IND vs SL: ಟೀಂ ಇಂಡಿಯಾದಿಂದ ರಿಷಬ್ ಪಂತ್ ಹೊರಬಿದ್ದಿದ್ಯಾಕೆ? ಇಲ್ಲಿದೆ ಶಾಕಿಂಗ್ ನ್ಯೂಸ್

Rishabh Pant: ಟೀಂ ಇಂಡಿಯಾ ಆಯ್ಕೆಗೆ ಸಂಬಂಧಿಸಿದಂತೆ ಬಿಸಿಸಿಐ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದೆಯೇ ಅಥವಾ ಅವರನ್ನು ತಂಡದಿಂದ ಕೈಬಿಡಲಾಗಿದೆಯೇ ಎಂಬುದನ್ನು ಸ್ಪಷ್ಟವಾಗಿ ತಿಳಿಸಿಲ್ಲ.

IND vs SL: ಟೀಂ ಇಂಡಿಯಾದಿಂದ ರಿಷಬ್ ಪಂತ್ ಹೊರಬಿದ್ದಿದ್ಯಾಕೆ? ಇಲ್ಲಿದೆ ಶಾಕಿಂಗ್ ನ್ಯೂಸ್
ರಿಷಬ್ ಪಂತ್
Follow us
TV9 Web
| Updated By: ಪೃಥ್ವಿಶಂಕರ

Updated on:Dec 28, 2022 | 10:30 AM

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಂಗಳವಾರ ತಡರಾತ್ರಿ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಗೆ ತಂಡಗಳನ್ನು (India vs Srilanka) ಪ್ರಕಟಿಸಿದೆ. ಆದರೆ ಈ ಎರಡೂ ತಂಡಗಳಲ್ಲಿ ಯುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್ (Rishabh Pant) ಹೆಸರಿಲ್ಲದೆ ಇರುವುದು ಎಲ್ಲರಲ್ಲೂ ಅಚ್ಚರಿ ಹುಟ್ಟಿಸಿದೆ. ತಂಡಕ್ಕೆ ಪಂತ್ ಆಯ್ಕೆಯಾಗದಿದ್ದಾಗ, ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಅವರನ್ನು ತಂಡದಿಂದ ಹೊರಹಾಕಲಾಗಿದೆ ಎಂದು ಊಹಿಸಲಾಗಿತ್ತು. ಆದರೆ ಇದೀಗ ಬಂದಿರುವ ಮಾಹಿತಿ ಪ್ರಕಾರ ಪಂತ್​ಗೆ ಇಂಜುರಿಯಾಗಿದ್ದು, ಹೀಗಾಗಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ ಹೆಚ್ಚಿನ ಚಿಕಿತ್ಸೆಗಾಗಿ ಪಂತ್ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಕಳುಹಿಸಿಕೊಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಮಾಹಿತಿ ನೀಡಿದೆ.

ಪಂತ್​ ಮೊಣಕಾಲಿನ ಇಂಜುರಿಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಎರಡು ವಾರಗಳ ಪುನರ್ವಸತಿಗಾಗಿ ಎನ್‌ಸಿಎಗೆ ಹೋಗಲು ಆದೇಶಿಸಲಾಗಿದೆ. ಹೀಗಾಗಿ ಅವರು ಶ್ರೀಲಂಕಾ ಸರಣಿಯಲ್ಲಿ ಆಡುತ್ತಿಲ್ಲ ಎಂದು ಪಿಟಿಐ ತನ್ನ ವರದಿಯಲ್ಲಿ ತಿಳಿಸಿದೆ.

ಮೌನ ವಹಿಸಿದ ಬಿಸಿಸಿಐ

ಟೀಂ ಇಂಡಿಯಾ ಆಯ್ಕೆಗೆ ಸಂಬಂಧಿಸಿದಂತೆ ಬಿಸಿಸಿಐ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದೆಯೇ ಅಥವಾ ಅವರನ್ನು ತಂಡದಿಂದ ಕೈಬಿಡಲಾಗಿದೆಯೇ ಎಂಬುದನ್ನು ಸ್ಪಷ್ಟವಾಗಿ ತಿಳಿಸಿಲ್ಲ. ಆದರೆ ಸೀಮಿತ ಓವರ್‌ಗಳಲ್ಲಿ ಪಂತ್ ನಿರಂತರವಾಗಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವುದರಿಂದ ಅವರಿಗೆ ಕೆಲವು ದಿನಗಳವರೆಗೆ ವಿರಾಮ ನೀಡಲಾಗಿದೆ ಎಂದು ಊಹಿಸಲಾಗಿದೆ. ಆದಾಗ್ಯೂ, ಪರಿಸ್ಥಿತಿ ಇನ್ನೂ ಸ್ಪಷ್ಟವಾಗಿಲ್ಲ ಏಕೆಂದರೆ ಬಿಸಿಸಿ ಪಂತ್ ಗಾಯದ ಬಗ್ಗೆ ಯಾವುದೆ ಮಾಹಿತಿ ನೀಡಿಲ್ಲ. ಹೀಗಾಗಿ ಪಂತ್​ರನ್ನು ಬೇಕಂತಲೇ ತಂಡದಿಂದ ಹೊರಗಿಡಲಾಗಿದೆಯೇ ಅಥವಾ ನಿಜವಾಗಿಯೂ ಇಂಜುರಿಗೊಂಡಿದ್ದಾರಾ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

IND vs BAN: 4000 ರನ್; ಸಿಕ್ಸರ್​ಗಳ ಅರ್ಧಶತಕ ಪೂರೈಸಿದ ರಿಷಬ್ ಪಂತ್..!

ಟೆಸ್ಟ್​ನಲ್ಲಿ ಉತ್ತಮ ಪ್ರದರ್ಶನ

ವೈಟ್​ ಬಾಲ್​ ಕ್ರಿಕೆಟ್​ನಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಪಂತ್ ಟೆಸ್ಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಬಾಂಗ್ಲಾದೇಶ ಪ್ರವಾಸದ ಟೆಸ್ಟ್ ಸರಣಿಯಲ್ಲಿ ಪಂತ್ ಉತ್ತಮ ಪ್ರದರ್ಶನ ನೀಡಿದ್ದರು. ಅದರಲ್ಲೂ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 93 ರನ್ ಗಳಿಸಿ ಮಿಂಚಿದ್ದರು. ಅಲ್ಲದೆ ಇಂಗ್ಲೆಂಡ್, ಆಸ್ಟ್ರೇಲಿಯಾದಲ್ಲಿಯೂ ಪಂತ್ ಅದ್ಭುತ ಪ್ರದರ್ಶನ ನೀಡಿದ್ದರು.

ಟೆಸ್ಟ್‌ನಲ್ಲಿ ಅವರ ಅಂಕಿಅಂಶಗಳನ್ನು ನೋಡಿದರೆ, ಪಂತ್ ಇದುವರೆಗೆ ಆಡಿರುವ 33 ಟೆಸ್ಟ್ ಪಂದ್ಯಗಳಲ್ಲಿ 43.67 ರ ಸರಾಸರಿಯಲ್ಲಿ 2271 ರನ್ ಗಳಿಸಿದ್ದಾರೆ. ಇದರಲ್ಲಿ ಐದು ಶತಕ ಮತ್ತು 11 ಅರ್ಧ ಶತಕಗಳು ಸೇರಿವೆ.ಹಾಗೆಯೇ ಏಕದಿನ ಮಾದರಿಯಲ್ಲಿ 34.60 ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ಪಂತ್, ಟಿ20ಯಲ್ಲಿ 22.43 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ. ಸೀಮಿತ ಓವರ್‌ಗಳಲ್ಲಿ ಸತತವಾಗಿ ನಿರಾಸೆ ಮೂಡಿಸುತ್ತಿರುವ ಪಂತ್, ಗಾಯದಿಂದ ಚೇತರಿಸಿಕೊಂಡ ಬಳಿಕ ಏಕದಿನ ಹಾಗೂ ಟಿ20ಯಲ್ಲಿ ಮತ್ತೆ ಸ್ಥಾನ ಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Wed, 28 December 22

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?