AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL, 2nd T20I, LIVE Streaming: ಭಾರತ-ಶ್ರೀಲಂಕಾ 2ನೇ ಟಿ20 ಪಂದ್ಯ: ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

IND vs SL, 2nd T20I, LIVE Streaming: ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೂ ಭಾರತೀಯ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

IND vs SL, 2nd T20I, LIVE Streaming: ಭಾರತ-ಶ್ರೀಲಂಕಾ 2ನೇ ಟಿ20 ಪಂದ್ಯ: ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ
IND vs SL, 2nd T20I
TV9 Web
| Edited By: |

Updated on: Jan 04, 2023 | 10:25 PM

Share

IND vs SL, 2nd T20I, LIVE Streaming: ಭಾರತ-ಶ್ರೀಲಂಕಾ ನಡುವಣ 2ನೇ ಟಿ20 ಪಂದ್ಯವು ನಾಳೆ (ಜ.5) ಪುಣೆಯಲ್ಲಿ ನಡೆಯಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಅತ್ತ ಸರಣಿ ಉಳಿಸಿಕೊಳ್ಳಬೇಕಿದ್ದರೆ 2ನೇ ಪಂದ್ಯದಲ್ಲಿ ಶ್ರೀಲಂಕಾ ಗೆಲ್ಲಲೇಬೇಕು. ಹೀಗಾಗಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.

ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೂ ಭಾರತೀಯ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅದರಲ್ಲೂ ಚೊಚ್ಚಲ ಪಂದ್ಯವಾಡಿದ ಶುಭ್​ಮನ್ ಗಿಲ್ ನಿರಾಸೆ ಮೂಡಿಸಿದರೆ, ಸೂರ್ಯಕುಮಾರ್ ಯಾದವ್ ಸಿಡಿಯಲಿಲ್ಲ. ಇನ್ನು ಸಂಜು ಸ್ಯಾಮ್ಸನ್ ಬಂದ ವೇಗದಲ್ಲೇ ಹಿಂತಿರುಗಿದ್ದರು. ಇದೀಗ ಗಾಯಗೊಂಡಿರುವ ಸ್ಯಾಮ್ಸನ್ 2ನೇ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ. ಹೀಗಾಗಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಪ್ರಮುಖ ಬದಲಾವಣೆ ಕಂಡು ಬರಬಹುದು. ಇನ್ನು ಈ ಪಂದ್ಯವನ್ನು ಯಾವಾಗ, ಎಲ್ಲಿ ಮತ್ತು ಹೇಗೆ ವೀಕ್ಷಿಸಬಹುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟಿ20 ಪಂದ್ಯ ಯಾವಾಗ?

ಇದನ್ನೂ ಓದಿ
Image
IPL 2023: 2 ದೇಶಗಳಿಂದ ಐಪಿಎಲ್​ಗೆ ಆಯ್ಕೆಯಾದ ಏಕೈಕ ಕ್ರಿಕೆಟಿಗ
Image
IPL 2023: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಡೌಟ್, ಏಕೆಂದರೆ…
Image
IPL 2023: ಐಪಿಎಲ್​ಗೆ ನಮೀಬಿಯಾ, ಐರ್ಲೆಂಡ್, ಜಿಂಬಾಬ್ವೆ ಆಟಗಾರರು ಎಂಟ್ರಿ
Image
IPL 2023 RCB Team: RCB ಹೊಸ ತಂಡ ಹೀಗಿದೆ

ಟೀಮ್ ಇಂಡಿಯಾ-ಶ್ರೀಲಂಕಾ ನಡುವಣ ಎರಡನೇ ಟಿ20 ಪಂದ್ಯ ಜನವರಿ 5 ರಂದು (ಗುರುವಾರ) ನಡೆಯಲಿದೆ.

2ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಈ ಪಂದ್ಯವು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯಲಿದೆ.

ಈ ಪಂದ್ಯ ಯಾವಾಗ ಆರಂಭವಾಗುತ್ತದೆ?

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟಿ20 ಪಂದ್ಯ ರಾತ್ರಿ 7:00 ಗಂಟೆಗೆ ಆರಂಭವಾಗಲಿದ್ದು, ಪಂದ್ಯದ ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ಪಂದ್ಯದ ನೇರ ಪ್ರಸಾರ ವೀಕ್ಷಿಸಬಹುದು?

ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್​ನಲ್ಲಿ ನೋಡಬಹುದು.

ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಇದೆಯಾ?

ನೀವು Hotstar ನಲ್ಲಿ ಚಂದಾದಾರರಾಗಿದ್ದರೆ ಈ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಶ್ರೀಲಂಕಾ ಟಿ20 ತಂಡ: ಕುಸಾಲ್ ಮೆಂಡಿಸ್, ದಸುನ್ ಶನಕ (ನಾಯಕ) , ಪಾತುಂ ನಿಸ್ಸಂಕ , ಧನಂಜಯ ಡಿ ಸಿಲ್ವ , ಚರಿತ್ ಅಸಲಂಕ , ಭಾನುಕ ರಾಜಪಕ್ಸೆ , ವನಿಂದು ಹಸರಂಗ , ಚಾಮಿಕ ಕರುಣಾರತ್ನೆ , ಮಹೀಶ್ ತೀಕ್ಷಣ , ದಿಲ್ಶನ್ ಮಧುಶಂಕ , ಅಶ್ಮೋದ್ ಕುಮಾರ , ಅವಿಶ್ಕ ಕುಮಾರ , ಅವಿಷ್ಕ ಕುಮಾರ ವೆಲ್ಲಲಾಗೆ , ನುವಾನ್ ತುಷಾರ , ಕಸುನ್ ರಜಿತ , ಸದೀರ ಸಮರವಿಕ್ರಮ.

ಟೀಮ್ ಇಂಡಿಯಾ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.