
ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯು ಆಗಸ್ಟ್ 15, 2026 ರಿಂದ ಪ್ರಾರಂಭವಾಗಲಿದೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯವು ಗಾಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ (Galle International Cricket Stadium) ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನಲ್ಲಿ ಉಳಿಯಬೇಕೆಂದರೆ ಈ ಸರಣಿಯು ಎರಡೂ ತಂಡಗಳಿಗೆ ಬಹಳ ಮುಖ್ಯವಾಗಿದೆ. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತಂಡವು ಟಾಪ್ -4 ಗೆ ಪ್ರವೇಶಿಸುವ ಸಾಧ್ಯತೆಯಿದೆ. ಹೀಗಾಗಿ ಟೀಂ ಇಂಡಿಯಾ ಈ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಲು ನೋಡುತ್ತಿದೆ. ಆದರೆ ಅದಕ್ಕೂ ಮೊದಲು ಮೊದಲ ಟೆಸ್ಟ್ ಪಂದ್ಯ ನಡೆಯಲಿರುವ ಗಾಲೆ ಮೈದಾನದಲ್ಲಿ ಭಾರತದ ಪ್ರದರ್ಶನ ಹೇಗಿದೆ ಎಂಬುದನ್ನು ನೋಡೋಣ.
ಶ್ರೀಲಂಕಾ ವಿರುದ್ಧ ಭಾರತ ಅದ್ಭುತ ಟೆಸ್ಟ್ ದಾಖಲೆಯನ್ನು ಹೊಂದಿದೆ. 1982 ಮತ್ತು 2022 ರ ನಡುವೆ, ಎರಡೂ ದೇಶಗಳು 46 ಪಂದ್ಯಗಳನ್ನು ಆಡಿವೆ. ಇದರಲ್ಲಿ ಭಾರತ 22 ಗೆದ್ದು 7 ಪಂದ್ಯಗಳಲ್ಲಿ ಸೋತಿದೆ. ಉಳಿದಂತೆ 17 ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. ಇನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್‌ನಲ್ಲಿ ಭಾರತ 11 ವರ್ಷಗಳಿಂದ ಅಜೇಯವಾಗಿದ್ದು ಕೊನೆಯ ಬಾರಿಗೆ 2015 ರಲ್ಲಿ 63 ರನ್‌ಗಳಿಂದ ಸೋತಿತ್ತು.
ಈ ಪಂದ್ಯವನ್ನು ಆಗಸ್ಟ್ 15 ರಂದು ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಪಂದ್ಯ ನಡೆಯುವ ಗಾಲೆಯಲ್ಲಿಯೇ ಆಡಲಾಗಿತ್ತು. ಆ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಕೂಡ ಆಡಿದ್ದರಾದರೂ ಆ ಪಂದ್ಯದಲ್ಲಿ ಅವರ ಪ್ರದರ್ಶನ ಉತ್ತಮವಾಗಿರಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ 7 ರನ್‌ಗಳಿಗೆ ಸುಸ್ತಾಗಿದ್ದ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ 4 ರನ್‌ಗಳಿಗೆ ಔಟಾಗಿದ್ದರು. ಶಿಖರ್ ಧವನ್ ಮತ್ತು ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದರು.
IND vs SL: 16 ವರ್ಷಗಳ ಬಳಿಕ ಈತನಿಲ್ಲದೆ ಟೆಸ್ಟ್ ಆಡಲಿದೆ ಟೀಂ ಇಂಡಿಯಾ
ಈ ಪಂದ್ಯದ ನಂತರ, ಭಾರತ ಮತ್ತು ಶ್ರೀಲಂಕಾ 10 ಪಂದ್ಯಗಳನ್ನು ಆಡಿವೆ. ಭಾರತ 8 ಪಂದ್ಯಗಳನ್ನು ಗೆದ್ದು 2 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಒಂದು ಪಂದ್ಯವನ್ನು ಗಾಲೆಯಲ್ಲಿಯೂ ಆಡಲಾಗಿದ್ದು, 2017 ರಲ್ಲಿ ಭಾರತ 304 ರನ್‌ಗಳಿಂದ ಗೆದ್ದಿದೆ. ಭಾರತ ಗಾಲೆಯಲ್ಲಿ 5 ಪಂದ್ಯಗಳನ್ನು ಆಡಿದ್ದು, 2 ರಲ್ಲಿ ಗೆದ್ದಿದ್ದು, 3 ರಲ್ಲಿ ಸೋತಿದೆ. ಭಾರತ 2001, 2010 ಮತ್ತು 2015 ರಲ್ಲಿ ಗಾಲೆಯಲ್ಲಿ ಸೋತಿದೆ.
Published On - 6:13 pm, Mon, 10 August 26