IND vs SL: 600ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ

India's Historic 600th Test vs SL: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15 ರಂದು ಗಾಲೆ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಇದು ಟೀಂ ಇಂಡಿಯಾದ 600ನೇ ಟೆಸ್ಟ್ ಪಂದ್ಯ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಂತರ ಈ ಮೈಲಿಗಲ್ಲು ತಲುಪಿದ ಮೂರನೇ ರಾಷ್ಟ್ರ ಭಾರತ. ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಉಭಯ ತಂಡಗಳ ಪ್ಲೇಯಿಂಗ್ XI ಪ್ರಕಟವಾಗಿದೆ.

IND vs SL: 600ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ
Ind Vs Sl Toss

Updated on: Aug 15, 2026 | 10:10 AM

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಆಗಸ್ಟ್ 15 ರಂದು ಈ ಟೆಸ್ಟ್ ಪಂದ್ಯ ಶುರುವಾಗಿರುವುದು ಭಾರತೀಯರಿಗೆ ವಿಶೇಷವಾಗಿರುವುದರ ಜೊತೆಗೆ ಇದು ಟೀಂ ಇಂಡಿಯಾಕ್ಕೆ 600ನೇ ಟೆಸ್ಟ್ ( 600th Test) ಪಂದ್ಯವಾಗಿದೆ. ಈ ಮೂಲಕ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನಾಡಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಟೀಂ ಇಂಡಿಯಾ ಈ ಐತಿಹಾಸಿಕ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಮತ್ತಷ್ಟು ಸ್ಮರಣೀಯಗೊಳಿಸಲು ನೋಡುತ್ತಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ (Shubman Gill) ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ಪ್ಲೇಯಿಂಗ್ 11 ಹೀಗಿದೆ

ತಂಡದ ಪ್ಲೇಯಿಂಗ್ 11 ನೋಡುವುದಾದರೆ.. ಈ ಮೊದಲೇ ನಿರೀಕ್ಷಿಸಿದ ಹೆಸರುಗಳೇ ಆಡುವ ಹನ್ನೊಂದರ ಬಳಗದಲ್ಲಿವೆ. ತಂಡದಲ್ಲಿ 4 ಬ್ಯಾಟರ್​ಗಳು, ಮೂವರು ವಿಕೆಟ್ ಕೀಪರ್​ಗಳು, ಇಬ್ಬರು ಆಲ್​ರೌಂಡರ್​ಗಳ ಜೊತೆಗೆ ಒಬ್ಬ ಸ್ಪಿನ್ನರ್ ಹಾಗೂ ಇಬ್ಬರು ವೇಗಿಗಳಿದ್ದಾರೆ. ಕೆಎಲ್ ರಾಹುಲ್, ರಿಷಭ್ ಪಂತ್ ಹಾಗೂ ದ್ರುವ್ ಜುರೇಲ್ ತಂಡದಲ್ಲಿರುವ ವಿಕೆಟ್ ಕೀಪರ್​ಗಳಾಗಿದ್ದು, ಇವರಲ್ಲಿ ರಿಷಭ್ ಪಂತ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸಿದರೆ, ಅವರಿಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಸಾಥ್ ನೀಡಲಿದ್ದಾರೆ.

ಭಾರತದ 600ನೇ ಟೆಸ್ಟ್

ಮೇಲೆ ಹೇಳಿದಂತೆ ಇದು ಟೀಂ ಇಂಡಿಯಾದ 600ನೇ ಟೆಸ್ಟ್ ಪಂದ್ಯವಾಗಿದೆ. ಈ ಮೂಲಕ ಈ ಐತಿಹಾಸಿಕ ಸಾಧನೆ ಮಾಡಿದ ಮೂರನೇ ದೇಶ ಎಂಬ ಹೆಗ್ಗಳಿಕೆಗೆ ಟೀಂ ಇಂಡಿಯಾ ಪಾತ್ರವಾಗಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಮಾತ್ರ ಮೊದಲೆರಡು ಸ್ಥಾನಗಳಲ್ಲಿವೆ. ಇನ್ನು ಈ ವಿಶೇಷ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ ಮುನ್ನಡೆ ಸಾಧಿಸುವುದರ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್​ನಲ್ಲಿ ಉಳಿಯಲು ಯತ್ನಿಸಲಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಭಾರತದ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್, ಧ್ರುವ ಜುರೆಲ್, ರವೀಂದ್ರ ಜಡೇಜಾ, ಮಾನವ್ ಸುತಾರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಭಾರತದ ಪ್ಲೇಯಿಂಗ್ XI: ಲಹಿರು ಉದಾರ, ನಿಶಾನ್ ಮಧುಶಂಕ, ದಿನೇಶ್ ಚಾಂಡಿಮಲ್, ಕಮಿಂದು ಮೆಂಡಿಸ್, ಧನಂಜಯ ಡಿ ಸಿಲ್ವಾ (ನಾಯಕ), ಸೋನಾಲ್ ದಿನುಶಾ, ನಿರೋಶಾ ಡಿಕ್ವೆಲ್ಲಾ, ಕೇಶರ ನುವಂತ, ಪ್ರಭಾತ್ ಜಯಸೂರ್ಯ, ಲಹಿರು ಕುಮಾರ, ಅಸಿತ ಫೆರ್ನಾಂಡೊ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:01 am, Sat, 15 August 26

Loading...
Unable to load recommendations.
Follow Us