IND vs SL: ಮೊಹಾಲಿ ಟೆಸ್ಟ್‌ನಲ್ಲಿ ಅಶ್ವಿನ್ ಆಡ್ತಾರಾ?: ಬುಮ್ರಾ ಹೇಳಿದ್ದೇನು?

IND vs SL: ಅಶ್ವಿನ್ ಹೊರತುಪಡಿಸಿ, ಸರಣಿಗೆ ಆಯ್ಕೆಯಾಗಿರುವ ಟೀಮ್ ಇಂಡಿಯಾದ ಉಳಿದ ಎಲ್ಲಾ ಆಟಗಾರರು ಸದ್ಯಕ್ಕೆ ಸಂಪೂರ್ಣ ಫಿಟ್ ಆಗಿದ್ದಾರೆ.

IND vs SL: ಮೊಹಾಲಿ ಟೆಸ್ಟ್‌ನಲ್ಲಿ ಅಶ್ವಿನ್ ಆಡ್ತಾರಾ?: ಬುಮ್ರಾ ಹೇಳಿದ್ದೇನು?
Jasprit Bumrah-Ashwin
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 01, 2022 | 7:12 PM

ಶ್ರೀಲಂಕಾ ವಿರುದ್ದದ ಏಕದಿನ ಹಾಗೂ ಟಿ20 ಸರಣಿಯಲ್ಲಿ ತನ್ನ ಕೀರ್ತಿ ಪತಾಕೆಯನ್ನು ಹಾರಿಸಿರುವ ಟೀಮ್ ಇಂಡಿಯಾ ಟೆಸ್ಟ್​ ಸರಣಿಗಾಗಿ ಸಜ್ಜಾಗುತ್ತಿದೆ. ಈ ಸರಣಿಗಾಗಿ ಈಗಾಗಲೇ ಟೀಮ್ ಇಂಡಿಯಾದ ಕೆಲ ಆಟಗಾರರು ಮೊಹಾಲಿಯಲ್ಲಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಮಾರ್ಚ್​ 4 ರಿಂದ ಶುರುವಾಗಲಿರುವ ಈ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಆಟಗಾರರ ಗಾಯದ ಚಿಂತೆ ಎದುರಾಗಿದೆ. ಏಕೆಂದರೆ ತಂಡದ ಪ್ರಮುಖ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಗಾಯದ ಕಾರಣದಿಂದ ಸರಣಿಯಿಂದ ಹೊರಗುಳಿದಿದ್ದಾರೆ. ಹಾಗೆಯೇ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಕೂಡ ಫಿಟ್‌ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಾಗ್ಯೂ ಮೊದಲ ಪಂದ್ಯದ ವೇಳೆಗೆ ಅಶ್ವಿನ್ ಫಿಟ್ ಆಗಲಿದ್ದಾರೆ ಎಂದು ತಿಳಿಸಿದ್ದಾರೆ ಟೀಮ್ ಇಂಡಿಯಾದ ಉಪನಾಯಕ ಜಸ್​ಪ್ರೀತ್ ಬುಮ್ರಾ.

ಭಾರತದ ಅತ್ಯುತ್ತಮ ಮತ್ತು ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರಾದ ರವಿಚಂದ್ರನ್ ಅಶ್ವಿನ್ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಮ್ ಇಂಡಿಯಾದೊಂದಿಗೆ ಇದ್ದರು. ಅಲ್ಲಿ ಟೆಸ್ಟ್ ಮತ್ತು ODI ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಆಡಿದ್ದರು. ಆದಾಗ್ಯೂ, ಅವರು ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ನಂತರ ಗಾಯಗೊಂಡರು. ಆ ಬಳಿಕ ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ವಿರುದ್ಧದ ODI-T20 ಸರಣಿಯಲ್ಲಿ ವಿಶ್ರಾಂತಿ ಪಡೆದರು. ಇದರೊಂದಿಗೆ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ತಂಡದಲ್ಲಿ ಅವರನ್ನು ಸೇರಿಸಿಕೊಂಡರೂ ಫಿಟ್ನೆಸ್ ಆಧಾರದ ಮೇಲೆ ಮಾತ್ರ ಆಡುವ ಇಲೆವೆನ್ ನಲ್ಲಿ ಸ್ಥಾನ ಪಡೆಯುವುದನ್ನೂ ನಿರ್ಧರಿಸಲಾಗಿದೆ.

ಇದೀಗ ಟೀಮ್ ಇಂಡಿಯಾ ಹಾಗೂ ನಾಯಕ ರೋಹಿತ್ ಶರ್ಮಾಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಮಂಗಳವಾರ ಟೀಮ್ ಇಂಡಿಯಾದ ಪ್ರಸ್ತುತ ಉಪನಾಯಕ ಜಸ್ಪ್ರೀತ್ ಬುಮ್ರಾ ಅವರು ಅಶ್ವಿನ್ ಅವರ ಫಿಟ್ನೆಸ್ ಕುರಿತ ಪ್ರಶ್ನೆಗೆ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. “ಅಶ್ವಿನ್ ಚೆನ್ನಾಗಿಯೇ ಇದ್ದಾರೆ. ಯಾವುದೇ ತೊಂದರೆಗಳು ಕಾಣಿಸುತ್ತಿಲ್ಲ. ಇಂದು ತರಬೇತಿಯಲ್ಲಿ ಎಲ್ಲವನ್ನೂ ಮಾಡಿದರು. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಚೆನ್ನಾಗಿ ಮಾಡಿದ್ದಾರೆ. ಹೆಚ್ಚಿನ ತೊಂದರೆ ಆಗುವುದಿಲ್ಲ ಎಂದು ಭಾವಿಸುತ್ತೇವೆ. ” ಎಂದು ತಿಳಿಸಿದ್ದಾರೆ. ಈ ಮೂಲಕ ಮೊಹಾಲಿ ಟೆಸ್ಟ್​ಗೆ ಅಶ್ವಿನ್ ಲಭ್ಯರಿರುವುದು ಬಹುತೇಕ ಖಚಿತವಾಗಿದೆ.

ಅಶ್ವಿನ್ ಇಲ್ಲದಿದ್ದರೆ ಯಾರಿಗೆ ಅವಕಾಶ? ಅಶ್ವಿನ್ ಹೊರತುಪಡಿಸಿ, ಸರಣಿಗೆ ಆಯ್ಕೆಯಾಗಿರುವ ಟೀಮ್ ಇಂಡಿಯಾದ ಉಳಿದ ಎಲ್ಲಾ ಆಟಗಾರರು ಸದ್ಯಕ್ಕೆ ಸಂಪೂರ್ಣ ಫಿಟ್ ಆಗಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 430 ವಿಕೆಟ್ ಪಡೆದಿರುವ ಅಶ್ವಿನ್ ಮೊದಲ ಟೆಸ್ಟ್‌ಗೆ ಫಿಟ್ ಆಗದಿದ್ದರೆ, ಕಳೆದ ವರ್ಷ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮುಂಬೈ ಟೆಸ್ಟ್‌ನಲ್ಲಿ ಭಾಗವಹಿಸಿದ್ದ ಆಫ್ ಸ್ಪಿನ್ನರ್ ಜಯಂತ್ ಯಾದವ್​ಗೆ ಅವಕಾಶ ಸಿಗಬಹುದು.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(IND vs SL: R Ashwin looked good in Training, Should be okay for 1st Test, says Jasprit Bumrah’)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ