AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL 1st T20: ಭಾರತ ಬ್ಯಾಟಿಂಗ್, ತಂಡದಲ್ಲಿ 6 ಬದಲಾವಣೆ; ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

IND vs SL 1st T20: ಶ್ರೀಲಂಕಾ ನಾಯಕ ದಸುನ್ ಶಂಕಾ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಆಲ್‌ರೌಂಡರ್ ದೀಪಕ್ ಹೂಡಾ ಟೀಂ ಇಂಡಿಯಾ ಪರ ಟಿ20 ಪಾದಾರ್ಪಣೆ ಮಾಡುತ್ತಿದ್ದಾರೆ.

IND vs SL 1st T20: ಭಾರತ ಬ್ಯಾಟಿಂಗ್, ತಂಡದಲ್ಲಿ 6 ಬದಲಾವಣೆ; ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಆದಾಗ್ಯೂ, T20 ಶ್ರೇಯಾಂಕದ ಬಗ್ಗೆ ಅತ್ಯಂತ ಆಸಕ್ತಿದಾಯಕ ಮತ್ತು ಆಶ್ಚರ್ಯಕರ ವಿಷಯವೆಂದರೆ ನಂಬರ್ 1 ತಂಡದ ಒಬ್ಬ ಆಟಗಾರ ಮಾತ್ರ ಟಾಪ್ 10 ರಲ್ಲಿದ್ದಾರೆ. ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕವನ್ನು ಹೊರತುಪಡಿಸಿ, ಯಾವುದೇ ಭಾರತೀಯ ಬೌಲರ್‌ಗಳ ಪಟ್ಟಿಯಲ್ಲಿ ಅಗ್ರ 10 ರಲ್ಲಿ ಇಲ್ಲ ಮತ್ತು ಆಲ್​ರೌಂಡರ್​ಗಳು ಇಲ್ಲ.
TV9 Web
| Edited By: |

Updated on:Feb 24, 2022 | 6:48 PM

Share

ವೆಸ್ಟ್ ಇಂಡೀಸ್‌ ತಂಡವನ್ನು ಕ್ಲೀನ್ ಸ್ವೀಪ್ ಮಾಡಿದ ನಂತರ, ಭಾರತ ಈಗ ಶ್ರೀಲಂಕಾ ವಿರುದ್ಧ (India vs Sri Lanka T20I Series) ಸೆಣಸಾಡುತ್ತಿದೆ. ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಮೊದಲ ಪಂದ್ಯದೊಂದಿಗೆ ಆರಂಭವಾಗಿದೆ. ಶ್ರೀಲಂಕಾ ನಾಯಕ ದಸುನ್ ಶಂಕಾ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಆಲ್‌ರೌಂಡರ್ ದೀಪಕ್ ಹೂಡಾ (Deepak Hooda) ಟೀಂ ಇಂಡಿಯಾ ಪರ ಟಿ20 ಪಾದಾರ್ಪಣೆ ಮಾಡುತ್ತಿದ್ದಾರೆ. ಹೂಡಾ ಕೆಲವು ದಿನಗಳ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇವರೊಂದಿಗೆ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson) ಕೂಡ ಬಹಳ ಸಮಯದ ನಂತರ ಆಡುವ XI ಗೆ ಮರಳಿದ್ದಾರೆ.

ಇಂದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ತನ್ನ ಆಟಗಾರರ XI ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಫೆಬ್ರವರಿ 20 ರಂದು ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಟಿ20 ಆಡಿದ ತಂಡದಲ್ಲಿ 6 ಬದಲಾವಣೆಗಳನ್ನು ಮಾಡಲಾಗಿದೆ. ಇದರಲ್ಲಿ ಅತ್ಯಂತ ವಿಶೇಷವೆಂದರೆ ದೀಪಕ್ ಹೂಡಾ ಚೊಚ್ಚಲ ಮತ್ತು ಸಂಜು ಸ್ಯಾಮ್ಸನ್ ಪುನರಾಗಮನ. ಸ್ಯಾಮ್ಸನ್ ಕೊನೆಯದಾಗಿ ಜುಲೈ 2021 ರಲ್ಲಿ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಪರ T20 ಪಂದ್ಯವನ್ನು ಆಡಿದ್ದಾರೆ. ಇವರಿಬ್ಬರನ್ನು ಹೊರತುಪಡಿಸಿ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಸುದೀರ್ಘ ವಿರಾಮದ ನಂತರ ಮರಳಿದ್ದಾರೆ. ಆದರೆ ರವೀಂದ್ರ ಜಡೇಜಾ ಕೂಡ ತಮ್ಮ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಮತ್ತು ತಂಡದ ಭಾಗವಾಗಿದ್ದಾರೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ಕೀಪರ್), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ವೆಂಕಟೇಶ್ ಅಯ್ಯರ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾ

ಶ್ರೀಲಂಕಾದ ಆಡುವ XI

ದಸುನ್ ಶನಕ (ನಾಯಕ), ಪಾತುಮ್ ನಿಸಂಕಾ, ಕಮಿಲ್ ಮಿಶ್ರಾ, ಚರಿತ್ ಅಸಲಂಕಾ, ಜನಿತ್ ಲಿಯಾಂಗೆ, ದಿನೇಶ್ ಚಂಡಿಮಲ್, ಚಮಿಕಾ ಕರುಣಾರತ್ನೆ, ದುಷ್ಮಂತ ಚಮೀರಾ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ಲಹಿರು ಕುಮಾರ

ಇದನ್ನೂ ಓದಿ:IND vs SL 1st T20, LIVE Score: ಟಾಸ್ ಗೆದ್ದ ಲಂಕಾ ಬೌಲಿಂಗ್; ಭಾರತ ಬ್ಯಾಟಿಂಗ್

Published On - 6:41 pm, Thu, 24 February 22

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?