ಭಾರತ ಕ್ರಿಕೆಟ್ ತಂಡ ಪ್ರಸ್ತುತ ಶ್ರೀಲಂಕಾ (India Vs Sri Lanka) ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದೆ. ಈ ಸರಣಿಯಲ್ಲಿ ಸಹಜವಾಗಿಯೇ ಒಂದು ಪಂದ್ಯ ಬಾಕಿಯಿದ್ದರೂ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಂಡಿದೆ. ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ ಅಜೇಯ 2-0 ಮುನ್ನಡೆ ಸಾಧಿಸುವಲ್ಲಿ ರೋಹಿತ್ (Rohit Sharma) ಬಳಗ ಯಶಸ್ವಿಯಾಗಿದೆ. ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ (Eden Gardens Stadium) ನಡೆದ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿದಲ್ಲದೆ ಸರಣಿಯನ್ನು ಗೆದ್ದುಕೊಂಡಿತು. ಈ ಗೆಲುವನ್ನು ಇಡೀ ತಂಡ ಸಂಭ್ರಮಿಸಿದೆ. ಈ ಸಂಭ್ರಮಾಚರಣೆಯ ವಿಡಿಯೋ ವೈರಲ್ ಆಗುತ್ತಿದ್ದು, ಇದರಲ್ಲಿ ವಿರಾಟ್ ಕೊಹ್ಲಿ ಮತ್ತು ತಂಡದ ಯುವ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (Virat Kohli and Ishan Kishan) ಮಸ್ತ್ ಮಸ್ತ್ ಡಾನ್ಸ್ ಮಾಡಿ ಅಲ್ಲಿ ನೆರದಿದ್ದ ಅಭಿಮಾನಿಗಳನ್ನು ರಂಜಿಸಿದ್ದಾರೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 39.4 ಓವರ್‌ಗಳಲ್ಲಿ ಕೇವಲ 215 ರನ್‌ಗಳಿಗೆ ಆಲೌಟ್ ಆಯಿತು. ಆದರೆ ಈ ಗುರಿ ಬೆನ್ನಟ್ಟಿದ ಭಾರತ ಕೂಡ ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು. ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಅವರ ಅಜೇಯ 64 ರನ್‌ಗಳ ಆಧಾರದ ಮೇಲೆ ಭಾರತ 43.2 ಓವರ್‌ಗಳಲ್ಲಿ ಆರು ವಿಕೆಟ್‌ಗಳನ್ನು ಕಳೆದುಕೊಂಡು ಈ ಗುರಿಯನ್ನು ಸಾಧಿಸಿತು.
IND vs SL: ‘ರೋಹಿತ್ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸುತ್ತಿದ್ದೇನೆ’; ಪಂದ್ಯದ ಬಳಿಕ ರಾಹುಲ್ ಹೇಳಿದ್ದೇನು?
ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸರಣಿ ವಶಪಡಿಸಿಕೊಂಡಿದ್ದು, ಟೀಂ ಇಂಡಿಯಾ ಆಟಗಾರರು ಈ ಸರಣಿ ಗೆಲುವನ್ನು ಅದ್ಧೂರಿಯಾಗಿ ಸಂಭ್ರಮಿಸಿದ್ದಾರೆ. ಈ ಸಂಭ್ರಮಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಮತ್ತು ಇಶಾನ್ ಕಿಶನ್ ಜಾಲಿ ಮೂಡ್‌ನಲ್ಲಿರುವುದನ್ನು ಕಾಣಬಹುದಾಗಿದೆ. ಈ ಇಬ್ಬರೂ ಆಟಗಾರರು ಸಖತ್ತಾಗಿ ಡಾನ್ಸ್ ಮಾಡುವುದರೊಂದಿಗೆ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.
Virat Kohli and Ishan Kishan dancing after the yesterday’s ODI series win at Eden Gardens! pic.twitter.com/pV6BvsFIIZ
— CricketMAN2 (@ImTanujSingh) January 13, 2023
ಈ ಸರಣಿಯಲ್ಲಿ ವಿರಾಟ್ ತಮ್ಮ ಏಕದಿನ ಶತಕದ ಬರವನ್ನು ನೀಗಿಸಿಕೊಂಡಿದ್ದಾರೆ. ಗುವಾಹಟಿಯಲ್ಲಿ ನಡೆದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಶತಕ ಬಾರಿಸಿದರು. ಇದು ನಾಲ್ಕು ವರ್ಷಗಳ ನಂತರ ಭಾರತದಲ್ಲಿ ಅವರ ಮೊದಲ ಶತಕವಾಗಿತ್ತು. ಆದರೆ, ಮೂರನೇ ಪಂದ್ಯದಲ್ಲಿ ವಿರಾಟ್ ವಿಶೇಷ ಸಾಧನೆ ಮಾಡಲು ಸಾಧ್ಯವಾಗದೆ ಕೇವಲ ನಾಲ್ಕು ರನ್ ಗಳಿಸಿ ಔಟಾದರು. ಮತ್ತೊಂದೆಡೆ, ಇಶಾನ್ ಕಿಶನ್ ಎರಡೂ ಪಂದ್ಯಗಳಲ್ಲಿ ಇನ್ನೂ ಅವಕಾಶವನ್ನು ಪಡೆದಿಲ್ಲ. ಆದರೆ ಇಶಾನ್ ಬಾಂಗ್ಲಾದೇಶದಲ್ಲಿ ಆಡಿದ ತನ್ನ ಕೊನೆಯ ಏಕದಿನ ಪಂದ್ಯದಲ್ಲಿ ದ್ವಿಶತಕ ಗಳಿಸಿ ಹಲವು ದಾಖಲೆಗಳನ್ನು ತನ್ನ ಮಡಿಲಿಗೆ ಹಾಕಿಕೊಂಡಿದ್ದರು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:17 pm, Fri, 13 January 23