ಲಂಕಾ ಪಡೆಯನ್ನು ಮಕಾಡೆ ಮಲಗಿಸಿದ ಟೀಮ್ ಇಂಡಿಯಾ

Sri Lanka vs India, 1st Test: ಗಾಲೆಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ದ್ವಿತೀಯ ಇನಿಂಗ್ಸ್‌ನಲ್ಲಿ 372 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ್ದ ಶ್ರೀಲಂಕಾ ತಂಡವನ್ನು 206 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಭಾರತ ತಂಡ ಭರ್ಜರಿ ಜಯ ತನ್ನದಾಗಿಸಿಕೊಂಡಿದೆ.

ಲಂಕಾ ಪಡೆಯನ್ನು ಮಕಾಡೆ ಮಲಗಿಸಿದ ಟೀಮ್ ಇಂಡಿಯಾ
Team India
Image Credit source: BCCI

Updated on: Aug 19, 2026 | 1:37 PM

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಗಾಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಮೊದಲ ಇನಿಂಗ್ಸ್​ನಲ್ಲಿ 462 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಶ್ರೀಲಂಕಾ ತಂಡವು ಕೇವಲ 284 ರನ್​ಗಳಿಗೆ ಆಲೌಟ್ ಆಯಿತು.

178 ರನ್​ಗಳ ಮುನ್ನಡೆ:

ಮೊದಲ ಇನಿಂಗ್ಸ್​ನಲ್ಲಿ 178 ರನ್​ಗಳ ಮುನ್ನಡೆ ಪಡೆದ ಟೀಮ್ ಇಂಡಿಯಾ ಕಡೆಯಿಂದ ದ್ವಿತೀಯ ಇನಿಂಗ್ಸ್​ನಲ್ಲಿ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 2ನೇ ಇನಿಂಗ್ಸ್​ನಲ್ಲಿ ಭಾರತ ತಂಡವು ಕೇವಲ 193 ರನ್​ಗಳಿಸಿ ಆಲೌಟ್ ಆಯಿತು.

ಪ್ರಥಮ ಇನಿಂಗ್ಸ್​ನಲ್ಲಿನ 178 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 372 ರನ್​ಗಳ ಗುರಿ ಪಡೆದ ಶ್ರೀಲಂಕಾ ತಂಡವು ಐದನೇ ದಿನದಾಟದ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಧನಂಜಯ ಡಿಸಿಲ್ವಾ (59) ಹಾಗೂ ಸೋನಲ್ ದಿನುಶಾ (77) ಅವರ ಅರ್ಧಶತಕದೊಂದಿಗೆ ದಿಟ್ಟ ಪ್ರದರ್ಶನ ನೀಡಿದ ಲಂಕಾ ಪಡೆ ಗೆಲುವಿನತ್ತ ಸಾಗುವ ಸೂಚನೆ ನೀಡಿದ್ದರು.

ಆದರೆ ಧನಂಜಯ, ಸೋನಲ್ ವಿಕೆಟ್ ಸಿಗುತ್ತಿದ್ದಂತೆ ಪಂದ್ಯದಲ್ಲಿ ಕಂಬ್ಯಾಕ್ ಮಾಡಿದ ಟೀಮ್ ಇಂಡಿಯಾ ಬೌಲರ್​ಗಳು ಲಂಕಾ ಬ್ಯಾಟರ್​ಗಳ ಮೇಲೆ ಒತ್ತಡ ಹೇರಿದರು. ಈ ಮೂಲಕ ಶ್ರೀಲಂಕಾ ತಂಡವನ್ನು 206 ರನ್​ಗಳಿಗೆ ಆಲೌಟ್ ಮಾಡಿ ಟೀಮ್ ಇಂಡಿಯಾ 165 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಭರ್ಜರಿ ಗೆಲುವಿನೊಂದಿಗೆ ಟೀಮ್ ಇಂಡಿಯಾ 2 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಡ್ರಾ ಸಾಧಿಸಿರೂ ಸರಣಿಯನ್ನು ವಶಪಡಿಸಿಕೊಳ್ಳಬಹುದು.

ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರು:

  • ದೇವದತ್ ಪಡಿಕ್ಕಲ್- 167 ರನ್ (ಮೊದಲ ಇನಿಂಗ್ಸ್​)
  • ರಿಷಭ್ ಪಂತ್- 66 ರನ್ (ದ್ವಿತೀಯ ಇನಿಂಗ್ಸ್​)
  • ಮಾನವ್ ಸುತಾರ್- 4 ವಿಕೆಟ್ (ಮೊದಲ ಇನಿಂಗ್ಸ್​)
  • ಮಾನವ್ ಸುತಾರ್- 6 ವಿಕೆಟ್ (ದ್ವಿತೀಯ ಇನಿಂಗ್ಸ್​)

ಭಾರತ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್, ಧ್ರುವ ಜುರೆಲ್, ರವೀಂದ್ರ ಜಡೇಜಾ, ಮಾನವ್ ಸುತಾರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: 23 ಸೆಕೆಂಡ್ಸ್​​ನಲ್ಲಿ ಗೋಲು… ಹೊಸ ಇತಿಹಾಸ ಬರೆದ ರಿಕಾರ್ಡೊ!

ಶ್ರೀಲಂಕಾ ಪ್ಲೇಯಿಂಗ್ XI: ಲಹಿರು ಉದಾರ, ನಿಶಾನ್ ಮಧುಶಂಕ, ದಿನೇಶ್ ಚಂಡಿಮಲ್, ಕಮಿಂದು ಮೆಂಡಿಸ್, ಧನಂಜಯ ಡಿ ಸಿಲ್ವಾ (ನಾಯಕ), ಸೋನಾಲ್ ದಿನುಶಾ, ನಿರೋಶಾ ಡಿಕ್ವೆಲ್ಲಾ, ಕೇಶರ ನುವಂತ, ಪ್ರಭಾತ್ ಜಯಸೂರ್ಯ, ಲಹಿರು ಕುಮಾರ, ಅಸಿತ ಫೆರ್ನಾಂಡೊ.

Loading...
Unable to load recommendations.
Follow Us