IND vs SL: ಲಂಕಾ ವಿರುದ್ಧದ ಟಿ20 ಸರಣಿಗೆ ಯಾರಿಗೆಲ್ಲಾ ಅವಕಾಶ? ಸಂಭಾವ್ಯ ಟೀಂ ಇಂಡಿಯಾ ಹೀಗಿದೆ

IND vs SL: ಶ್ರೀಲಂಕಾ ವಿರುದ್ಧದ ಟಿ20 ಸರಣಿಯೊಂದಿಗೆ ಟೀಂ ಇಂಡಿಯಾ ಹೊಸ ವರ್ಷವನ್ನು ಆರಂಭಿಸಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಮೂರು ಟಿ20 ಪಂದ್ಯಗಳನ್ನು ಆಡಲಿದೆ.

IND vs SL: ಲಂಕಾ ವಿರುದ್ಧದ ಟಿ20 ಸರಣಿಗೆ ಯಾರಿಗೆಲ್ಲಾ ಅವಕಾಶ? ಸಂಭಾವ್ಯ ಟೀಂ ಇಂಡಿಯಾ ಹೀಗಿದೆ
ಭಾರತ ತಂಡ
Follow us
| Updated By: ಪೃಥ್ವಿಶಂಕರ

Updated on:Dec 26, 2022 | 5:14 PM

ಶ್ರೀಲಂಕಾ ವಿರುದ್ಧದ ಟಿ20 ಸರಣಿಯೊಂದಿಗೆ ಟೀಂ ಇಂಡಿಯಾ (India vs Srilanka) ಹೊಸ ವರ್ಷವನ್ನು ಆರಂಭಿಸಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ (Team India) ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಮಂಗಳವಾರ ಶ್ರೀಲಂಕಾ ವಿರುದ್ಧದ ಈ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ಆದರೆ ಆಯ್ಕೆ ಮಂಡಳಿಯನ್ನು ವಜಾ ಮಾಡಿರುವ ಬಿಸಿಸಿಐ (BCCI) ಯಾರ ನೇತೃತ್ವದಲ್ಲಿ ತಂಡವನ್ನು ಆಯ್ಕೆ ಮಾಡಲಿದೆ ಎಂಬುದು ಪ್ರಶ್ನೆಯಾಗಿದೆ. ಈಗ ಸಿಕ್ಕಿರುವ ಮಾಹಿತಿ ಪ್ರಕಾರ, ವಜಾಗೊಂಡಿರುವ ಆಯ್ಕೆ ಸಮಿತಿಯೇ ಲಂಕಾ ಪ್ರವಾಸಕ್ಕೆ ತಂಡವನ್ನು ಆಯ್ಕೆ ಮಾಡಲಿದೆ ಎಂದು ವರದಿಯಾಗಿದೆ. ಜನವರಿ 3 ರಿಂದ 7 ರವರೆಗೆ ಟೀಂ ಇಂಡಿಯಾ ಮತ್ತು ಶ್ರೀಲಂಕಾ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಶ್ರೀಲಂಕಾ ವಿರುದ್ಧದ ಈ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.

ಹಿರಿಯರಿಗೆ ಕೋಕ್

ನಿಯಮಿತ ನಾಯಕ ರೋಹಿತ್ ಶರ್ಮಾ ಹೆಬ್ಬೆರಳಿನ ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ತಂಡಕ್ಕೆ ಆಯ್ಕೆಯಾಗುವುದು ಭಾಗಶಃ ಅನುಮಾನ. ಅಲ್ಲದೆ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆಗಳಿವೆ. ಅಲ್ಲದೆ ಜನವರಿಯಲ್ಲಿ ಕೆಎಲ್ ರಾಹುಲ್ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಇರುವುದರಿಂದ ಅವರು ಕೂಡ ವಿಶ್ರಾಂತಿ ಪಡೆಯಲಿದ್ದಾರೆ.

ಮುಂಬೈ ಆಟಗಾರನಿಗೆ ಅವಕಾಶ ಸಿಗುತ್ತಾ?

ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಹಿರಿಯ ಆಟಗಾರ ಆಡುವ ಸಾಧ್ಯತೆ ಕಡಿಮೆ. ಹೀಗಾಗಿ ಅನೇಕ ಯುವ ಆಟಗಾರರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಪೃಥ್ವಿ ಶಾಗೆ ಆರಂಭಿಕ ಸ್ಥಾನಕ್ಕೆ ಅವಕಾಶ ಸಿಗಬಹುದು. ಕೆಎಲ್ ರಾಹುಲ್ ಬದಲಿಗೆ ಶುಭಮನ್ ಗಿಲ್​ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಮೂರನೇ ಓಪನರ್ ಆಗಿ ಇಶಾನ್ ಕಿಶನ್ ಕೂಡ ಆಯ್ಕೆಯಾಗಿದ್ದಾರೆ.

ಟೆಸ್ಟ್ ಚಾಂಪಿಯನ್​ಶಿಪ್, ವಿಶ್ವಕಪ್, ಏಷ್ಯಾಕಪ್; 2023ರಲ್ಲಿ ಟೀಂ ಇಂಡಿಯಾಕ್ಕಿರುವ 6 ಸವಾಲುಗಳಿವು

ಟೀಂ ಇಂಡಿಯಾದಲ್ಲಿ ಯಾರಿಗೆ ಸ್ಥಾನ?

ಸೂರ್ಯಕುಮಾರ್ ಯಾದವ್ ಕೂಡ ತಂಡದಲ್ಲಿ ಇರಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ ಮತ್ತು ರಿಷಬ್ ಪಂತ್ ಅವಕಾಶ ಪಡೆಯಬಹುದು. ರಿಷಬ್ ಪಂತ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಟೀಮ್ ಇಂಡಿಯಾದ ಮೊದಲ ಆಯ್ಕೆಯಾಗಲಿದ್ದಾರೆ. ಶ್ರೀಲಂಕಾ ವಿರುದ್ಧದ ಈ ಸರಣಿಗೆ ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ ಮತ್ತು ಶಾರ್ದೂಲ್ ಠಾಕೂರ್ ಆಲ್‌ರೌಂಡರ್‌ಗಳಾಗಿ ಅವಕಾಶ ಪಡೆಯಬಹುದಾಗಿದೆ.

ಸ್ಪಿನ್ ಬೌಲಿಂಗ್‌ನಲ್ಲಿ ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್ ಮತ್ತು ಕುಲ್ದೀಪ್ ಯಾದವ್ ಆಯ್ಕೆಯಾಗಿದ್ದಾರೆ. ಅರ್ಷದೀಪ್ ಸಿಂಗ್, ದೀಪಕ್ ಚಹಾರ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ಮತ್ತು ಉಮ್ರಾನ್ ಮಲಿಕ್ ವೇಗದ ಬೌಲಿಂಗ್‌ನಲ್ಲಿ ಅವಕಾಶ ಪಡೆಯಬಹುದು.

ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದ ಸಂಭಾವ್ಯ ತಂಡ

ಶುಭಮನ್ ಗಿಲ್, ಪೃಥ್ವಿ ಶಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಭುವನೇಶ್ವರ್ ಕುಮಾರ್, ಭುವನೇಶ್ವರ್ ಕುಮಾರ್ , ದೀಪಕ್ ಹೂಡಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅಕ್ಷರ್ ಪಟೇಲ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Mon, 26 December 22