Sanju Samson: ಮುಂಬೈನಲ್ಲೇ ಉಳಿದ ಸಂಜು ಸ್ಯಾಮ್ಸನ್: 2ನೇ ಪಂದ್ಯಕ್ಕೆ​ ಅನುಮಾನ

| Updated By: ಝಾಹಿರ್ ಯೂಸುಫ್

Updated on: Jan 04, 2023 | 9:22 PM

IND vs SL 2nd T20: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲೂ ಬದಲಾವಣೆಯಾಗಬಹುದು. ಆರಂಭಿಕರಾಗಿ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಮುಂದುವರೆಯಲಿದ್ದಾರೆ.

Sanju Samson: ಮುಂಬೈನಲ್ಲೇ ಉಳಿದ ಸಂಜು ಸ್ಯಾಮ್ಸನ್: 2ನೇ ಪಂದ್ಯಕ್ಕೆ​ ಅನುಮಾನ
Team India-Sanju Samson
Follow us on

India vs Sri lanka 2nd T20: ಭಾರತ-ಶ್ರೀಲಂಕಾ ನಡುವಣ 2ನೇ ಟಿ20 ಪಂದ್ಯವು ಗುರುವಾರ ಪುಣೆಯಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 2 ರನ್​ಗಳ ರೋಚಕ ಜಯ ಸಾಧಿಸಿತ್ತು. ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿರುವ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ (Sanju Samson) ಕಣಕ್ಕಿಳಿಯುವುದು ಅನುಮಾನ. ಏಕೆಂದರೆ ಈಗಾಗಲೇ ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದ ತಂಡ ಪುಣೆಗೆ ಬಂದಿಳಿದಿದೆ. ಆದರೆ ಈ ಬಳಗದಲ್ಲಿ ಸಂಜು ಸ್ಯಾಮ್ಸನ್ ಕಾಣಿಸಿಕೊಂಡಿಲ್ಲ.

ಮೊದಲ ಪಂದ್ಯದ ಫೀಲ್ಡಿಂಗ್​ ವೇಳೆ ಸಂಜು ಸ್ಯಾಮ್ಸನ್​ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದರು. ಇದೀಗ ಮೊಣಕಾಲಿನ ಸಿ.ಟಿ ಸ್ಕ್ಯಾನ್​ಗಾಗಿ ಟೀಮ್ ಇಂಡಿಯಾ ಆಟಗಾರ ಮುಂಬೈನಲ್ಲೇ ಉಳಿದಿದ್ದಾರೆ. ಈ ಗಾಯದ ಗಂಭೀರತೆಯನ್ನು ಖಚಿತಪಡಿಸಿಕೊಂಡ ಬಳಿಕವಷ್ಟೇ ಅವರು ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಹೀಗಾಗಿ 2ನೇ ಪಂದ್ಯಕ್ಕೆ ಸ್ಯಾಮ್ಸನ್ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಒಂದು ವೇಳೆ ಸಂಜು ಸ್ಯಾಮ್ಸನ್ 2ನೇ ಪಂದ್ಯಕ್ಕೆ ಅಲಭ್ಯರಾದರೆ ರಾಹುಲ್ ತ್ರಿಪಾಠಿಗೆ ಅವಕಾಶ ಸಿಗುವ ಸಾಧ್ಯೆತೆಯಿದೆ. ಏಕೆಂದರೆ ಕಳೆದ ಕೆಲ ಸರಣಿಗಳಿಂದ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿರುವ ತ್ರಿಪಾಠಿಗೆ ಚೊಚ್ಚಲ ಪಂದ್ಯವಾಡುವ ಅವಕಾಶ ಸಿಕ್ಕಿಲ್ಲ. ಇದೀಗ ಸಂಜು ಸ್ಯಾಮ್ಸನ್ ಹೊರಗುಳಿದರೆ ರಾಹುಲ್ ತ್ರಿಪಾಠಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು.

ಇದನ್ನೂ ಓದಿ
IPL 2023: 2 ದೇಶಗಳಿಂದ ಐಪಿಎಲ್​ಗೆ ಆಯ್ಕೆಯಾದ ಏಕೈಕ ಕ್ರಿಕೆಟಿಗ
IPL 2023: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಡೌಟ್, ಏಕೆಂದರೆ…
IPL 2023: ಐಪಿಎಲ್​ಗೆ ನಮೀಬಿಯಾ, ಐರ್ಲೆಂಡ್, ಜಿಂಬಾಬ್ವೆ ಆಟಗಾರರು ಎಂಟ್ರಿ
IPL 2023 RCB Team: RCB ಹೊಸ ತಂಡ ಹೀಗಿದೆ

ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲೂ ಬದಲಾವಣೆಯಾಗಬಹುದು. ಆರಂಭಿಕರಾಗಿ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಮುಂದುವರೆಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ನಾಲ್ಕನೇ ಕ್ರಮಾಂಕದಲ್ಲಿ ರಾಹುಲ್​ ತ್ರಿಪಾಠಿಗೆ ಅವಕಾಶ ಸಿಗಬಹುದು. 5ನೇ, 6ನೇ ಮತ್ತು 7ನೇ ಕ್ರಮಾಂಕದಲ್ಲಿ ಆಲ್​ರೌಂಡರ್​ಗಳಾದ ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿಯಲಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಹರ್ಷಲ್ ಪಟೇಲ್ ಅವರ ಬದಲಿಗೆ ಅರ್ಷದೀಪ್ ಸಿಂಗ್ ಕಣಕ್ಕಿಳಿಯಬಹುದು. ಜ್ವರದ ಕಾರಣ ಅರ್ಷದೀಪ್ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಉಳಿದಂತೆ ಶಿವಂ ಮಾವಿ, ಉಮ್ರಾನ್ ಮಲಿಕ್ ಹಾಗೂ ಯುಜುವೇಂದ್ರ ಚಹಾಲ್ ಬೌಲಿಂಗ್ ವಿಭಾಗದಲ್ಲಿ ಮುಂದುವರೆಯಲಿದ್ದಾರೆ.

ಟೀಮ್ ಇಂಡಿಯಾ ಟಿ20 ತಂಡ:

ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.