IND vs SL 3rd ODI: ಟೀಮ್ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಸಾಧ್ಯತೆ: ಕನ್ನಡಿಗನಿಗೆ ಸಿಗಲಿದೆಯಾ ಚಾನ್ಸ್?
India vs Sri Lanka 3rd ODI playing 11: ಸ್ಪಿನ್ ವಿಭಾಗದಲ್ಲಿ ಕುಲ್ದೀಪ್-ಚಹಲ್ ಜೋಡಿಯಲ್ಲಿ ಒಬ್ಬರನ್ನು ಬದಲಿಸಬಹುದು. 2ನೇ ಏಕದಿನ ಪಂದ್ಯದಲ್ಲಿ 10 ಓವರ್ ಬೌಲಿಂಗ್ ಮಾಡಿದ್ದ ಕುಲ್ದೀಪ್ 55 ರನ್ ನೀಡಿದರೂ ಯಾವುದೇ ವಿಕೆಟ್ ಪಡೆಯುವಲ್ಲಿ ಸಫಲರಾಗಿರಲಿಲ್ಲ.
ಟೀಮ್ ಇಂಡಿಯಾದ ಪ್ರಮುಖ ಆಟಗಾರರ ಅನುಪಸ್ಥಿತಿ ನಡುವೆಯೂ ಭಾರತ ಕಿರಿಯರ ತಂಡ ಶ್ರೀಲಂಕಾ ವಿರುದ್ದ ಏಕದಿನ ಸರಣಿ ಜಯಿಸಿದೆ. ಈ ಮೂಲಕ ಟೀಮ್ ಇಂಡಿಯಾ ಯುವ ಪಡೆ ಕೂಡ ಬಲಿಷ್ಠವಾಗಿರುವುದನ್ನು ಸಾಬೀತುಪಡಿಸಿದೆ. ಮೊದಲ ಏಕದಿನ ಪಂದ್ಯವನ್ನು 7 ವಿಕೆಟ್ಗಳಿಂದ ಗೆದ್ದುಕೊಂಡಿದ್ದ ಭಾರತ, 2ನೇ ಪಂದ್ಯದಲ್ಲಿ 3 ವಿಕೆಟ್ಗಳ ರೋಚಕ ಜಯ ಸಾಧಿಸಿತು. ಇದೀಗ ಬುಧವಾರ ನಡೆಯಲಿರುವ 3ನೇ ಏಕದಿನ ಪಂದ್ಯಕ್ಕಾಗಿ ಶಿಖರ್ ಧವನ್ ಪಡೆ ಸಜ್ಜಾಗಿದೆ. ಆದರೆ ಈಗಾಗಲೇ 2-0 ಅಂತರದಿಂದ ಸರಣಿ ಗೆದ್ದಿರುವ ಹಿನ್ನೆಲೆಯಲ್ಲಿ ಮೊದಲೆರಡು ಪಂದ್ಯಗಳಲ್ಲಿ ಅವಕಾಶ ವಂಚಿತರಾಗಿದ್ದ ಆಟಗಾರರಿಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ಮೊದಲೆರಡು ಪಂದ್ಯಗಳಲ್ಲಿ ಫಾರ್ಮ್ ಪ್ರದರ್ಶಿಸಿದ್ದ ಆಟಗಾರರಿಗೆ ವಿಶ್ರಾಂತಿ ನೀಡಿ ಬೆಂಚ್ ಕಾದಿದ್ದ ಆಟಗಾರರನ್ನು ಕಣಕ್ಕಿಳಿಸುವ ಪ್ಲ್ಯಾನಿಂಗ್ನಲ್ಲಿದ್ದಾರೆ ಕೋಚ್ ರಾಹುಲ್ ದ್ರಾವಿಡ್.
ಅದರಂತೆ ಮೊದಲ ಏಕದಿನ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಪೃಥ್ವಿ ಶಾ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದ್ದು, ಅವರ ಬದಲಿಗೆ ಕನ್ನಡಿಗ ದೇವದತ್ ಪಡಿಕ್ಕಲ್ ಅಥವಾ ರುತುರಾಜ್ ಗಾಯಕ್ವಾಡ್ ಅವರನ್ನು ಆರಂಭಿಕರಾಗಿ ಕಣಕ್ಕಿಸಬಹುದು. ಒಂದೆಡೆ ಆರಂಭಿಕರಾಗಿ ನಾಯಕ ಶಿಖರ್ ಧವನ್ ಆಡುವುದು ಬಹುತೇಕ ಖಚಿತ. ಇತ್ತ ಮೊದಲೆರಡು ಪಂದ್ಯಗಳಲ್ಲಿ ಪೃಥ್ವಿ ಶಾ ಕ್ರಮವಾಗಿ 43 ಮತ್ತು 13 ರನ್ ಬಾರಿಸಿದ್ದರು. ಇದೀಗ ಅಂತಿಮ ಏಕದಿನ ಪಂದ್ಯ ನಡೆಯುತ್ತಿರುವುದರಿಂದ ದೇವದತ್ ಪಡಿಕ್ಕಲ್ಗೆ ಅಥವಾ ರುತುರಾಜ್ಗೆ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುವ ಅವಕಾಶ ನೀಡುವ ಸಾಧ್ಯತೆಯಿದೆ.
ಹಾಗೆಯೇ ಮಧ್ಯಮ ಕ್ರಮಾಂಕದಲ್ಲಿ ಮನೀಶ್ ಪಾಂಡೆ ಹಾಗೂ ಹಾರ್ದಿಕ್ ಪಾಂಡ್ಯ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲ. ಹೀಗಾಗಿ ಮುಂದಿನ ಪಂದ್ಯದಲ್ಲೂ ಇವರಿಬ್ಬರನ್ನೇ ಮುಂದುವರೆಸಿ ಫಾರ್ಮ್ಗೆ ಮರಳಲು ಅವಕಾಶ ನೀಡಬಹುದು. ಇನ್ನು ಚೊಚ್ಚಲ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದ ಇಶಾನ್ ಕಿಶನ್ ಸ್ಥಾನದಲ್ಲಿ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವಕಾಶ ಪಡೆಯಬಹುದು. ಇದಲ್ಲದೆ ಸ್ಪಿನ್ ವಿಭಾಗದಲ್ಲಿ ಕುಲ್ದೀಪ್-ಚಹಲ್ ಜೋಡಿಯಲ್ಲಿ ಒಬ್ಬರನ್ನು ಬದಲಿಸಬಹುದು. 2ನೇ ಏಕದಿನ ಪಂದ್ಯದಲ್ಲಿ 10 ಓವರ್ ಬೌಲಿಂಗ್ ಮಾಡಿದ್ದ ಕುಲ್ದೀಪ್ 55 ರನ್ ನೀಡಿದರೂ ಯಾವುದೇ ವಿಕೆಟ್ ಪಡೆಯುವಲ್ಲಿ ಸಫಲರಾಗಿರಲಿಲ್ಲ. ಹೀಗಾಗಿ ಅವರ ಬದಲಿಗೆ ದೀಪಕ್ ಚಹರ್, ವರುಣ್ ಚಕ್ರವರ್ತಿ ಅಥವಾ ಕೃಷ್ಣಪ್ಪ ಗೌತಮ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಸಿಗಬಹುದು.
3ನೇ ಏಕದಿನ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಬಹುದು: ಶಿಖರ್ ಧವನ್ (ನಾಯಕ), ಪೃಥ್ವಿ ಶಾ / ದೇವದತ್ ಪಡಿಕ್ಕಲ್, ಇಶಾನ್ ಕಿಶನ್ / ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಯುಜ್ವೇಂದ್ರ ಚಹಲ್ / ವರುಣ್ ಚಕ್ರವರ್ತಿ
ಇದನ್ನೂ ಓದಿ: Rahul Dravid: ಇಡೀ ಪಂದ್ಯದ ಗತಿ ಬದಲಿಸಿದ ರಾಹುಲ್ ದ್ರಾವಿಡ್ ಅವರ ಆ ಒಂದು ನಿರ್ಧಾರ..!
ಇದನ್ನೂ ಓದಿ: Mary Kom: ಇದು ನಮ್ಮ ಸಂಸ್ಕೃತಿ: ಟೋಕಿಯೋ ಒಲಿಂಪಿಕ್ಸ್ಗೂ ಮುನ್ನ ಎಲ್ಲರ ಹೃದಯ ಗೆದ್ದ ಮೇರಿ ಕೋಮ್
(IND vs SL India Playing XI for 3rd ODI: India likely to rest one opener)
Published On - 8:15 pm, Thu, 22 July 21