IND vs SL: ಶ್ರೀಲಂಕಾ ವಿರುದ್ದದ ಸರಣಿಯಿಂದ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಔಟ್..!

| Updated By: ಝಾಹಿರ್ ಯೂಸುಫ್

Updated on: Feb 23, 2022 | 2:30 PM

IND vs SL: ಈ ಸರಣಿಯಿಂದ ವಿಶ್ರಾಂತಿಯ ಕಾರಣ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಹೊರಗುಳಿದಿದ್ದಾರೆ. ಹಾಗೆಯೇ ಗಾಯದಿಂದ ಬಳಲುತ್ತಿರುವ ಕೆಎಲ್ ರಾಹುಲ್ ಕೂಡ ಸರಣಿಗೆ ಅಲಭ್ಯರಾಗಿದ್ದಾರೆ.

IND vs SL: ಶ್ರೀಲಂಕಾ ವಿರುದ್ದದ ಸರಣಿಯಿಂದ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಔಟ್..!
Team India
Follow us on

ಶ್ರೀಲಂಕಾ ವಿರುದ್ಧದ (India vs Sri Lanka) ಟಿ20 ಸರಣಿಯಿಂದ ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ. ಈ ಮೊದಲು ಗಾಯದ ಕಾರಣ ದೀಪಕ್ ಚಹರ್ ಸರಣಿಯಿಂದ ಹೊರಬಿದ್ದಿದ್ದರು. ಇದೀಗ ಸರಣಿ ಆರಂಭಕ್ಕೆ ದಿನ ಮಾತ್ರ ಉಳಿದಿರುವಾಗ ಸೂರ್ಯಕುಮಾರ್ ಯಾದವ್ ಕೂಡ ಸರಣಿಗೆ ಅಲಭ್ಯರಾಗಿದ್ದಾರೆ. ಭಾನುವಾರ ಕೋಲ್ಕತ್ತಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ T20I ಪಂದ್ಯದ ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಮೂಳೆ ಮುರಿತಕ್ಕೆ ಒಳಗಾಗಿದ್ದರು. ಮತ್ತೊಂದೆಡೆ ಬೌಲಿಂಗ್ ಸಮಯದಲ್ಲಿ ದೀಪಕ್ ಚಹರ್ ಉಳುಕಿನ ಸಮಸ್ಯೆ ಎದುರಿಸಿದ್ದರು. ಹೀಗಾಗಿ ಈ ಇಬ್ಬರು ಆಟಗಾರರು ಶ್ರೀಲಂಕಾ ವಿರುದ್ದದ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಭರ್ಜರಿ ಫಾರ್ಮ್​ನಲ್ಲಿದ್ದ ಸೂರ್ಯಕುಮಾರ್ ಯಾದವ್ ಗಾಯಗೊಂಡಿರುವುದು ಇದೀಗ ಟೀಮ್ ಇಂಡಿಯಾ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ಇದೀಗ ಲಂಕಾ ಸರಣಿಯಿಂದ ಹೊರಗುಳಿದಿರುವ ಕಾರಣ ಬದಲಿ ಆಟಗಾರ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಇನ್ನು ಈ ಸರಣಿಯಿಂದ ವಿಶ್ರಾಂತಿಯ ಕಾರಣ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಹೊರಗುಳಿದಿದ್ದಾರೆ. ಹಾಗೆಯೇ ಗಾಯದಿಂದ ಬಳಲುತ್ತಿರುವ ಕೆಎಲ್ ರಾಹುಲ್ ಕೂಡ ಸರಣಿಗೆ ಅಲಭ್ಯರಾಗಿದ್ದಾರೆ. ಇದೀಗ ಸೂರ್ಯಕುಮಾರ್ ಯಾದವ್ ಹಾಗೂ ದೀಪಕ್ ಚಹರ್ ಹೊರಬಿದ್ದಿದ್ದಾರೆ. ಹೀಗಾಗಿ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ದ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡಲಿದೆ ಕಾದು ನೋಡಬೇಕಿದೆ.

ಟಿ20 ಸರಣಿಗೆ ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ಯುಜುವೇಂದ್ರ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್

ಭಾರತ vs ಶ್ರೀಲಂಕಾ ಟಿ20 ಸರಣಿ ವೇಳಾಪಟ್ಟಿ:

ಫೆಬ್ರವರಿ 24 – ಮೊದಲ ಟಿ20, ಲಕ್ನೋ

ಫೆ. 26 – 2ನೇ ಟಿ20, ಧರ್ಮಶಾಲಾ

ಫೆ.27 – 3ನೇ ಟಿ20, ಧರ್ಮಶಾಲಾ

ಭಾರತ vs ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ:

ಮಾರ್ಚ್ 4-8 – ಮೊದಲ ಟೆಸ್ಟ್, ಮೊಹಾಲಿ

ಮಾರ್ಚ್ 12-16 – 2ನೇ ಟೆಸ್ಟ್, ಬೆಂಗಳೂರು (ಹಗಲು-ರಾತ್ರಿ)

ಇದನ್ನೂ ಓದಿ: World Record: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಯುವ ಬ್ಯಾಟ್ಸ್​ಮನ್

(IND vs SL: Suryakumar Yadav, Deepak Chahar Ruled Out of T20I Series)