ಪ್ರಸ್ತುತ ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆತಿಥೇಯರ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಈಗಾಗಲೇ ಆಡಿರುವ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ. ಈ ಸರಣಿಯ ಕೊನೆಯ ಪಂದ್ಯ ಮಂಗಳವಾರ ಅಂದರೆ ಇಂದು ನಡೆಯುತ್ತಿದೆ. ಈ ಪಂದ್ಯದೊಂದಿಗೆ ಟಿ20 ಸರಣಿಗೆ ತೆರೆ ಬೀಳಲಿದೆ. ಆ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಆಗಸ್ಟ್ 2 ರಿಂದ ಆರಂಭವಾಗಿರುವ ಏಕದಿನ ಸರಣಿಗೆ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂ ಆತಿಥ್ಯವಹಿಸುತ್ತಿದೆ. ಈ ಸರಣಿಗೆ ಈಗಾಗಲೇ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಇದೀಗ ಆತಿಥೇಯ ಶ್ರೀಲಂಕಾ ಕೂಡ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಇದರ ಜೊತೆಗೆ ನೂತನ ನಾಯಕನಾಗಿ ಚರಿತ ಅಸಲಂಕಾ ಅವರನ್ನು ಆಯ್ಕೆ ಮಾಡಿದೆ.
ಶ್ರೀಲಂಕಾದಲ್ಲಿ ಟಿ20 ತಂಡದೊಂದಿಗೆ ಏಕದಿನ ತಂಡಕ್ಕೂ ನಾಯಕನ ಬದಲಾವಣೆಯಾಗಿದೆ. ವನಿಂದು ಹಸರಂಗ ರಾಜೀನಾಮೆಯಿಂದ ತೆರವಾದ ಟಿ20 ತಂಡದ ನಾಯಕತ್ವಕ್ಕೆ ಚರಿತ್ ಅಸಲಂಕಾ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಏಕದಿನ ತಂಡದ ನಾಯಕತ್ವವಹಿಸಿಕೊಂಡಿದ್ದ ಕುಸಾಲ್ ಮೆಂಡಿಸ್ ಅವರನ್ನು ನಾಯಕತ್ವದಿಂದ ವಜಾಗೊಳಿಸಿದ್ದು, ಚರಿತ್ ಅಸಲಂಕಾಗೆ ಏಕದಿನದ ನಾಯಕತ್ವವನ್ನೂ ನೀಡಲಾಗಿದೆ. ಇದರರ್ಥ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಶ್ರೀಲಂಕಾ ತಂಡದ ನಾಯಕನಾಗಿ ಚರಿತ್ ಅಸಲಂಕಾ ಕಾಣಿಸಿಕೊಳ್ಳಲಿದ್ದಾರೆ.
📢 Sri Lanka ODI squad for India Series 📢 #SLvIND pic.twitter.com/FRVzXGyOoW
— Sri Lanka Cricket 🇱🇰 (@OfficialSLC) July 30, 2024
ಏಕದಿನ ಸರಣಿಗೆ ಶ್ರೀಲಂಕಾ ತಂಡ: ಚರಿತ್ ಅಸಲಂಕಾ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಾಲ್ ಮೆಂಡಿಸ್, ಸದಿರ ಸಮರವಿಕ್ರಮ, ಕಮಿಂದು ಮೆಂಡಿಸ್, ಜೆನಿತ್ ಲಿಯಾಂಗೆ, ನಿಶಾನ್ ಮದುಶಂಕ, ವನಿಂದು ಹಸರಂಗ, ದುನಿತ್ ವೆಲ್ಲಲಗೆ, ಚಾಮಿಕ ಕರುಣಾರತ್ನ, ಮಹೇಶ್ ತೀಕ್ಷಣ, ಅಕಿಲ ದನಂಜಯ, ದಿಲ್ಶಾನ್ ಮಧುಶಂಕ, ಮಥೀಶ ಪತಿರಾನ, ಅಸಿತ ಫೆರ್ನಾಂಡೋ.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.
ಭಾರತ ಮತ್ತು ಶ್ರೀಲಂಕಾ ನಡುವಿನ ಈ 3 ಪಂದ್ಯಗಳ ಸರಣಿಯು ಆಗಸ್ಟ್ 2 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 7 ರವರೆಗೆ ಮುಂದುವರೆಯಲಿದೆ. ಸರಣಿಯ ಎಲ್ಲಾ ಮೂರು ಪಂದ್ಯಗಳು ಕೊಲಂಬೊದ ಪ್ರಸಿದ್ಧ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿವೆ. ಕಳೆದ ವರ್ಷ ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಉಭಯ ತಂಡಗಳ ನಡುವಿನ ಮೊದಲ ಹಣಾಹಣಿ ಇದಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:27 pm, Tue, 30 July 24