IND vs SL: ಮೂರನೇ ಟಿ20 ಪಂದ್ಯಕ್ಕೂ ಮಳೆಯ ಆತಂಕ..! ಪಲ್ಲೆಕೆಲೆ ಪಿಚ್ ಯಾರಿಗೆ ಹೆಚ್ಚು ಸಹಕಾರಿ?

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಜುಲೈ 30 ರಂದು ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು ಮಾತ್ರವಲ್ಲದೆ ಸರಣಿಯನ್ನೂ ಗೆದ್ದಿದೆ.

IND vs SL: ಮೂರನೇ ಟಿ20 ಪಂದ್ಯಕ್ಕೂ ಮಳೆಯ ಆತಂಕ..! ಪಲ್ಲೆಕೆಲೆ ಪಿಚ್ ಯಾರಿಗೆ ಹೆಚ್ಚು ಸಹಕಾರಿ?
ಪಲ್ಲೆಕೆಲೆ ಹವಾಮಾನ ವರದಿ
Follow us
ಪೃಥ್ವಿಶಂಕರ
|

Updated on: Jul 29, 2024 | 10:41 PM

ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಜುಲೈ 30 ರಂದು ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು ಮಾತ್ರವಲ್ಲದೆ ಸರಣಿಯನ್ನೂ ಗೆದ್ದಿದೆ. ಇದೀಗ ಟೀಂ ಇಂಡಿಯಾ ಮೂರನೇ ಪಂದ್ಯವನ್ನು ಗೆದ್ದು ಸರಣಿಯನ್ನು ವೈಟ್ ವಾಶ್ ಮಾಡಲು ಪ್ರಯತ್ನಿಸಿದರೆ, ಇತ್ತ ಆತಿಥೇಯ ಶ್ರೀಲಂಕಾ ತಂಡ ಮುಜುಗರವನ್ನು ತಪ್ಪಿಸಿಕೊಳ್ಳುವ ಸಲುವಾಗಿ ಶತಾಯಗತಾಯ ಗೆಲುವಿಗಾಗಿ ಹೋರಾಡಲಿದೆ.

ಇನ್ನು ಉಭಯ ತಂಡಗಳ ಮುಖಾಮುಖಿ ಬಗ್ಗೆ ಹೇಳುವುದಾದರೆ.. ಭಾರತ ಮತ್ತು ಶ್ರೀಲಂಕಾ ಟಿ20ಯಲ್ಲಿ ಇದುವರೆಗೆ 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ ಈ 31 ಪಂದ್ಯಗಳಲ್ಲಿ ಭಾರತ 21 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

ಹವಾಮಾನ ವರದಿ

ಜುಲೈ 30, 2024 ರಂದು, ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ತಾಪಮಾನವು ಸುಮಾರು 20-20 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಪಂದ್ಯದ ವೇಳೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಪಂದ್ಯದ ವೇಳೆ ವೇಗವಾಗಿ ಗಾಳಿ ಬೀಸಲಿದೆ ಎಂದು ವರದಿಯಾಗಿದೆ. ಹೀಗಾಗಿ ಎರಡನೇ ಟಿ20 ಪಂದ್ಯದಂತೆ ಮೂರನೇ ಟಿ20 ಪಂದ್ಯವೂ ಸಹ ಮಳೆಪೀಡಿತವಾಗಬಹುದು ಎಂದು ಊಹಿಸಲಾಗಿದೆ.

ಪಲ್ಲೆಕೆಲೆ ಪಿಚ್ ವರದಿ

ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಪಿಚ್‌ನಲ್ಲಿ ವೇಗದ ಬೌಲರ್‌ಗಳು ಆರಂಭದಲ್ಲಿ ಸ್ವಲ್ಪ ಸಹಾಯವನ್ನು ಪಡೆಯುವ ನಿರೀಕ್ಷೆಯಿದೆ. ಆದಾಗ್ಯೂ, ಬ್ಯಾಟ್ಸ್‌ಮನ್‌ಗಳು ಆರಂಭಿಕ ಓವರ್‌ಗಳನ್ನು ಎಚ್ಚರಿಕೆಯಿಂದ ಆಡಿದರೆ ನಂತರದ ಓವರ್‌ಗಳಲ್ಲಿ ಅವರು ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸಬಹುದು. ಅಲ್ಲದೆ ಎರಡನೇ ಇನಿಂಗ್ಸ್‌ನಲ್ಲಿ ಈ ಪಿಚ್‌ನಲ್ಲಿ ರನ್ ಗಳಿಸುವುದು ಸುಲಭವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈ ಪಿಚ್‌ನಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಬಹುದು. ಇಲ್ಲಿಯವರೆಗೆ ಇಲ್ಲಿ 25 ಟಿ20 ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟ್ ಮಾಡಿದ ತಂಡಗಳು 13 ಬಾರಿ ಗೆದ್ದಿದ್ದರೆ, 10 ಪಂದ್ಯಗಳಲ್ಲಿ, ನಂತರ ಬ್ಯಾಟಿಂಗ್ ಮಾಡಿದ ತಂಡಗಳು ಗೆದ್ದಿವೆ. ಎರಡು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ.

ಉಭಯ ಸಂಭಾವ್ಯ ತಂಡಗಳು

ಭಾರತ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರವಿ ಬಿಷ್ಣೋಯ್, ಖಲೀಲ್ ಅಹ್ಮದ್.

ಶ್ರೀಲಂಕಾ ಸಂಭಾವ್ಯ ತಂಡ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಕುಸಲ್ ಪೆರೆರಾ, ಕಮಿಂದು ಮೆಂಡಿಸ್, ಚರಿತ್ ಅಸಲಂಕ (ನಾಯಕ), ದಸುನ್ ಶನಕ, ವನಿಂದು ಹಸರಂಗ, ಮಹಿಷ್ ತಿಕ್ಷಣ, ಮತಿಶ ಪತಿರಾನ, ಅಸಿತ ಫೆರ್ನಾಂಡೋ, ದಿಲ್ಶನ್ ಮಧುಶಂಕ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ