AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಲಂಕಾ ಪಡೆಯ ದಿಟ್ಟ ಹೋರಾಟ: ಕುತೂಹಲ ಘಟ್ಟದತ್ತ ಪಂದ್ಯ

India vs Sri Lanka 2nd Test: ಭಾರತ ಮತ್ತು ಶ್ರೀಲಂಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಕೊಲೊಂಬೋದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ನಡೆಯುತ್ತಿದೆ. ಎರಡು ಪಂದ್ಯಗಳ ಈ ಸರಣಿಯಲ್ಲಿ ಈಗಾಗಲೇ 1-0 ಮುನ್ನಡೆಯಲ್ಲಿರುವ ಭಾರತ ತಂಡ, ಈ ಪಂದ್ಯದಲ್ಲೂ ಜಯ ಸಾಧಿಸಿದರೆ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ.

IND vs SL: ಲಂಕಾ ಪಡೆಯ ದಿಟ್ಟ ಹೋರಾಟ: ಕುತೂಹಲ ಘಟ್ಟದತ್ತ ಪಂದ್ಯ
Sri Lanka
ಝಾಹಿರ್ ಯೂಸುಫ್
|

Updated on:Aug 27, 2026 | 12:53 PM

Share

ಕೊಲಂಬೋದ ಎಸ್‌ಎಸ್‌ಸಿ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ರೋಚಕ ಘಟ್ಟ ತಲುಪಿದೆ. ಪ್ರವಾಸಿ ಭಾರತ ತಂಡದ ಬೃಹತ್ ಮೊತ್ತಕ್ಕೆ ಉತ್ತರವಾಗಿ ಫಾಲೋ-ಆನ್ ಹಿನ್ನಡೆ ಅನುಭವಿಸಿದ ಶ್ರೀಲಂಕಾ, ದ್ವಿತೀಯ ಇನ್ನಿಂಗ್ಸ್‌ನಲ್ಲಿ ದಿಟ್ಟ ಹೋರಾಟ ಪ್ರದರ್ಶಿಸಿದೆ. ಈ ಹೋರಾಟದ ಫಲವಾಗಿ ಲಂಕಾ ಬ್ಯಾಟರ್‌ಗಳು ಐದನೇ ದಿನದಾಟದ ಮೊದಲ ಸೆಷನ್‌ನಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ್ದಾರೆ.

ಒಂದು ಹಂತದಲ್ಲಿ ಕೇವಲ 229 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಇನ್ನಿಂಗ್ಸ್ ಸೋಲಿನ ಭೀತಿಯಲ್ಲಿದ್ದ ಸಿಂಹಳೀಯರಿಗೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಆಸರೆಯಾಗಿದ್ದಾರೆ. 5ನೇ ದಿನದ ಆರಂಭಿಕ ಅವಧಿಯಲ್ಲಿ ಭಾರತೀಯ ಬೌಲರ್‌ಗಳ ತಂತ್ರಗಾರಿಕೆಯನ್ನು ಸಮರ್ಥವಾಗಿ ಮೆಟ್ಟಿನಿಂತ ಶ್ರೀಲಂಕಾ ಬ್ಯಾಟರ್‌ಗಳು ವಿಕೆಟ್ ಪತನಕ್ಕೆ ಬ್ರೇಕ್ ಹಾಕಿದರು.

ದಿನುಷಾ-ನುವಾಂತ ಬ್ಯಾಟಿಂಗ್ ಪರಾಕ್ರಮ:

ಲಂಕಾ ಪಡೆಯ ಪರವಾಗಿ ಸೋನಲ್ ದಿನುಷಾ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ ಆಕರ್ಷಕ ಅರ್ಧಶತಕ ದಾಖಲಿಸಿದ್ದಾರೆ. ಅವರಿಗೆ ಕ್ರೀಸ್‌ನಲ್ಲಿ ದೀರ್ಘಕಾಲ ಸಾಥ್ ನೀಡಿದ ಕೇಶರ ನುವಾಂತ, ಭಾರತದ ಸ್ಪಿನ್ ಹಾಗೂ ವೇಗದ ದಾಳಿಯನ್ನು ಅತ್ಯಂತ ಸಂಯಮದಿಂದ ಎದುರಿಸಿದರು. ಈ ಜೋಡಿಯು ಶತಕದ ಜೊತೆಯಾಟದ ಮೂಲಕ ತಂಡವನ್ನು ಕೇವಲ ಆಪತ್ತಿನಿಂದ ಪಾರು ಮಾಡಿದ್ದಲ್ಲದೆ, ಶ್ರೀಲಂಕಾ ದ್ವಿತೀಯ ಇನ್ನಿಂಗ್ಸ್‌ನಲ್ಲಿ 320ಕ್ಕೂ ಅಧಿಕ ರನ್ ಕಲೆಹಾಕಲು ನೆರವಾಗಿದ್ದಾರೆ.

ಭಾರತಕ್ಕೆ ಲಂಕಾ ಮುನ್ನಡೆಯ ಶಾಕ್:

ಭೋಜನ ವಿರಾಮದ ವೇಳೆಗೆ ಶ್ರೀಲಂಕಾ ತಂಡ 116 ರನ್‌ಗಳ ಪ್ರಮುಖ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿರುವ ಭಾರತಕ್ಕೆ ಪಂದ್ಯವನ್ನು ಗೆಲ್ಲಲು ಇನ್ನು ಕೇವಲ 4 ವಿಕೆಟ್‌ಗಳ ಅಗತ್ಯವಿದೆ. ಆದರೆ, ಪಿಚ್ ಬ್ಯಾಟಿಂಗ್‌ಗೆ ಪೂರಕವಾಗುತ್ತಿರುವುದರಿಂದ ಭಾರತೀಯ ಬೌಲರ್‌ಗಳು ಹರಸಾಹಸ ಪಡಬೇಕಾಗಿದೆ.

5ನೇ ದಿನದ ಅಂತಿಮ ಅವಧಿಗಳಲ್ಲಿ ಪಂದ್ಯವು ಡ್ರಾದತ್ತ ಸಾಗಲಿದೆಯೇ ಅಥವಾ ಭಾರತದ ಬೌಲರ್‌ಗಳು ಕಂಬ್ಯಾಕ್ ಮಾಡಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ.

2 ಸೆಷನ್ ಬಾಕಿ:

ಐದನೇ ದಿನದಾಟದ ಮೊದಲ ಸೆಷನ್‌ನಲ್ಲಿ ವಿಕೆಟ್ ನಷ್ಟವಿಲ್ಲದೆ ಶ್ರೀಲಂಕಾ ಸಂಪೂರ್ಣ ಮೇಲುಗೈ ಸಾಧಿಸಿದೆ. ಅದರಂತೆ ಇದೀಗ ತಂಡವು 116 ರನ್‌ಗಳ ಮುನ್ನಡೆ ಪಡೆದುಕೊಂಡಿದೆ. ಆದಾಗ್ಯೂ ಪಂದ್ಯದಲ್ಲಿ ಇನ್ನೆರಡು ಸೆಷನ್‌ಗಳು ಬಾಕಿ ಇದ್ದು, ಈ ಅವಧಿಯಲ್ಲಿ ಒಟ್ಟು 60 ಓವರ್‌ಗಳ ಆಟ ನಡೆಯಲಿದೆ.

ಇಲ್ಲಿ 2ನೇ ಸೆಷನ್‌ನಲ್ಲಿ ಭಾರತ ತಂಡ 4 ವಿಕೆಟ್‌ಗಳನ್ನು ಕಬಳಿಸಿ ಶ್ರೀಲಂಕಾ ತಂಡವನ್ನು ಆಲೌಟ್ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಏಕೆಂದರೆ ಎರಡನೇ ಸೆಷನ್‌ನಲ್ಲೇ ಆಲೌಟ್ ಮಾಡಿದರೆ ಮಾತ್ರ, ಭಾರತ ತಂಡವು ಮೂರನೇ ಸೆಷನ್‌ನಲ್ಲಿ ಶ್ರೀಲಂಕಾ ನೀಡುವ ರನ್ ಗುರಿಯನ್ನು ಚೇಸ್ ಮಾಡಿ ಪಂದ್ಯವನ್ನು ಗೆಲ್ಲಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: ಮೊದಲ 3 ಎಸೆತಗಳಲ್ಲೇ ಹ್ಯಾಟ್ರಿಕ್: ಹೊಸ ವಿಶ್ವ ದಾಖಲೆ ಬರೆದ ಲಿಂಗೇಶ್!

ಆದರೆ ಅತ್ತ ಶ್ರೀಲಂಕಾ ತಂಡವು ಮೂರನೇ ಸೆಷನ್‌ವರೆಗೂ ಬ್ಯಾಟಿಂಗ್ ಮುಂದುವರಿಸಿ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಪ್ಲಾನ್ ರೂಪಿಸಿದೆ. ಹೀಗಾಗಿ ಟೀಮ್ ಇಂಡಿಯಾಗೆ ಈ 2ನೇ ಸೆಷನ್ ಅತ್ಯಂತ ನಿರ್ಣಾಯಕವಾಗಿ ಮಾರ್ಪಟ್ಟಿದೆ. ಅದರಂತೆ ಈ ಪಂದ್ಯವು ಡ್ರಾದಲ್ಲಿ ಕೊನೆಗೊಳ್ಳಲಿದೆಯೇ ಅಥವಾ ಟೀಮ್ ಇಂಡಿಯಾ ರನ್ ಬೆನ್ನಟ್ಟಿ ಗೆಲುವು ಸಾಧಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Published On - 12:48 pm, Thu, 27 August 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ