IND vs SL, 1st T20I: ಭಾರತ-ಶ್ರೀಲಂಕಾ ಸರಣಿ: ಯಾವಾಗ ಪ್ರಾರಂಭ? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

IND vs SL: ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಜಸ್ಪ್ರೀತ್ ಬುಮ್ರಾ (ಉಪನಾಯಕ).

IND vs SL, 1st T20I: ಭಾರತ-ಶ್ರೀಲಂಕಾ ಸರಣಿ: ಯಾವಾಗ ಪ್ರಾರಂಭ? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?
IND vs SL
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 23, 2022 | 2:53 PM

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವೆ 3 ಪಂದ್ಯಗಳ ಟಿ20 ಸರಣಿ ನಡೆಯಲಿದೆ . ಮೊದಲ ಪಂದ್ಯ ಫೆಬ್ರವರಿ 24 ರಂದು ಲಕ್ನೋದಲ್ಲಿ ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಈಗಾಗಲೇ ಲಕ್ನೋಗೆ ಬಂದಿಳಿದಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಭಾರತ ತಂಡದ ಇಬ್ಬರು ಆಟಗಾರರು ಸರಣಿಯಿಂದ ಹೊರಬಿದ್ದಿದ್ದಾರೆ. ವೇಗದ ಬೌಲರ್‌ ದೀಪಕ್ ಚಹರ್ ಮತ್ತು ಸೂರ್ಯಕುಮಾರ್ ಯಾದವ್ ಗಾಯದ ಸಮಸ್ಯೆಯಿಂದ ಈ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ತವರಿನಲ್ಲಿ ಶ್ರೀಲಂಕಾ ವಿರುದ್ದ ಟೀಮ್ ಇಂಡಿಯಾ ಬಲಿಷ್ಠ ತಂಡ ಎಂಬುದು ಸಮಾಧಾನಕರ ಸಂಗತಿ. ಏಕೆಂದರೆ ಭಾರತ ತಂಡ ಇದುವರೆಗೆ ತವರಿನಲ್ಲಿ ಶ್ರೀಲಂಕಾ ವಿರುದ್ಧ ಯಾವುದೇ ಟಿ20 ಸರಣಿಯನ್ನು ಸೋತಿಲ್ಲ. ಭಾರತವು 2020 ರಲ್ಲಿ ಕೊನೆಯ ಬಾರಿಗೆ ಟಿ20 ಸರಣಿಯನ್ನು ಆಡಿತ್ತು. ಮೂರು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಲ್ಲಿ ಜಯಭೇರಿ ಬಾರಿಸಿತ್ತು. ಹಾಗಿದ್ರೆ ಈ ಸರಣಿ ಆರಂಭ ಯಾವಾಗ ಮತ್ತು ಯಾವ ಚಾನೆಲ್​ನಲ್ಲಿ ನೇರ ಪ್ರಸಾರ ಇರಲಿದೆ ನೋಡೋಣ…

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ಶುರು? ಮೊದಲ ಟಿ20 ಪಂದ್ಯ ಭಾರತೀಯ ಕಾಲಮಾನ ಗುರುವಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಮೊದಲ ಟಿ20 ಪಂದ್ಯ ನಡೆಯುವುದು ಎಲ್ಲಿ? ಲಕ್ನೋನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು? ಈ ಸರಣಿಯ ಎಲ್ಲಾ ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಇರಲಿದೆ.

ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಯಾವುದರಲ್ಲಿ ಇರಲಿದೆ? Hotstar ನಲ್ಲಿ ಭಾರತ ಮತ್ತು ಶ್ರೀಲಂಕಾದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್.

ಶ್ರೀಲಂಕಾ ಟಿ20 ತಂಡ: ದಸುನ್ ಶನಕ (ನಾಯಕ), ಚರಿತ್ ಅಸಲಂಕ (ಉಪನಾಯಕ), ಪಾತುಮ್ ನಿಸಂಕ, ಕುಸಲ್ ಮೆಂಡಿಸ್, ದಿನೇಶ್ ಚಾಂಡಿಮಲ್, ಧನುಷ್ಕ ಗುಣತಿಲಕ, ಕಮಿಲ್ ಮಿಶ್ರಾ, ಜನತ್ ಲಿಯಾನಗೆ, ವನಿಂದು ಹಸರಂಗ, ಚಮಿಕ ಕರುಣರತ್ನೆ, ಲಹಿರು ಕುಮಾರ, ದುಷ್ಮಂತ ಚಮೀರಾ, ಬಿನುರ ಫೆರ್ನಾಂಡೊ, ಶೀರನ್ ಫೆರ್ನಾಂಡೊ, ಮಹೇಶ್ ತೀಕ್ಷಣ, ಜೆಫ್ರಿ ವೆಂಡರಸ್, ಪ್ರವೀಣ್ ಜಯವಿಕ್ರಮ, ಆಶಿಯಾನ್ ಡೇನಿಯಲ್ಸ್.

ಭಾರತ vs ಶ್ರೀಲಂಕಾ ಟಿ20 ಸರಣಿ ವೇಳಾಪಟ್ಟಿ:

ಫೆಬ್ರವರಿ 24 – ಮೊದಲ ಟಿ20, ಲಕ್ನೋ

ಫೆ. 26 – 2ನೇ ಟಿ20, ಧರ್ಮಶಾಲಾ

ಫೆ.27 – 3ನೇ ಟಿ20, ಧರ್ಮಶಾಲಾ

ಭಾರತ vs ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ:

ಮಾರ್ಚ್ 4-8 – ಮೊದಲ ಟೆಸ್ಟ್, ಮೊಹಾಲಿ

ಮಾರ್ಚ್ 12-16 – 2ನೇ ಟೆಸ್ಟ್, ಬೆಂಗಳೂರು (ಹಗಲು-ರಾತ್ರಿ)

ಇದನ್ನೂ ಓದಿ: World Record: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಯುವ ಬ್ಯಾಟ್ಸ್​ಮನ್

ಇದನ್ನೂ ಓದಿ: Dewald Brevis: ಐಪಿಎಲ್​ನಲ್ಲಿ ಹರಾಜಾದ ಬಳಿಕ ಬೇಬಿ ಎಬಿ ಫುಲ್ ಫ್ಲಾಪ್..!

(IND vs SL, 1st T20I: When & Where To Watch Live Streaming)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ