IND vs SL: ವಿರಾಟ್ ಕೊಹ್ಲಿ 100ನೇ ಟೆಸ್ಟ್: ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಬಿಸಿಸಿಐ

| Updated By: ಝಾಹಿರ್ ಯೂಸುಫ್

Updated on: Mar 01, 2022 | 10:36 PM

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಶುಕ್ರವಾರ, ಮಾರ್ಚ್ 4 ರಿಂದ ಮೊಹಾಲಿಯಲ್ಲಿ ನಡೆಯಲಿದೆ.

IND vs SL: ವಿರಾಟ್ ಕೊಹ್ಲಿ 100ನೇ ಟೆಸ್ಟ್: ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಬಿಸಿಸಿಐ
Virat Kohli
Follow us on

ಭಾರತ ಕ್ರಿಕೆಟ್ ತಂಡದ ಮತ್ತು ವಿರಾಟ್ ಕೊಹ್ಲಿ ಅಭಿಮಾನಿಗಳ ಒತ್ತಡಕ್ಕೆ ಕೊನೆಗೂ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ತಲೆಬಾಗಿದೆ. ಮೊಹಾಲಿಯಲ್ಲಿ ನಡೆಯಲಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ವೀಕ್ಷಕರಿಗೆ ಶೇಕಡಾ 50 ರಷ್ಟು ಬರಲು ಬಿಸಿಸಿಐ ಅವಕಾಶ ನೀಡಿದೆ. ಇದರೊಂದಿಗೆ ಕಿಂಗ್ ಕೊಹ್ಲಿ ಮಹತ್ವದ ಪಂದ್ಯವನ್ನು ಅಭಿಮಾನಿಗಳು ಸ್ಟೇಡಿಯಂನಲ್ಲೇ ವೀಕ್ಷಿಸಬಹುದು. ಈ ಮೊದಲು, ಮಂಡಳಿಯು ಈ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶ ನೀಡಿರಲಿಲ್ಲ. ಇದಕ್ಕೆ ಕರೋನಾ ಸೋಂಕು ಮತ್ತು ಪಂಜಾಬ್ ಚುನಾವಣೆಯ ಮತಗಳ ಎಣಿಕೆ ಕಾರಣವೆಂದು ಉಲ್ಲೇಖಿಸಲಾಗಿತ್ತು. ಆದರೆ ಇದಕ್ಕೂ ಮೊದಲು, ಧರ್ಮಶಾಲಾದಲ್ಲಿ ನಡೆದ ಎರಡೂ ಟಿ20 ಮತ್ತು ನಂತರ ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ಟೆಸ್ಟ್‌ಗೆ ಪ್ರೇಕ್ಷಕರಿಗೆ ಬರಲು ಅವಕಾಶ ನೀಡಲಾಯಿತು. ಬಿಸಿಸಿಐನ ಈ ನಡೆಯ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿರಾಟ್ ಕೊಹ್ಲಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ 100ನೇ ಟೆಸ್ಟ್ ಪಂದ್ಯವಾಡುತ್ತಿರುವ ಕೊಹ್ಲಿ ವಿಶೇಷ ಪಂದ್ಯವನ್ನು ಸ್ಟೇಡಿಯಂನಲ್ಲೇ ವೀಕ್ಷಿಸಲು ಅನುವು ಮಾಡಿಕೊಡಬೇಕೆಂದು ಸಾಮಾಜಿಕ ಜಾಲತಾಣಗಳ ಮೂಲಕ ಒತ್ತಾಯಿಸಲಾಗಿತ್ತು.

ಅದರಂತೆ ಇದೀಗ ಶೇ. 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವುದಾಗಿ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಒಪ್ಪಿಗೆ ನೀಡಿದೆ ಎಂದು ಮಂಡಳಿಯ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್​ಗೆ ಪ್ರೇಕ್ಷಕರಿಗೆ ಅವಕಾಶ ನೀಡಲು ರಾಜ್ಯ ಕ್ರಿಕೆಟ್ ಸಂಸ್ಥೆ ನಿರ್ಧಾರ ಕೈಗೊಂಡಿದೆ. ನಾನು ಪಿಸಿಎ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ವಿರಾಟ್ ಕೊಹ್ಲಿ ಅವರ 100 ನೇ ಟೆಸ್ಟ್ ಪಂದ್ಯದಲ್ಲಿ ಅಭಿಮಾನಿಗಳು ಐತಿಹಾಸಿಕ ಸಾಧನೆಯನ್ನು ವೀಕ್ಷಿಸಬಹುದು ಎಂದು ಜಯ್ ಶಾ ಹೇಳಿದ್ದಾರೆ.

100 ನೇ ಟೆಸ್ಟ್​ ಮತ್ತು 71ನೇ ಆಟಗಾರ:
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಶುಕ್ರವಾರ, ಮಾರ್ಚ್ 4 ರಿಂದ ಮೊಹಾಲಿಯಲ್ಲಿ ನಡೆಯಲಿದೆ. ಇದರೊಂದಿಗೆ ವಿರಾಟ್ ಕೊಹ್ಲಿ 100 ಟೆಸ್ಟ್ ಪಂದ್ಯಗಳನ್ನು ಆಡಿದ 12ನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಅಷ್ಟೇ ಅಲ್ಲ, ಈ ಸಾಧನೆ ಮಾಡಲಿರುವ ವಿಶ್ವದ 71ನೇ ಆಟಗಾರನಾಗಲಿದ್ದಾರೆ. ಇನ್ನು 100 ಟೆಸ್ಟ್ ಪಂದ್ಯಗಳನ್ನು ಆಡಿದ 71 ನೇ ಆಟಗಾರನಾಗುವುದರೊಂದಿಗೆ, ಕೊಹ್ಲಿ ತಮ್ಮ 71 ನೇ ಶತಕವನ್ನು ಸಿಡಿಸುವ ನಿರೀಕ್ಷೆ ಮುಗಿಲೆತ್ತಕ್ಕೇರಿದೆ. ಹೀಗಾಗಿ ಈ ಪಂದ್ಯವು ಎಲ್ಲಾ ಕಾರಣಗಳಿಂದ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?