AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ- ಶ್ರೀಲಂಕಾ ಪಂದ್ಯದಲ್ಲಿ ಫುಟ್ಬಾಲ್ ದಂತಕಥೆ ಪೀಲೆ ಅವರಿಗೆ ಶ್ರದ್ಧಾಂಜಲಿ

IND vs SL: ಇತ್ತೀಚೆಗಷ್ಟೇ ನಿಧನರಾದ ಬ್ರೆಜಿಲ್‌ನ ಫುಟ್‌ಬಾಲ್ ದಂತಕಥೆ ಪೀಲೆ ಅವರಿಗೆ ಇಂದು ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲು ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ ತೀರ್ಮಾನಿಸಿದೆ.

IND vs SL: ಭಾರತ- ಶ್ರೀಲಂಕಾ ಪಂದ್ಯದಲ್ಲಿ ಫುಟ್ಬಾಲ್ ದಂತಕಥೆ ಪೀಲೆ ಅವರಿಗೆ ಶ್ರದ್ಧಾಂಜಲಿ
ಫುಟ್ಬಾಲ್ ದಂತಕಥೆ ಪೀಲೆ ಅವರಿಗೆ ಶ್ರದ್ಧಾಂಜಲಿ
TV9 Web
| Updated By: ಪೃಥ್ವಿಶಂಕರ|

Updated on:Jan 12, 2023 | 12:22 PM

Share

ಇತ್ತೀಚೆಗಷ್ಟೇ ನಿಧನರಾದ ಬ್ರೆಜಿಲ್‌ನ ಫುಟ್‌ಬಾಲ್ ದಂತಕಥೆ ಪೀಲೆ (Pele) ಅವರಿಗೆ ಇಂದು ಭಾರತ ಮತ್ತು ಶ್ರೀಲಂಕಾ (India and Sri Lanka) ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲು ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (Cricket Association of Bengal) ತೀರ್ಮಾನಿಸಿದೆ. ಭಾರತ ಲಂಕಾ ನಡುವಿನ ಎರಡನೇ ಏಕದಿನ ಪಂದ್ಯ ಈಡನ್ ಗಾರ್ಡನ್‌ (Eden Gardens) ಮೈದಾನದಲ್ಲಿ ನಡೆಯಲ್ಲಿದ್ದು, ಮೈದಾನದ ಪರದೆಯ ಮೇಲೆ ಪೀಲೆ ಕುರಿತಾದ ವಿಡಿಯೋವನ್ನು ಪ್ರದರ್ಶಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಫುಟ್ಬಾಲ್ ದೈತ್ಯ ಪೀಲೆ ಅವರಿಗೆ ಭಾರತದಲ್ಲಿ, ವಿಶೇಷವಾಗಿ ಕೋಲ್ಕತ್ತಾ ನಗರದಲ್ಲಿ ಗಣನೀಯ ಅಭಿಮಾನಿಗಳನ್ನು ಹೊಂದಿದ್ದಾರೆ. ಹೀಗಾಗಿ ಅಗಲಿದ ಮಹಾನ್ ಪ್ರತಿಭೆಗೆ ಅಂತಿಮ ನಮನ ಸಲ್ಲಿಸಲು ತೀರ್ಮಾನಿಸಲಾಗಿದೆ.

ಲೇಸರ್ ಶೋ

ಅಲ್ಲದೆ ಇನ್ನಿಂಗ್ಸ್ ವಿರಾಮದ ಸಮಯದಲ್ಲಿ ಲೇಸರ್ ಶೋ ಏರ್ಪಡಿಸಲಾಗಿದೆ ಎಂದು CAB ನ ಜಂಟಿ ಕಾರ್ಯದರ್ಶಿ ದೇಬಬ್ರತ ದಾಸ್ ಹೇಳಿದ್ದಾರೆ. ಸರಣಿಯ ಕಾಮೆಂಟರಿ ತಂಡದ ಭಾಗವಾಗಿರುವ ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ ಅವರು ಗಂಟೆ ಬಾರಿಸುವ ಮೂಲಕ ಪಂದ್ಯವನ್ನು ಉದ್ಘಾಟಿಸಲಿದ್ದಾರೆ. ಹೀಗಾಗಿ ನಗರದ ಮೇಯರ್ ಈಗಾಗಲೇ ಈಡನ್‌ನ ಭದ್ರತಾ ಕ್ರಮಗಳನ್ನು ಪರಿಶೀಲಿಸಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರ ಗಣ್ಯರನ್ನು ಆಹ್ವಾನಿಸಲಾಗಿದೆ.

Pele Passes Away: ಕಾಲ್ಚೆಂಡು ಲೋಕದಲ್ಲಿ ಮಹಾರಾಜನಾಗಿ ಮೆರೆದ ಪೀಲೆ: ಫುಟ್ಬಾಲ್ ದೇವರ ದಾಖಲೆಗಳ ಪಟ್ಟಿ ಇಲ್ಲಿದೆ

ಭಾರತಕ್ಕೆ ಮೂರು ಬಾರಿ ಭೇಟಿ ನೀಡಿದ್ದ ಪೀಲೆ

ಮೂರು ಬಾರಿ ವಿಶ್ವಕಪ್ ವಿಜೇತ ಪೀಲೆ ಅವರು ಭಾರತಕ್ಕೆ ಮೂರು ಬಾರಿ ಭೇಟಿ ನೀಡಿದ್ದರು. 1977 ರಲ್ಲಿ ಮೋಹನ್ ಬಗಾನ್ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಆಡುವ ಸಲುವಾಗಿ ಪೀಲೆ ಮೊದಲ ಬಾರಿಗೆ ಭಾರತಕ್ಕೆ ಬಂದಿದ್ದರು. ಈ ಪಂದ್ಯವನ್ನು ವೀಕ್ಷಿಸಲು ಬರೋಬ್ಬರಿ 65,000 ಕ್ಕೂ ಹೆಚ್ಚು ಜನರು ಕ್ರೀಡಾಂಗಣದಲ್ಲಿ ತುಂಬಿದ್ದರು. ಬಳಿಕ ಪೀಲೆ 2015 ಮತ್ತು 2018 ರಲ್ಲಿ ಕಾರ್ಯಕ್ರಮಗಳಿಗೆ ಅತಿಥಿಯಾಗಿ ಭಾರತಕ್ಕೆ ಭೇಟಿ ನೀಡಿದ್ದರು.

ಪಂದ್ಯದ ಟಿಕೆಟ್ ಸೋಲ್ಡ್​ಔಟ್

ಈ ಪಂದ್ಯಕ್ಕೂ ಮುನ್ನ ಮಂಗಳವಾರ ಗುವಾಹಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಶತಕ ಸಿಡಿಸಿ ಏಕದಿನ ಮಾದರಿಯ ಶತಕದ ಬರವನ್ನು ನೀಗಿಸಿಕೊಂಡಿದ್ದರು. ಇದರೊಂದಿಗೆ ಟೀಂ ಇಂಡಿಯಾ ಕೂಡ ಈ ಪಂದ್ಯವನ್ನು ಬೃಹತ್ ಅಂತರದಿಂದ ಗೆದ್ದು ಬೀಗಿತ್ತು. ಈಗ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದೆ. ಆದರೆ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಎರಡನೇ ಏಕದಿನ ಪಂದ್ಯದ ಟಿಕೆಟ್​ಗಳಿಗೆ ಬೇಡಿಕೆಯು ನೀರಸವಾಗಿತ್ತು. ಆದರೆ ಮೊದಲ ಪಂದ್ಯದಲ್ಲಿ ಕೊಹ್ಲಿಯ ಶತಕ ಹಾಗೂ ಟೀಂ ಇಂಡಿಯಾದ ಅದ್ಭುತ ಪ್ರದರ್ಶನದ ಬಳಿಕ ಕೆಲವೇ ಗಂಟೆಗಳಲ್ಲಿ ಪಂದ್ಯದ ಇಡೀ ಟಿಕೆಟ್ ಮಾರಾಟವಾಗಿವೆ ಎಂದು ವರದಿಯಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Thu, 12 January 23

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ