IND vs SL: ರೋಹಿತ್ಗೆ ದಾಖಲೆಯ ಪಂದ್ಯ, ತಂಡದಲ್ಲಿ ಹಲವು ಬದಲಾವಣೆ; ಉಭಯ ತಂಡಗಳ ಪ್ಲೇಯಿಂಗ್ XI
IND vs SL: ಸತತ ಮೂರನೇ ಟಿ20 ಸರಣಿ ವಶಪಡಿಸಿಕೊಂಡಿರುವ ಭಾರತ ತಂಡ ಇದೀಗ ಹ್ಯಾಟ್ರಿಕ್ ಕ್ಲೀನ್ ಸ್ವೀಪ್ ಹೊಡೆಯಲು ಹೊರಟಿದೆ. ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಧರ್ಮಶಾಲಾದಲ್ಲಿ ಆರಂಭವಾಗಿದೆ.
ಸತತ ಮೂರನೇ ಟಿ20 ಸರಣಿ (T20 series) ವಶಪಡಿಸಿಕೊಂಡಿರುವ ಭಾರತ ತಂಡ ಇದೀಗ ಹ್ಯಾಟ್ರಿಕ್ ಕ್ಲೀನ್ ಸ್ವೀಪ್ ಹೊಡೆಯಲು ಹೊರಟಿದೆ. ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಧರ್ಮಶಾಲಾದಲ್ಲಿ ಆರಂಭವಾಗಿದೆ. ಶ್ರೀಲಂಕಾ ನಾಯಕ ದಾಸುನ್ ಶನಕ (Dasun Shanka) ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಫೆಬ್ರವರಿ 26 ರ ಶನಿವಾರದಂದು ಇದೇ ಮೈದಾನದಲ್ಲಿ ಶ್ರೀಲಂಕಾವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ತಂಡವು ಈಗಾಗಲೇ 2-0 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿದೆ. ಇದೀಗ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಂತರ ಶ್ರೀಲಂಕಾವನ್ನು ಕ್ಲೀನ್ ಸ್ವೀಪ್ ಮಾಡುವ ಉದ್ದೇಶದಿಂದ ಭಾರತ ತಂಡ ತನ್ನ ಬಲಿಷ್ಠ ಆಟ ಪ್ರದರ್ಶಿಸಲಿದೆ.
ಈಗಾಗಲೇ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡ ಕಳೆದ ಪಂದ್ಯದಲ್ಲಿ ಹಲವು ಬದಲಾವಣೆ ಮಾಡಿ ಇತರೆ ಆಟಗಾರರಿಗೆ ಅವಕಾಶ ನೀಡಲು ನಿರ್ಧರಿಸಿದೆ. ಈ ಪಂದ್ಯಕ್ಕಾಗಿ 4 ಆಟಗಾರರು ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಗಾಯದ ಸಮಸ್ಯೆಯಿಂದ ಇಶಾನ್ ಕಿಶನ್ ಈಗಾಗಲೇ ಈ ಪಂದ್ಯದಿಂದ ಹೊರಗುಳಿದಿದ್ದರು. ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ ಮತ್ತು ಯುಜ್ವೇಂದ್ರ ಚಹಾಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಸ್ಥಾನದಲ್ಲಿ ಕುಲದೀಪ್ ಯಾದವ್, ಅವೇಶ್ ಖಾನ್, ರವಿ ಬಿಷ್ಣೋಯ್ ಮತ್ತು ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ವಿಶೇಷವೆಂದರೆ ಇಂದಿನ ಪಂದ್ಯದಲ್ಲಿ ಇಶಾನ್ ಕಿಶನ್ ಬದಲಿಗೆ ರೋಹಿತ್ ಶರ್ಮಾ ಜೊತೆಗೆ ಸಂಜು ಸ್ಯಾಮ್ಸನ್ಗೆ ಓಪನಿಂಗ್ ಅವಕಾಶ ಸಿಕ್ಕಿದೆ. ಶ್ರೇಯಸ್ ಸ್ಥಾನವನ್ನು ಮೂರನೇ ಸ್ಥಾನದಲ್ಲಿ ಉಳಿಸಿಕೊಂಡರೆ, ದೀಪಕ್ ಹೂಡಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ಪಂದ್ಯದ ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಯಾಗುವ ಎಲ್ಲ ಸಾಧ್ಯತೆಗಳಿವೆ. ಆದರೆ, ಇಂದು ಟೀಂ ಇಂಡಿಯಾ 6 ಪ್ರಮುಖ ಬೌಲರ್‌ಗಳು ಸೇರಿದಂತೆ ಒಟ್ಟು 8 ಬೌಲರ್‌ಗಳೊಂದಿಗೆ ಕಣಕ್ಕೆ ಇಳಿದಿದೆ.
ಇಂದಿನ ಪ್ಲೇಯಿಂಗ್ XI
ಭಾರತ: ರೋಹಿತ್ ಶರ್ಮಾ (ನಾಯಕ), ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ವೆಂಕಟೇಶ್ ಅಯ್ಯರ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅವೇಶ್ ಖಾನ್ ಮತ್ತು ಮೊಹಮ್ಮದ್ ಸಿರಾಜ್.
ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸಂಕ, ಚರಿತ್ ಅಸಲಂಕಾ, ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್), ಜನಿತ್ ಲಿಯಾಂಗೆ, ಚಮಿಕಾ ಕರುಣರತ್ನೆ, ದುಷ್ಮಂತ ಚಮೀರಾ, ಲಹಿರು ಕುಮಾರ, ಜೆಫ್ರಿ ವಾಂಡರ್ಸೆ, ಬಿನೂರ ಫೆರ್ನಾಂಡೋ ಮತ್ತು ದನುಷ್ಕಾ ಗುಂಟಿಲಕ.
Published On - 6:40 pm, Sun, 27 February 22