AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಬಾಲ್ ಅಲ್ಲ, ಬುಲೆಟ್; ಉಮ್ರಾನ್ ಬೆಂಕಿ ಚೆಂಡಿಗೆ ಮೀಟರ್ ದೂರ ಹಾರಿದ ಸ್ಟಂಪ್! ವಿಡಿಯೋ ನೋಡಿ

IND vs SL: ಈ ಪಂದ್ಯದಲ್ಲಿ ಉಮ್ರಾನ್ ಮೂರು ಓವರ್‌ಗಳಲ್ಲಿ 31 ರನ್ ನೀಡಿ 2 ವಿಕೆಟ್ ಪಡೆದರು. ಒಟ್ಟಾರೆ ಮೂರು ಪಂದ್ಯಗಳಲ್ಲಿ 7 ವಿಕೆಟ್ ಪಡೆದು ಇಡೀ ಸರಣಿಯಲ್ಲಿ ಅತ್ಯಧಿಕ ವಿಕೆಟ್ ತೆಗೆದ ಬೌಲರ್ ಎನಿಸಿಕೊಂಡರು.

IND vs SL: ಬಾಲ್ ಅಲ್ಲ, ಬುಲೆಟ್; ಉಮ್ರಾನ್ ಬೆಂಕಿ ಚೆಂಡಿಗೆ ಮೀಟರ್ ದೂರ ಹಾರಿದ ಸ್ಟಂಪ್! ವಿಡಿಯೋ ನೋಡಿ
ಉಮ್ರಾನ್ ವೇಗಕ್ಕೆ ಹಾರಿದ ಸ್ಟಂಪ್
TV9 Web
| Edited By: |

Updated on:Jan 08, 2023 | 4:43 PM

Share

ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ (India and Sri Lanka) ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಸೂರ್ಯಕುಮಾರ್ ಯಾದವ್ (Suryakumar Yadav) ಅವರ 112 ರನ್ ಗಳ ಸ್ಫೋಟಕ ಇನ್ನಿಂಗ್ಸ್​ನಿಂದಾಗಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 228 ರನ್‌ಗಳ ಬೃಹತ್ ಟಾರ್ಗೆಟ್ ಸೆಟ್ ಮಾಡಿತು. ಈ ಗುರಿ ಬೆನ್ನತ್ತಿದ ಶ್ರೀಲಂಕಾದ ಇನ್ನಿಂಗ್ಸ್ ಕೇವಲ 137 ರನ್‌ಗಳಿಗೆ ಅಂತ್ಯಗೊಂಡಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅರ್ಷದೀಪ್ ಸಿಂಗ್ ಮೂರು ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ, ಉಮ್ರಾನ್ ಮಲಿಕ್ (Umran Malik) ಮತ್ತು ಯುಜ್ವೇಂದ್ರ ಚಹಾಲ್ ತಲಾ ಎರಡು ವಿಕೆಟ್ ಪಡೆದರು. ಅದರಲ್ಲೂ ಉಮ್ರಾನ್ ಮಲಿಕ್ ಪಡೆದ ಲಂಕಾ ಸ್ಪಿನ್ನರ್ ಮಹೀಶ್ ತೀಕ್ಷಣ ಅವರ ವಿಕೆಟ್ ಮಾತ್ರ ಕ್ರೀಡಾಂಗಣದಲ್ಲಿ ಪ್ರೇಕ್ಷಕರನ್ನು ಒಂದು ಕ್ಷಣ ನಿಬ್ಬೆರಗಾಗುವಂತೆ ಮಾಡಿತು.

ಮೀಟರ್ ದೂರ ಹಾರಿದ ಸ್ಟಂಪ್

ಮೊದಲ ಎರಡು ಟಿ20 ಪಂದ್ಯಗಳಂತೆ ಈ ಪಂದ್ಯದಲ್ಲೂ ಉಮ್ರಾನ್ ಮಲಿಕ್ ಮತ್ತೊಮ್ಮೆ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಎರಡು ಪ್ರಮುಖ ವಿಕೆಟ್ ಪಡೆಯುವ ಮೂಲಕ ಒಟ್ಟಾರೆ ಈ ಸರಣಿಯಲ್ಲಿ 7ವಿಕೆಟ್ ಪಡೆದು, ಅತ್ಯಧಿಕ ವಿಕೆಟ್ ಟೇಕರ್ ಎನಿಸಿಕೊಂಡರು. ಇನ್ನು ಈ ಪಂದ್ಯದಲ್ಲಿ ವನಿಂದು ಹಸರಂಗ ಮತ್ತು ಮಹೀಶ್ ತೀಕ್ಷಣ ವಿಕೆಟ್ ಕಬಳಿಸಿದ ಉಮ್ರಾನ್ ಲಂಕಾ ತಂಡವನ್ನು ಸಂಪೂರ್ಣವಾಗಿ ಪಂದ್ಯದಿಂದ ಹೊರಹಾಕಿದರು. ಅದರಲ್ಲೂ 146 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿ, ಮಹೀಶ್ ತೀಕ್ಷಣ ಅವರನ್ನು ಉಮ್ರಾನ್ ಕ್ಲೀನ್ ಬೌಲ್ಡ್ ಮಾಡಿದ್ದು ಮಾತ್ರ ಇಡಿ ಪಂದ್ಯದ ಹೈಲೆಟ್ ಆಗಿತ್ತು. ಉಮ್ರಾನ್ ಅವರ ಆ ಚೆಂಡಿನ ವೇಗಕ್ಕೆ ಸಿಲುಕಿದ ಸ್ಟಂಪ್ ಮೀಟರ್ ದೂರ ಹಾರಿ ಬಿತ್ತು. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

155 ಕಿ.ಮೀ ವೇಗಕ್ಕೆ ಲಂಕಾ ನಾಯಕ ಶಾಕ್

ಈ ಪಂದ್ಯದಲ್ಲಿ ಉಮ್ರಾನ್ ಮೂರು ಓವರ್‌ಗಳಲ್ಲಿ 31 ರನ್ ನೀಡಿ 2 ವಿಕೆಟ್ ಪಡೆದರು. ಒಟ್ಟಾರೆ ಮೂರು ಪಂದ್ಯಗಳಲ್ಲಿ 7 ವಿಕೆಟ್ ಪಡೆದರು. ಅದರಲ್ಲೂ ಸರಣಿಯ ಮೊದಲ ಪಂದ್ಯದಲ್ಲಿ 155 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದ ಉಮ್ರಾನ್, ಶ್ರೀಲಂಕಾ ನಾಯಕ ದಸುನ್ ಶನಕ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದರೊಂದಿಗೆ ಟೀಂ ಇಂಡಿಯಾ ವೇಗಿ ಒಬ್ಬ ಎಸೆದ ಅತ್ಯಂತ ವೇಗದ ಎಸೆತ ಎಂಬ ದಾಖಲೆಯನ್ನೂ ಉಮ್ರಾನ್ ಬರೆದಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:43 pm, Sun, 8 January 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ