Jasprit Bumrah: 5 ವಿಕೆಟ್ ಉರುಳಿಸಿ ವಿಶೇಷ ಸಾಧಕರ ಪಟ್ಟಿಗೆ ಸೇರಿದ ಜಸ್​ಪ್ರೀತ್ ಬುಮ್ರಾ

| Updated By: ಝಾಹಿರ್ ಯೂಸುಫ್

Updated on: Mar 13, 2022 | 6:38 PM

India vs Sri Lanka 2nd Test: ಟೀಮ್ ಇಂಡಿಯಾದ 11 ಬೌಲರುಗಳು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ವಿಕೆಟ್ ಪಡೆದು ಮಿಂಚಿದ್ದರು. ಅವರೆಂದರೆ...

Jasprit Bumrah: 5 ವಿಕೆಟ್ ಉರುಳಿಸಿ ವಿಶೇಷ ಸಾಧಕರ ಪಟ್ಟಿಗೆ ಸೇರಿದ ಜಸ್​ಪ್ರೀತ್ ಬುಮ್ರಾ
Jasprit Bumrah
Follow us on

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ (India vs Sri Lanka 2nd Test) ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ (Jasprit Bumrah) ಮಾರಕ ಬೌಲಿಂಗ್ ಮೂಲಕ ಎದುರಾಳಿಗಳನ್ನು ಕಟ್ಟಿಹಾಕಿದರು. ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ಉರುಳಿಸುವ ಮೂಲಕ ಬುಮ್ರಾ ಶ್ರೀಲಂಕಾ ತಂಡವನ್ನು ಕೇವಲ 109 ರನ್​ಗಳಿಗೆ ಆಲೌಟ್ ಮಾಡಿದರು. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಗೂ ಟೀಮ್ ಇಂಡಿಯಾ ವೇಗಿ ಸೇರ್ಪಡೆಯಾದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ಭಾರತ 12ನೇ ಬೌಲರ್ ಎನಿಸಿಕೊಂಡರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಡೇ-ನೈಟ್ ಟೆಸ್ಟ್ ಪಂದ್ಯಕ್ಕೂ ಮುನ್ನ ಬುಮ್ರಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 295 ವಿಕೆಟ್‌ಗಳನ್ನು ಪಡೆದಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ 120 ವಿಕೆಟ್​, ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 113 ವಿಕೆಟ್​ ಮತ್ತು ಟಿ20ಯಲ್ಲಿ 67 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದೀಗ ಲಂಕಾ ವಿರುದ್ದದ ಪಂದ್ಯದಲ್ಲಿ 10 ಓವರ್​ಗಳಲ್ಲಿ ಕೇವಲ 24 ರನ್​ ನೀಡಿ  5 ವಿಕೆಟ್ ಉರುಳಿಸುವ ಮೂಲಕ ತಮ್ಮ 300 ವಿಕೆಟ್ ಪೂರೈಸಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ 11 ಬೌಲರುಗಳು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ವಿಕೆಟ್ ಪಡೆದು ಮಿಂಚಿದ್ದರು. ಅವರೆಂದರೆ…

1- ಅನಿಲ್ ಕುಂಬ್ಳೆ (956 ವಿಕೆಟ್)

2- ಹರ್ಭಜನ್ ಸಿಂಗ್ (711 ವಿಕೆಟ್)

3- ಕಪಿಲ್ ದೇವ್ (687 ವಿಕೆಟ್)

4- ಅಶ್ವಿನ್ (648* ವಿಕೆಟ್)

5- ಜಹೀರ್ ಖಾನ್ (610 ವಿಕೆಟ್)

6- ಜಾವಗಲ್ ಶ್ರೀನಾಥ್ (551 ವಿಕೆಟ್)

7- ರವೀಂದ್ರ ಜಡೇಜಾ (477* ವಿಕೆಟ್)

8- ಇಶಾಂತ್ ಶರ್ಮಾ (434 ವಿಕೆಟ್)

9- ಮೊಹಮ್ಮದ್ ಶಮಿ (378* ವಿಕೆಟ್)

10- ಅಜಿತ್ ಅಗರ್ಕರ್ (349 ವಿಕೆಟ್)

11- ಇರ್ಫಾನ್ ಪಠಾಣ್ (301 ವಿಕೆಟ್)

ಇದೀಗ 2016 ರಲ್ಲಿ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿದ ಜಸ್​ಪ್ರೀತ್ ಬುಮ್ರಾ 180 ಇನಿಂಗ್ಸ್​ಗಳಿಂದ 300 ವಿಕೆಟ್ ಕಬಳಿಸಿ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಶ್ರೀಲಂಕಾದ ದಂತಕಥೆ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಮುರಳೀಧರನ್ ಒಟ್ಟು 1347 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(IND vs SL: Jasprit Bumrah completed 300 Wickets)