AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಶ್ರೀಲಂಕಾ ಮುಂದಿರುವುದು ಒಂದೇ ಆಯ್ಕೆ!

India vs Sri Lanka 2nd Test: ಭಾರತ ಮತ್ತು ಶ್ರೀಲಂಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಕೊಲೊಂಬೋದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ನಡೆಯುತ್ತಿದೆ. ಎರಡು ಪಂದ್ಯಗಳ ಈ ಸರಣಿಯಲ್ಲಿ ಈಗಾಗಲೇ 1-0 ಮುನ್ನಡೆಯಲ್ಲಿರುವ ಭಾರತ ತಂಡ, ಈ ಪಂದ್ಯದಲ್ಲೂ ಜಯ ಸಾಧಿಸಿದರೆ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ.

IND vs SL: ಶ್ರೀಲಂಕಾ ಮುಂದಿರುವುದು ಒಂದೇ ಆಯ್ಕೆ!
Sri LankaImage Credit source: GettyImages
ಝಾಹಿರ್ ಯೂಸುಫ್
|

Updated on:Aug 27, 2026 | 7:48 AM

Share

ಆತಿಥೇಯ ಶ್ರೀಲಂಕಾ ಮತ್ತು ಭಾರತ ತಂಡಗಳ ನಡುವೆ ಕೊಲೊಂಬೊದ ಎಸ್‌ಎಸ್‌ಸಿ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯವು ಐದನೇ ದಿನದಾಟಕ್ಕೆ ತಲುಪಿದೆ. ಪ್ರವಾಸಿ ಭಾರತ ತಂಡವು ಈ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಇನ್ನಿಂಗ್ಸ್ ಸೋಲಿನ ಭೀತಿಯಲ್ಲಿದ್ದ ಶ್ರೀಲಂಕಾ ತಂಡಕ್ಕೆ ಈಗ ಪಂದ್ಯವನ್ನು ‘ಡ್ರಾ’ ಮಾಡಿಕೊಳ್ಳುವುದೊಂದೇ ಉಳಿದಿರುವ ಏಕೈಕ ದಾರಿಯಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 503 ರನ್‌ಗಳ ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಮಾಡಿಕೊಂಡಿತು. ಆರಂಭಿಕ ಆಘಾತದ ಹೊರತಾಗಿಯೂ, ದೇವದತ್ ಪಡಿಕ್ಕಲ್ (117 ರನ್) ಮತ್ತು ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ (115 ರನ್) ಅವರ ಆಕರ್ಷಕ ಶತಕಗಳ ನೆರವಿನಿಂದ ಭಾರತ ಬೃಹತ್ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಯಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಲಂಕಾ ತತ್ತರ!

ಭಾರತದ ಬೃಹತ್ ಮೊತ್ತಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಶ್ರೀಲಂಕಾ, ಪ್ರಸಿದ್ಧ್ ಕೃಷ್ಣ ಮತ್ತು ಮಾನವ್ ಸುತಾರ್ ಅವರ ಜಂಟಿ ದಾಳಿಗೆ ತತ್ತರಿಸಿತು. ಆತಿಥೇಯರ ಪರ ಸೋನಾಲ್ ದಿನುಶಾ (103 ರನ್) ಏಕಾಂಗಿ ಹೋರಾಟ ನಡೆಸಿ ಶತಕ ಸಿಡಿಸಿದರೂ, ತಂಡವನ್ನು ಫಾಲೋ-ಆನ್‌ನಿಂದ ರಕ್ಷಿಸಲು ಸಾಧ್ಯವಾಗಲಿಲ್ಲ. ಶ್ರೀಲಂಕಾ ಕೇವಲ 290 ರನ್‌ಗಳಿಗೆ ಆಲೌಟ್ ಆಗುವ ಮೂಲಕ 213 ರನ್‌ಗಳ ಭಾರಿ ಹಿನ್ನಡೆ ಅನುಭವಿಸಿತು.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅಲ್ಪ ಮುನ್ನಡೆ:

ಫಾಲೋ-ಆನ್ ಪಡೆದು ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡ ಆರಂಭದಲ್ಲೇ ವಿಕೆಟ್ ಕಳೆದುಕೊಂಡರೂ, ಮಧ್ಯಮ ಕ್ರಮಾಂಕದಲ್ಲಿ ಪಸಿಂದು ಸೂರ್ಯಬಂಡಾರ (92 ರನ್) ಮತ್ತು ಕಮಿಂದು ಮೆಂಡಿಸ್ (55 ರನ್) ಜವಾಬ್ದಾರಿಯುತ ಆಟ ಪ್ರದರ್ಶಿಸಿ ತಂಡಕ್ಕೆ ಆಸರೆಯಾದರು. ಸದ್ಯ ಶ್ರೀಲಂಕಾ ತಂಡವು 6 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿದ್ದು, ಭಾರತದ ವಿರುದ್ಧ ಕೇವಲ 16 ರನ್‌ಗಳ ಅಲ್ಪ ಮುನ್ನಡೆ ಸಾಧಿಸಿದೆ.

ಮುಂದಿರುವುದು ಒಂದೇ ಆಯ್ಕೆ:

ನಾಲ್ಕನೇ ದಿನದಾಟದ ಅಂತ್ಯಕ್ಕೆ ಶ್ರೀಲಂಕಾ ತಂಡವು 6 ವಿಕೆಟ್ ಕಳೆದುಕೊಂಡು 229 ರನ್​ಗಳಿಸಿದೆ. ಇನ್ನುಳಿದ 4 ವಿಕೆಟ್​ಗಳೊಂದಿಗೆ ಲಂಕಾ ಪಡೆ ಐದನೇ ದಿನದಾಟದ ಅಂತ್ಯದವರೆಗೆ ಬ್ಯಾಟಿಂಗ್ ಕಾಯ್ದುಕೊಳ್ಳಬೇಕಿದೆ. ಅಂದರೆ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಶ್ರೀಲಂಕಾ ಕೊನೆಯವರೆಗೆ ಬ್ಯಾಟಿಂಗ್ ಮಾಡುವುದು ಅನಿವಾರ್ಯ.

ಇದನ್ನೂ ಓದಿ: 500 ರನ್​ಗಳ ಇತಿಹಾಸ: ಟೀಮ್ ಇಂಡಿಯಾಗೆ ಸೋಲಿನ ಭಯವೇ ಇಲ್ಲ!

ಇತ್ತ, ಟೀಮ್ ಇಂಡಿಯಾ ಇನ್ನುಳಿದ 4 ವಿಕೆಟ್‌ಗಳನ್ನು ಬೇಗನೇ ಕಬಳಿಸಿ, ಶ್ರೀಲಂಕಾವನ್ನು ಆಲೌಟ್ ಮಾಡುವ ಮೂಲಕ ರನ್ ಚೇಸ್ ಮಾಡುವ ತವಕದಲ್ಲಿದೆ. ಹೀಗಾಗಿ ಪಂದ್ಯದ ಮೊದಲ ಸೆಷನ್‌ನಲ್ಲೇ ಜಯದ ಮಾಲೆ ಧರಿಸಲು ಭಾರತೀಯ ಆಟಗಾರರು ಭರ್ಜರಿ ಪ್ಲ್ಯಾನ್ ರೂಪಿಸುತ್ತಿದ್ದಾರೆ. ಆದರೆ, ಸೋಲಿನ ಸುಳಿಯಿಂದ ಪಾರಾಗಲು ಲಂಕಾ ಬ್ಯಾಟರ್‌ಗಳಿಗೆ ಉಳಿದಿರುವುದು ರಕ್ಷಣಾತ್ಮಕ ಆಟವೊಂದೇ. ಹೀಗಾಗಿ ಹೇಗಾದರೂ ಮಾಡಿ ಪಂದ್ಯವನ್ನು ‘ಡ್ರಾ’ ಮಾಡಿಕೊಳ್ಳುವುದೇ ಆತಿಥೇಯರ ಮುಂದಿರುವ ಕೊನೆಯ ಆಶಾವಾದವಾಗಿದೆ.

Published On - 7:44 am, Thu, 27 August 26

Follow Us
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ