IND vs SL: ಫಾರ್ಮ್​ನಲ್ಲಿರುವ ಸಂಜು ಸ್ಯಾಮ್ಸನ್​ ಏಕದಿನ ತಂಡದಿಂದ ಹೊರಬಿದ್ದಿದ್ಯಾಕೆ? ಇಲ್ಲಿದೆ ಕಾರಣ

| Updated By: ಪೃಥ್ವಿಶಂಕರ

Updated on: Dec 28, 2022 | 1:43 PM

IND vs SL: 2022ರಲ್ಲಿ ಒಟ್ಟು 10 ಏಕದಿನ ಪಂದ್ಯಗಳನ್ನಾಡಿರುವ ಸಂಜು ಸ್ಯಾಮ್ಸನ್, 71 ರ ಸರಾಸರಿಯಲ್ಲಿ 284 ರನ್ ಗಳಿಸಿದ್ದಾರೆ. ಅದರಲ್ಲೂ 100ಕ್ಕೂ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ ಸಂಜು ಬ್ಯಾಟ್ ಬೀಸಿರುವುದು ಇಲ್ಲಿ ವಿಶೇಷ.

IND vs SL: ಫಾರ್ಮ್​ನಲ್ಲಿರುವ ಸಂಜು ಸ್ಯಾಮ್ಸನ್​ ಏಕದಿನ ತಂಡದಿಂದ ಹೊರಬಿದ್ದಿದ್ಯಾಕೆ? ಇಲ್ಲಿದೆ ಕಾರಣ
ಚಹಾಲ್, ಸಂಜು ಸ್ಯಾಮ್ಸನ್
Follow us on

ಶ್ರೀಲಂಕಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು (India vs Srilanka)  ಪ್ರಕಟಿಸಲಾಗಿದೆ. ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ತಂಡದ ನಾಯಕತ್ವವಹಿಸಿಕೊಂಡರೆ, ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ (Rohit Sharma) ತಂಡವನ್ನು ಮುನ್ನಡೆಸಲಿದ್ದಾರೆ. ಟಿ20 ಸರಣಿಗೆ ಆಯ್ಕೆಯಾಗಿರುವ ತಂಡದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಇದರಲ್ಲಿ ವಿಕೆಟ್​ ಕೀಪರ್ ಬ್ಯಾಟ್ಸ್​ಮನ್ ಸಂಜು ಸ್ಯಾಮ್ಸನ್ (Sanju Samson) ಕೂಡ ಸೇರಿದ್ದಾರೆ. ಆದರೆ ಟಿ20ಯಲ್ಲಿ ಸಂಜುಗೆ ಅವಕಾಶ ನೀಡಿರುವ ಬಿಸಿಸಿಐ ಏಕದಿನ ತಂಡದಿಂದ ಅವರನ್ನು ಕೈಬಿಟ್ಟಿದೆ. ಹೀಗಾಗಿ ಟೀಂ ಇಂಡಿಯಾ (Team India) ಅಭಿಮಾನಿಗಳು ಬಿಸಿಸಿಐ ನಡೆ ವಿರುದ್ಧ ಗರಂ ಆಗಿದ್ದಾರೆ. ಅಲ್ಲದೆ ಉತ್ತಮ ಪ್ರದಾರ್ಶನದ ಹೊರತಾಗಿಯೂ ಸಂಜುರನ್ನು ತಂಡದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ ಹೊರಹಾಕುತ್ತಿದ್ದಾರೆ. ಆದರೆ ಸಂಜು ಸ್ಯಾಮ್ಸನ್ ಏಕದಿನ ತಂಡದಿಂದ ಹೊರಗುಳಿಯಲು ಬೇರೆ ಕಾರಣವೇ ಇದೆ ಎಂದು ಹೇಳಲಾಗುತ್ತಿದೆ.

2022 ರಲ್ಲಿ ಏಕದಿನ ಮಾದರಿಯಲ್ಲಿ ಸಂಜು ಸ್ಯಾಮ್ಸನ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ ಇದರ ಹೊರತಾಗಿಯೂ ಅವರು ತಂಡದಿಂದ ಹೊರಗುಳಿದಿದ್ದಾರೆ. ವಾಸ್ತವವಾಗಿ ಇದಕ್ಕೆ ಕಾರಣವೇ ಬೇರೆ ಇದೆ ಎಂದು ಹೇಳಲಾಗುತ್ತಿದೆ. ಈಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಸಂಜು ಸ್ಯಾಮ್ಸನ್ ಶೀಘ್ರದಲ್ಲೇ ತಂದೆಯಾಗಲಿದ್ದಾರೆ ಹೀಗಾಗಿ ಅವರು ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕ್ರಿಸ್‌ಮಸ್ ಸಂದರ್ಭದಲ್ಲಿ ಸಂಜು ಸ್ಯಾಮ್ಸನ್ ತಮ್ಮ ಪತ್ನಿ ಜೊತೆಗಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ  ಶೇರ್ ಮಾಡಿದ್ದರು. ಅದರಲ್ಲಿ ‘ನಮಗೆ ಈಗಾಗಲೇ ಸಿಕ್ಕಿರುವ ಆರ್ಶೀವಾದವನ್ನು ಅರಿತುಕೊಳ್ಳುವುದೇ ಕ್ರಿಸ್​ಮಸ್​ನ ಬಹುದೊಡ್ಡ ಉಡುಗೊರೆ’ ಎಂದು ಬರೆದುಕೊಂಡಿದ್ದರು. ಹೀಗಾಗಿ ಇದೇ ಕಾರಣಕ್ಕೆ ಸ್ಯಾಮ್ಸನ್ ಟಿ20 ಸರಣಿ ಆಡಿದ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಏಕದಿನ ಮಾದರಿಯಲ್ಲಿ ಸಂಜು ಶೈನ್

2022ರಲ್ಲಿ ಒಟ್ಟು 10 ಏಕದಿನ ಪಂದ್ಯಗಳನ್ನಾಡಿರುವ ಸಂಜು ಸ್ಯಾಮ್ಸನ್, 71 ರ ಸರಾಸರಿಯಲ್ಲಿ 284 ರನ್ ಗಳಿಸಿದ್ದಾರೆ. ಅದರಲ್ಲೂ 100ಕ್ಕೂ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ ಸಂಜು ಬ್ಯಾಟ್ ಬೀಸಿರುವುದು ಇಲ್ಲಿ ವಿಶೇಷ. ಅಲ್ಲದೆ ಉತ್ತಮ ಫಾರ್ಮ್​ನಲ್ಲಿರುವ ಸಂಜು ಸ್ಯಾಮ್ಸನ್​ಗೆ ಏಕದಿನ ತಂಡದಲ್ಲಿ ಫಿನಿಶರ್ ಪಾತ್ರವನ್ನು ಸಹ ನೀಡಲಾಗಿದೆ. ಇದೀಗ ಮುಂದಿನ ವರ್ಷ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಸಂಜುಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು ಖಚಿತ ಎಂತಲೇ ಹೇಳಲಾಗುತ್ತಿದೆ.

IND vs SL: ಟೀಂ ಇಂಡಿಯಾದಿಂದ ರಿಷಬ್ ಪಂತ್ ಹೊರಬಿದ್ದಿದ್ಯಾಕೆ? ಇಲ್ಲಿದೆ ಶಾಕಿಂಗ್ ನ್ಯೂಸ್

ಪಂತ್ ಔಟ್, ಇಶಾನ್ ಪ್ರಬಲ ಸ್ಪರ್ಧಿ

ಆದರೆ ಸಂಜು ಸ್ಯಾಮ್ಸನ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಅಷ್ಟು ಸುಲಭವಲ್ಲ. ಏಕೆಂದರೆ ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ದ್ವಿಶತಕ ಸಿಡಿಸಿದ ಇಶಾನ್ ಕಿಶನ್, ಸಂಜುಗೆ ಪೈಪೋಟಿ ನೀಡಲಿದ್ದಾರೆ. ಬ್ಯಾಟಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಕಿಶನ್, ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಆಗಿರುವುದರಿಂದ ವಿಶ್ವಕಪ್​ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅಂದಹಾಗೆ, ರಿಷಬ್ ಪಂತ್ ಅವರನ್ನು ಏಕದಿನ ಮತ್ತು ಟಿ20 ತಂಡದಿಂದ ಹೊರಗಿಡಲಾಗಿದೆ. ಪಂತ್ ಸದ್ಯ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದು, ಸದ್ಯದ ಅವರ ಪ್ರದರ್ಶನವನ್ನು ಗಮನಿಸಿದರೆ ಅವರು ಬಹುಶಃ ವೈಟ್ ಬಾಲ್ ಕ್ರಿಕೆಟ್​ಗೆ ಮರಳುವುದು ಅಷ್ಟು ಸುಲಭವಲ್ಲ. ಅಂತಹ ಪರಿಸ್ಥಿತಿಯಲ್ಲಿ, ಸ್ಯಾಮ್ಸನ್‌ ಸಿಗುವ ಅವಕಾಶಗಳಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾಗಿದೆ. ಹೀಗಾದಾಗ ಮಾತ್ರ ಸಂಜು ಸ್ಯಾಮ್ಸನ್​ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:40 pm, Wed, 28 December 22