕ ಫೆರ್ನಾಂಡೊ, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶನ್ ಮಧುಶಂಕ
ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಬೌಲಿಂಗ್ ಆಯ್ದುಕೊಂಡಿದ್ದಾರೆ.
Hello and welcome to Barsapara Cricket Stadium, Guwahati for our 1st ODI against Sri Lanka.#INDvSL @mastercardindia pic.twitter.com/AOeQ2TNrqa
— BCCI (@BCCI) January 10, 2023
ಟಾಸ್- ಮಧ್ಯಾಹ್ನ 1 ಗಂಟೆಗೆ
ಪಂದ್ಯ ಆರಂಭ- ಮಧ್ಯಾಹ್ನ 1.30 ಕ್ಕೆ
Published On - 12:43 pm, Tue, 10 January 23